Friday, April 5, 2024

ನಿಲ್ಲಿಸಿದ್ದ ಲಾರಿಗೆ ಕಾರು ಡಿಕ್ಕಿ: ಕಾರಿನಲ್ಲಿದ್ದವರು ಗಂಭೀರ

ವಿಟ್ಲ: ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರಿಯಲ್ಲಿ ಗುರುವಾರ ರಾತ್ರಿ ಮರ ಸಾಗಾಟ ಲಾರಿಗೆ ಕಾರು ಡಿಕ್ಕಿಯಾಗಿದೆ.

ಕಾರು ಲಾರಿಯ ಹಿಂಭಾಗಕ್ಕೆ ಡಿಕ್ಕಿಯಾದ ರಬ್ಬಸಕ್ಕೆ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದವರು ಗಂಭೀರಗಾಯಗೊಂಡಿದ್ದು, ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೆದ್ದಾರಿಯಲ್ಲಿ ಕೆಲವು ಹೊತ್ತು ಸಂಚಾರಕ್ಕೆ ತೊಂದರೆಯಾಗಿದೆ.
ಮಾಣಿ ಕಡೆಯಿಂದ ಬರುತ್ತಿದ್ದ ಕಾರು ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಮರದ ಲಾರಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ ಎಂದು ‌ಹೇಳಲಾಗಿದೆ .
ಘಟನೆಯಿಂದ ಎಷ್ಟು ಜನರಿಗೆ ಗಾಯವಾಗಿದೆ ಮತ್ತು ಎಲ್ಲಿಂದ ಬಂದವರು ಯಾವ ಕಡೆಗೆ ಹೋಗುವರು ಎಂಬ ಯಾವ ವಿಚಾರನು ತಿಳಿದು ಬಂದಿಲ್ಲ, ವಿಟ್ಲ ಪೋಲೀಸರಿಗೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ ‌ಎಂದು ತಿಳಿಸಿದ್ದಾರೆ.

More from the blog

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಬೆಳ್ತಂಗಡಿ: ಆನ್ ಲೈನ್ ಮೂಲಕ ಸಾಲ ನೀಡುವುದಾಗಿ ನಂಬಿಸಿ ವಂಚನೆ : ದೂರು ದಾಖಲು

ಬೆಳ್ತಂಗಡಿ: ಮಹಿಳೆಯೊಬ್ಬರಿಗೆ ಫೇಸ್‌ಬುಕ್‌ ಆಪ್‌ ಮೂಲಕ ಸಾಲ ನೀಡುವುದಾಗಿ ಅಪರಿಚಿತರರು ನಂಬಿಸಿ ವಂಚನೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದಲ್ಲಿ ನಡೆದಿದೆ. ವಂಚನೆಗೊಳಗಾದ ಮಹಿಳೆ ನೆಬಿಸಾ ಅವರು ಈ ಬಗ್ಗೆ ವೇಣೂರು ಪೋಲಿಸ್‌...

ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್ “ಹೋಟೆಲ್ ಅನ್ನಪೂರ್ಣ” ಶುಭಾರಂಭ

ಬಂಟ್ವಾಳ ತಾಲೂಕಿನ ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ಅರುಣ್ ಕುಮಾರ್, ಮಹೇಶ್ ಕುಮಾರ್, ಜನಾರ್ಧನ್ ಪೊಸೊಳಿಗೆ ಮಾಲಕತ್ವದ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್. "ಹೋಟೆಲ್ ಅನ್ನಪೂರ್ಣ" ಶುಭಾರಂಭಗೊಂಡಿತು. ಶ್ರೀ...