Saturday, April 13, 2024

ಮತದಾರರ ಜಾಗೃತಿ ಕಾರ್ಯಕ್ರಮ, ಕಾಲ್ನಡಿಗೆ ಜಾಥಾ ಹಾಗೂ ಬೀದಿನಾಟಕ

ತಾಲೂಕು ಪಂಚಾಯತ್‌ ಬಂಟ್ವಾಳ, ತಾಲೂಕು ಸ್ವೀಪ್‌ ಸಮಿತಿ, ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಬಂಟ್ವಾಳ ಪುರಸಭೆ, ರಾಷ್ಟ್ರೀಯ ಸೇವಾ ಯೋಜನೆ, ಮತದಾರರ ಸಾಕ್ಷರತಾ ಸಂಘ, ಕಾರ್ಮೆಲ್‌ ಕಾಲೇಜು ಮೊಡಂಕಾಪು ಇದರ ಸಹಭಾಗಿತ್ವದಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ, ಕಾಲ್ನಡಿಗೆ ಜಾಥಾ ಹಾಗೂ ಬೀದಿನಾಟಕ ನಡೆಯಿತು.

ಕೈಕಂಬ ದ್ವಾರದ ಬಳಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್‌ ಕಾಂಬಳೆ, ಯಾವುದೇ ಆಮೀಷಕ್ಕೆ ಒಳಗಾಗದೇ ಪ್ರತಿಯೊಬ್ಬರೂ ಮತದಾನ ಮಾಡಬೇಕು ಎಂದು ಹೇಳಿದರು.

ಜಾಥಾವು ಕೈಕಂಬ ದ್ವಾರದಿಂದ ಬಿ.ಸಿ.ರೋಡ್‌ ಬಸ್‌ನಿಲ್ದಾಣದವರೆಗೆ ನಡೆಯಿತು. ರಂಗಭೂಮಿ ಕಲಾವಿದ ಮೌನೇಶ್‌ ವಿಶ್ವಕರ್ಮ ಮಾರ್ಗದರ್ಶನದಲ್ಲಿ ಕಾರ್ಮೆಲ್‌ ಕಾಲೇಜು ವಿದ್ಯಾರ್ಥಿಗಳು ಹಾಗೂ ಮಂಗಳೂರಿನ ಶಕ್ತಿ ರೆಸಿಡೆನ್ಸಿಯಲ್‌ ಶಾಲೆಯ ಮಕ್ಕಳಿಂದ ಮತದಾನ ಜಾಗೃತಿ ಕುರಿತು ಬೀದಿನಾಟಕ ನಡೆಯಿತು. ತಾಲೂಕು ಸ್ವೀಪ್‌ ತರಬೇತುದಾರೆ ಸುರೇಖಾ ಕಾರ್ಯಕ್ರಮ ನಿರೂಪಿಸಿದರು. ಮತದಾನ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು. ತಾಪಂ ಸಹಾಯಕ ನಿರ್ದೇಶಕ ವಿಶ್ವನಾಥ್‌ ಬಿ. ವಂದಿಸಿದರು. ಪುರಸಭೆ ಮುಖ್ಯಾಧಿಕಾರಿ ಶ್ರೀಧರ್‌, ತಾಲೂಕು ಪಂಚಾಯತ್‌ ವ್ಯವಸ್ಥಾಪಕರಾದ ಪ್ರಕಾಶ್‌, ತಾಲೂಕು ಆರೋಗ್ಯಾಧಿಕಾರಿ ಅಶೋಕ್‌ ಕುಮಾರ್‌ ರೈ, ಸ್ವೀಪ್ ಜಿಲ್ಲಾ ತರಬೇತುದಾರ ವಿಠಲ್ ನಾಯಕ್, ನಿಕಟಪೂರ್ವ ತಾಪಂ ವ್ಯವಸ್ಥಾಪಕಿ ಶಾಂಭವಿ, ಸ್ವೀಪ್‌ ಸಮಿತಿ ಸದಸ್ಯರಾದ ಚಂದ್ರಶೇಖರ್‌ ಪಾತೂರು, ಪ್ರಶಾಂತ್‌, ಪ್ರದೀಪ್‌ ಕಾಮತ್‌, ರಾಜೇಶ್‌, ತಾಪಂ ಕಾರ್ಮೆಲ್‌ ಕಾಲೇಜು ಪ್ರಾಂಶುಪಾಲೆ ಸಿಸ್ಟರ್‌ ಲತಾ, ಕಾಲೇಜು ಉಪನ್ಯಾಸಕರು, ಶಕ್ತಿ ಶಾಲಾ ಶಿಕ್ಷಕರು, ತಾಲೂಕು ಪಂಚಾಯತ್‌ ಸಿಬ್ಬಂದಿ, ಕಂದಾಯ ಇಲಾಖೆ ಸಿಬ್ಬಂದಿ, ಪುರಸಭೆ ಸಿಬ್ಬಂದಿ, ಸಂಜೀವಿನಿ ಒಕ್ಕೂಟದ ಸಿಬ್ಬಂದಿ, ಮತ್ತಿತರರು ಹಾಜರಿದ್ದರು.

More from the blog

ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಖಂಡನೀಯ-ಜಗದೀಶ್ ಕೊಯಿಲ

ಬಂಟ್ವಾಳ: ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಮಾಡಿದ್ದು ಖಂಡನೀಯ ಎಂದು ಜಗದೀಶ್ ಕೊಯಿಲ ತಿಳಿಸಿದ್ದಾರೆ. ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ರಾಷ್ಟ್ರೀಯ...

ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಬೈಕ್ : ಮೂವರಿಗೆ ಗಾಯ

ಬಂಟ್ವಾಳ: ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಬೈಕಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬರುತ್ತಿದ್ದ ಕೆ.ಎಸ್.ಆರ್.ಟಿ‌.ಸಿ.ಬಸ್ ಗೆ ಹೆಲ್ಮೆಟ್ ಧರಿಸಿದೆ...

ಮನೆ ಮನೆಗೆ ತೆರಳಿ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಪರ ಮತಯಾಚನೆ

ನಮ್ಮ ಬೂತ್ ನಮ್ಮ ಹೊಣೆ ಘೋಷನೇಯಂತೆ ಬೂತ್ ಸಂಖ್ಯೆ 126 ವಾರ್ಡ್ 12 ರ ಅಜ್ಜೀಬೆಟ್ಟು ನಲ್ಲಿ ಮನೆ ಮನೆಗೆ ತೆರಲಿ ಲೋಕ ಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿಯವರ ಪರವಾಗಿ ಮತ ಯಾಚನೆ...

ಜಮೀನಿನ ವಿಚಾರದಲ್ಲಿ ತಕರಾರು ನಡೆಸಿ ಹಲ್ಲೆ ಪ್ರಕರಣ : ಶಿಕ್ಷೆ ಪ್ರಕಟ

ಬಂಟ್ವಾಳ: ಜಮೀನಿನ ವಿಚಾರದಲ್ಲಿ ತಕರಾರು ಉಂಟಾಗಿ ಹಲ್ಲೆ ನಡೆಸಿದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಶಿಕ್ಷೆ ಪ್ರಕಟಗೊಳಿಸಿದ ಬಗ್ಗೆ ವರದಿಯಾಗಿದೆ. ದೇವಸ್ಯ ಪಡೂರು ಗ್ರಾಮ,ಕುಟ್ಟಿಕಳ ,ಅಲ್ಲಿಪಾದೆ ಎಂಬಲ್ಲಿ ನೀಲಯ್ಯ ಮೂಲ್ಯ ಹಾಗೂ ಶ್ರೀನಿವಾಸ್ ಪೂಜಾರಿ ರವರಿಗೆ...