Saturday, April 6, 2024

ದ್ವಿಚಕ್ರ ವಾಹನಕ್ಕೆ ಪಿಕಪ್ ಢಿಕ್ಕಿ ; ಸವಾರ ಸ್ಥಳದಲ್ಲೇ ಸಾವು, ಮತ್ತೊಬ್ಬ ಗಂಭೀರ

ಬೆಳ್ತಂಗಡಿ: ದ್ವಿಚಕ್ರ ವಾಹನ ಹಾಗೂ ಪಿಕಪ್ ನಡುವೆ ಸಂಭವಿಸಿದ ಅಪಘಾತದಲ್ಲಿ ಪೈಂಟರ್ ವೃತ್ತಿ ನಿರ್ವಹಿಸುತ್ತಿದ್ದ ಯುವಕ ಸ್ಥಳದಲ್ಲೇ ಸಾವನ್ನಪ್ಪಿ ಮತ್ತೋರ್ವ ಸಹ ಸವಾರ ಗಂಭೀರ ಗಾಯಗೊಂಡ ಘಟನೆ ಹಳೇಕೋಟೆ ಬಳಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ರಾಘವೇಂದ್ರ ನಗರ ನಿವಾಸಿ ದಿ.ಜಯರಾಮ್ ಮತ್ತು ಜಯಂತಿ ದಂಪತಿಗಳ ದ್ವಿತೀಯ ಪುತ್ರ ಪುರುಷೋತ್ತಮ ಸ್ಥಳದಲ್ಲೇ ಸಾವನ್ನಪ್ಪಿದ್ದು ಮತ್ತೋರ್ವ ಸಹಸವಾರ ಲಾಯಿಲ ಗ್ರಾಮದ ರಾಘವೇಂದ್ರ ನಗರದ ತೌಶೀಫ್ ಮಗ ತೌಫೀಕ್  ಗಂಭೀರ ಗಾಯಗೊಂಡಿದ್ದಾನೆ.

ಗುರುವಾಯನಕೆರೆ ಕಡೆಯಿಂದ ಬೆಳ್ತಂಗಡಿಯತ್ತ ಹೋಗುತಿದ್ದ ದ್ವಿಚಕ್ರ ವಾಹನಕ್ಕೆ ಎದುರಿನಿಂದ ಬರುತಿದ್ದ ಪಿಕಪ್ ವಾಹನ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಮಗುಚಿ ಬಿದ್ದು ಸವಾರರಿಬ್ಬರೂ ರಸ್ತೆಗೆಸೆಯಲ್ಪಟ್ಟು ಪುರುಷೋತ್ತಮ ಮೃತಪಟ್ಟಿದ್ದು, ತೌಫೀಕ್ ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ

More from the blog

ಬೆಳ್ತಂಗಡಿ: ಆನ್ ಲೈನ್ ಮೂಲಕ ಸಾಲ ನೀಡುವುದಾಗಿ ನಂಬಿಸಿ ವಂಚನೆ : ದೂರು ದಾಖಲು

ಬೆಳ್ತಂಗಡಿ: ಮಹಿಳೆಯೊಬ್ಬರಿಗೆ ಫೇಸ್‌ಬುಕ್‌ ಆಪ್‌ ಮೂಲಕ ಸಾಲ ನೀಡುವುದಾಗಿ ಅಪರಿಚಿತರರು ನಂಬಿಸಿ ವಂಚನೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದಲ್ಲಿ ನಡೆದಿದೆ. ವಂಚನೆಗೊಳಗಾದ ಮಹಿಳೆ ನೆಬಿಸಾ ಅವರು ಈ ಬಗ್ಗೆ ವೇಣೂರು ಪೋಲಿಸ್‌...

ಜಿಲ್ಲಾ ಕಾಂಗ್ರೇಸ್ ಹಿಂದುಳಿದ ವರ್ಗದ ಉಪಾಧ್ಯಕ್ಷ ಪದ್ಮನಾಭ ಸೇವಂತ ಅವರದು, ಆತ್ಮಹತ್ಯೆಯಲ್ಲ, ವ್ಯವಸ್ಥಿತ ಕೊಲೆ ಶಂಕೆ: ಪ್ರಕಾಶ್ ಶೆಟ್ಟಿ ತನಿಖೆಗೆ ಒತ್ತಾಯ

ಬಂಟ್ವಾಳ: ದ.ಕ.ಜಿಲ್ಲಾ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಪದ್ಮನಾಭ‌ ಸೇವಂತ ಎಂಬವರ ಸಾವಿನ ಸುತ್ತ ಅನುಮಾನಗಳು ವ್ಯಕ್ಯವಾಗಿದ್ದು, ಮೇಲ್ನೋಟಕ್ಕೆ ಇದೊಂದು ಆತ್ಮಹತ್ಯೆ ಪ್ರಕರಣ ಎಂದು ಕಂಡು ಬಂದರೂ ಇದನ್ನು ವಿಮರ್ಶೆ ಮಾಡಿದರೆ ಇದೊಂದು ಕೊಲೆ...

ನಾಪತ್ತೆಯಾಗಿದ್ದ ಸರಕಾರಿ ಅಧಿಕಾರಿಯ ಮೃತದೇಹ ಪಟ್ರಮೆ ಸಮೀಪದ ನದಿಯಲ್ಲಿ ಪತ್ತೆ

ಬಂಟ್ವಾಳ: ಕಳೆದ ಆರು‌ ದಿನಗಳ‌ ಹಿಂದೆ ಕಾಣೆಯಾಗಿದ್ದ ಸರಕಾರಿ ಆದಿಕಾರಿಯೋರ್ವನ‌ ಮೃತದೇಹ ಇಂದು ಸಂಜೆ ಧರ್ಮಸ್ಥಳ ಪೋಲೀಸ್ ಠಾಣಾ ವ್ಯಾಪ್ತಿಯ ಪಟ್ರಮೆ ಎಂಬಲ್ಲಿ ನದಿಯಲ್ಲಿ ಪತ್ತೆಯಾಗಿದೆ. ಚುನಾವಣಾ ಕರ್ತವ್ಯದಲ್ಲಿರುವ ಸರಕಾರಿ ಅಧಿಕಾರಿ ಲಕ್ಮೀನಾರಾಯಣ ಅವರು...

ಪ್ರಾಣಿಗಳಿಗೆ ವಿಷವಿಕ್ಕಿದ ದುರುಳರು : 10 ಕ್ಕೂ ಅಧಿಕ ಸಾಕು, ಬೀದಿ ನಾಯಿಗಳ ಸಾವು

ಬೆಳ್ತಂಗಡಿ: ಮುಂಡಾಜೆ ಗ್ರಾಮದ ಸೋಮಂತಡ್ಕದ ಅಗರಿ- ಹುರ್ತಾಜೆ ರಸ್ತೆಯಲ್ಲಿ ಯಾರೋ ದುಷ್ಕರ್ಮಿಗಳು ವಿಷವಿಕ್ಕಿದ ಪರಿಣಾಮ 10ಕ್ಕಿಂತ ಅಧಿಕ ಸಾಕು ನಾಯಿ ಹಾಗೂ ಬೀದಿ ನಾಯಿಗಳು ಸಾವನ್ನಪ್ಪಿದ ಘಟನೆ ನಡೆದಿದೆ. ಮಾ. 30 ರ ಶನಿವಾರ...