Friday, April 5, 2024

ಪಾರ್ಕಿಂಗ್ ಮಾಡಿದ್ದ ದ್ವಿಚಕ್ರವಾಹನ ಕಳವು

ಬಂಟ್ವಾಳ: ಪಾರ್ಕಿಂಗ್ ಮಾಡಿ ಕೆಲಸಕ್ಕೆ ಹೋಗಿದ್ದ ವ್ಯಕ್ತಿಯೋರ್ವರ ದ್ವಿಚಕ್ರವಾಹನವೊಂದು ಕಳವಾದ ಘಟನೆ ಬಿಸಿರೋಡಿನ ನಗರ ಪೋಲೀಸ್ ಠಾಣಾ ಸಮೀಪವೇ ನಡೆದಿದೆ.

ವಾಮದಪದವು ಇರ್ವತ್ತೂರು ಮಣ್ಣೂರು ನಿವಾಸಿ ಕಾರ್ತಿಕ್ ಎಂಬವರಿಗೆ ಸೇರಿದ ಸ್ಕೂಟರ್ ಕಳವಾಗಿರುವ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕಾರ್ತಿಕ್ ಅವರು ಮಾ. 23 ರಂದು ಶನಿವಾರ ಬೆಳಿಗ್ಗೆ ವಾಮದಪದವು ಮನೆಯಿಂದ ಬಂದು ಬಿಸಿರೋಡಿನ ಹಳೆಯ ತಾಲೂಕು ಪಂಚಾಯತ್ ಕಟ್ಟಡ ಕೆಡವಿದ ಖಾಲಿ ಜಾಗದಲ್ಲಿ ಸ್ಕೂಟರ್ ನಿಲ್ಲಿಸಿ , ಬಡಕಬೈಲು ಎಂಬಲ್ಲಿ ಕೆಲಸದ ನಿಮಿತ್ತ ಹೋಗಿದ್ದರು.

ಕೆಲಸ ಮುಗಿಸಿ ರಾತ್ರಿ ಬಂದು ನೋಡಿದಾಗ ಸ್ಕೂಟರ್ ನಿಲ್ಲಿಸಿದ ಜಾಗದಲ್ಲಿರದೆ ಕಾಣೆಯಾಗಿದ್ದು, ಕಳವಾಗಿರುವ ಸಂಶಯವನ್ನು ವ್ಯಕ್ತಪಡಿಸಿ, ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಸ್ಕೂಟರ್ ನ‌ ಅಂದಾಜು‌ ಮೌಲ್ಯ 55 ಸಾವಿರ ಆಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಪೊಲೀಸ್ ಠಾಣೆಯ ಸನಿಹದಲ್ಲೇ ‌ಕಳವು

ಕಳೆದ ಕೆಲವು ಸಮಯಗಳಿಂದ ನಿರಂತರವಾಗಿ ವಾಹನಗಳ ಕಳವು ನಡೆಯುತ್ತಿದ್ದು, ವಾಹನ ಸವಾರರು ಪಾರ್ಕ್ ಮಾಡಿ ತೆರಳಲು ಹೆದರುತ್ತಿದ್ದಾರೆ.

ಬಿಸಿರೋಡಿನ ಪ್ಲೈ ಓವರ್ ಅಡಿಭಾಗದಲ್ಲಿ ಅನೇಕ ವಾಹನಗಳು ಕಳವಾಗಿದ್ದು, ಇನ್ನೂ ಬಹುತೇಕ ವಾಹನಗಳ ಪತ್ತೆ ಕಾರ್ಯ ನಡೆಯದೆ ಕಗ್ಗಂಟಾಗಿ ಉಳಿದಿರುವುದು ಆತಂಕಕ್ಕೆ ಕಾರಣವಾಗಿದೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ.

ಅದರಲ್ಲೂ ಪೋಲೀಸ್ ಠಾಣೆಯ ಕೂಗಳತೆಯ ದೂರದಲ್ಲಿ ವಾಹನಗಳ ಕಳವು ನಡೆಯುವುತ್ತಿರುವುದು ಸಾರ್ವಜನಿಕ ವಲಯದಲ್ಲಿ ಒಂದಷ್ಟು ಆತಂಕ ವ್ಯಕ್ತವಾಗಿದೆ.

ನಗರ ಪ್ರದೇಶದಲ್ಲಿ ಅಲ್ಲಲ್ಲಿ ಸಿ.ಸಿ.ಕ್ಯಾಮರಾ ಅಳವಡಿಕೆಯಾಗಿದ್ದರೂ ಕೂಡ ಕ್ಯಾಮರಾದ ಕಣ್ತಪ್ಪಿಸಿ ಕಳವು ಮಾಡುವ ಕಳ್ಳರ ಕೈಚಳಕದ ಬಗ್ಗೆ ಪೋಲೀಸ್ ಇಲಾಖೆ ಸರಿಯಾದ ಕ್ರಮಗೊಳ್ಳಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

More from the blog

ಕಲ್ಲಡ್ಕ: ಖಾಸಗಿ ಬಸ್ಸಿಗೆ ಪಿಕಪ್ ಢಿಕ್ಕಿ: ಹಲವರಿಗೆ ಗಾಯ

ವಿಟ್ಲ: ವಿಟ್ಲ ಕಲ್ಲಡ್ಕ ರಸ್ತೆಯ ಗೋಳ್ತಮಜಲು ಎಂಬಲ್ಲಿ ಬಸ್ಸಿಗೆ ಪಿಕಪ್ ಮುಖಾಮುಖಿ ಢಿಕ್ಕಿಯಾಗಿ ಹಲವರು ಗಾಯಗೊಂಡಿದ್ದಾರೆ. ವಿಟ್ಲ ಕಡೆಗೆ ಕಾಂಕ್ರೀಟ್ ಮಿಕ್ಸರ್ ಯಂತ್ರವನ್ನು ಒಯ್ಯುತ್ತಿದ್ದ ಪಿಕಪ್ ಆಕಸ್ಮಿಕವಾಗಿ ವಿಟ್ಲದಿಂದ ಮಂಗಳೂರಿಗೆ ಸಾಗುತ್ತಿದ್ದ ಖಾಸಗಿ ಬಸ್ಸಿಗೆ...

ವಿಟ್ಲ : ಮಹಿಳೆ ಆತ್ಮಹತ್ಯೆ

ವಿಟ್ಲ: ವಿಟ್ಲಪಡ್ನೂರು ಗ್ರಾಮದ ಕುಂಟುಕುಡೇಲು ಕಾಪಿಕಾಡು ನಿವಾಸಿ ಮಹಿಳೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಿ.ರಾಮಣ್ಣ ನಾಯ್ಕ ಅವರ ಪತ್ನಿ ಸುಶೀಲಾ ಅವರು ಮನೆ ಸಮೀಪದ ಗುಡ್ಡದಲ್ಲಿ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ಮುಂಭಾಗದಲ್ಲಿ ನೀರಿಗಾಗಿ ಪ್ರತಿಭಟನೆ 

ವಿಟ್ಲ: ವಿಟ್ಲ ಮುಡ್ನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ೩ನೇ ವಾರ್ಡ್‌ನಲ್ಲಿ ಕುಡಿಯುವ ನೀರಿನ ಸಮಸ್ಯೆಯಿದ್ದು, ಜನಪ್ರತಿನಿಧಿಗಳು ಹಾಗೂ ಗ್ರಾಮ ಪಂಚಾಯಿತಿ ಯಾವುದೇ ಸ್ಪಂದನೆ ನೀಡುತ್ತಿಲ್ಲ ಎಂದು ಆರೋಪಿಸಿ ಗ್ರಾಮಸ್ಥರು ಕೊಡ, ಬಕೆಟ್ ಹಿಡಿದು...

ಜಿಲ್ಲಾ ಕಾಂಗ್ರೇಸ್ ಹಿಂದುಳಿದ ವರ್ಗದ ಉಪಾಧ್ಯಕ್ಷ ಪದ್ಮನಾಭ ಸೇವಂತ ಅವರದು, ಆತ್ಮಹತ್ಯೆಯಲ್ಲ, ವ್ಯವಸ್ಥಿತ ಕೊಲೆ ಶಂಕೆ: ಪ್ರಕಾಶ್ ಶೆಟ್ಟಿ ತನಿಖೆಗೆ ಒತ್ತಾಯ

ಬಂಟ್ವಾಳ: ದ.ಕ.ಜಿಲ್ಲಾ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಪದ್ಮನಾಭ‌ ಸೇವಂತ ಎಂಬವರ ಸಾವಿನ ಸುತ್ತ ಅನುಮಾನಗಳು ವ್ಯಕ್ಯವಾಗಿದ್ದು, ಮೇಲ್ನೋಟಕ್ಕೆ ಇದೊಂದು ಆತ್ಮಹತ್ಯೆ ಪ್ರಕರಣ ಎಂದು ಕಂಡು ಬಂದರೂ ಇದನ್ನು ವಿಮರ್ಶೆ ಮಾಡಿದರೆ ಇದೊಂದು ಕೊಲೆ...