ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯ ದಿನಾಂಕ ನಿಗದಿಯಾಗಿದ್ದು, ರಾಜ್ಯದಲ್ಲಿ 2 ಹಂತದಲ್ಲಿ ಮತದಾನ ನಡೆಯಲಿದೆ. ಹೀಗಾಗಿ ರಾಜ್ಯದಲ್ಲಿ ಚುನಾವಣೆಯ ಎರಡೂ ದಿನವೂ ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ.
ರಾಜ್ಯದಲ್ಲಿ ಮೊದಲ ಹಂತದ ಮತದಾನ ಏಪ್ರಿಲ್ 26 ರಂದು ನಡೆಯಲಿದೆ. ಹಾಗೂ ಎರಡನೇ ಹಂತದ ಮತದಾನವು ಮೇ 7 ರಂದು ನಡೆಯಲಿದೆ. ಮತದಾನ ನದೆಯುವ ಈ ಎರಡೂ ದಿನಗಳಂದು ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು, ಎಲ್ಲಾ ವ್ಯವಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು ಹಾಗೂ ಇನ್ನಿತರ ಸಂಸ್ಥೆಗಳಲ್ಲಿ ಖಾಯಂ ಆಗಿ ಹಾಗೂ ದಿನಗೂಲಿ ಮೇಲೆ ಕೆಲಸ ನಿರ್ವಹಿಸುವ ನೌಕರರಿಗೆ ವೇತನ ಸಹಿತ ರಜೆ ಘೋಷಿಸಿರುವುದಾಗಿ ಸರ್ಕಾರದ ಅಧೀನ ಕಾರ್ಯದರ್ಶಿ ಪ್ರಕಟಣೆಯಲ್ಲಿ ಹೇಳಿದ್ದಾರೆ.
ಇನ್ನು ಈ ಎರಡು ದಿನಗಳಂದು ಪ್ರತಿಯೊಬ್ಬರು ಮತದಾನ ಮಾಡಲಿ ಎಂಬ ಉದ್ದೇಶದಿಂದ ಸಾರ್ವತ್ರಿಕ ರಜೆ ಘೋಷಿಸಲಾಗಿದೆ.