Wednesday, April 10, 2024

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ.

ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ. ಪರೀಕ್ಷೆಗೆ ಹಾಜರಾದ ಒಟ್ಟು ವಿದ್ಯಾರ್ಥಿಗಳ ಪೈಕಿ 552690 ಮಂದಿ ತೇರ್ಗಡೆಯಾಗಿದ್ದಾರೆ. 11 ಗಂಟೆಗೆ ಅಧಿಕೃತ ವೆಬ್​​ಸೈಟ್​ನಲ್ಲಿ ಫಲಿತಾಂಶ ಪ್ರಕಟವಾಗುತ್ತಿದ್ದು, ವಿದ್ಯಾರ್ಥಿಗಳು ಲಾಗಿನ್ ಕ್ರೆಡೆನ್ಶಿಯಲ್ಸ್ ನಮೂದಿಸುವ ಮೂಲಕ ಪಿಯು ಮಂಡಳಿಯ ಅಧಿಕೃತ ವೆಬ್‌ಸೈಟ್ karresults.nic.in ಮತ್ತು pue.kar.nic ಮೂಲಕ ದ್ವಿತೀಯ ಪಿಯು ಫಲಿತಾಂಶಗಳನ್ನು ಪರಿಶೀಲಿಸಬಹುದಾಗಿದೆ.

ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 1,74,315 ವಿದ್ಯಾರ್ಥಿಗಳು ಪಾಸಾಗಿದ್ದರೆ, ವಿಜ್ಞಾನ ವಿಭಾಗದಲ್ಲಿ 2,49,927 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ದಕ್ಷಿಣ ಕನ್ನಡ ಟಾಪ್

ದ್ವಿತೀಯ ಪಿಯು ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ ದೊರೆತಿದೆ. ಶೇ 97ರಷ್ಟು ತೇರ್ಗಡೆಯೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಮೊದಲ ಸ್ಥಾನ ಪಡೆದಿದೆ. ಶೇ 96.80 ರಷ್ಟು ಮಂದಿ ಉತ್ತೀರ್ಣರಾಗುವುದರೊಂದಿಗೆ ಉಡುಪಿ ಜಿಲ್ಲೆ ಎರಡನೇ ಸ್ಥಾನದಲ್ಲಿದೆ. ಶೇ 94.89ರಷ್ಟು ಫಲಿತಾಂಶದೊಂದಿಗೆ ವಿಜಯಪುರ ಜಿಲ್ಲೆ 3ನೇ ಸ್ಥಾನದಲ್ಲಿದೆ. ಫಲಿತಾಂಶದಲ್ಲಿ ಗದಗ ಜಿಲ್ಲೆಗೆ ಕೊನೆಯ ಸ್ಥಾನ ದೊರೆತಿದೆ.

More from the blog

ದ.ಕ. ಉಡುಪಿ ಜಿಲ್ಲೆಗೆ ಇಂದು ರಜೆ ಘೋಷಣೆ : ನಿಗದಿತ ವೇಳಾಪಟ್ಟಿಯಂತೆ ಪರೀಕ್ಷೆ

ಮಂಗಳೂರು: ಈದ್ ಉಲ್-ಫಿತರ್ ಪ್ರಯುಕ್ತ ಏಪ್ರಿಲ್ 10ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಾರ್ವಜನಿಕ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯಿಂದ ಅಧಿಕೃತ ಆದೇಶ ಹೊರಡಿಸಲಾಗಿದ್ದು, ರಾಜ್ಯ ಸರ್ಕಾರದ...

ಏ.10ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ…. ರಿಸಲ್ಟ್​ ಚೆಕ್ ಮಾಡೋದು ಹೇಗೆ?

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತಿದೆ. ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾದ ಹಿನ್ನಲೆ ನಾಳೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಾಗಿದೆ. ನಾಳೆ...

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ : ಇವತ್ತಿನ ‌ಬೆಲೆ ಎಷ್ಟು ಗೊತ್ತಾ…?

ಯುಗಾದಿ ಹಬ್ಬ. ಇದು ಸಂಬಂಧ ಬೆಸೆಯುವ ಹಬ್ಬ. ಅಂದಹಾಗೆಯೇ ದೇಶದಾದ್ಯಂತ ಜನರು ಇಂದು ಸಂಭ್ರಮದಲ್ಲಿದ್ದಾರೆ. ಆದರೆ ಇದರ ನಡುವೆ ಚಿನ್ನದ ಬೆಲೆ ಏರಿಕೆಯ ಬಿಸಿಯಿಂದ ಕೊಂಚ ಬೇಸರವು ಅವರಲ್ಲಿ ಆವರಿಸಿದೆ. ಕಳೆದ ಎರಡು ದಿನಗಳ...

300 ರೂ. ಗಡಿಯತ್ತ ಹಸಿ ಕೊಕ್ಕೊ… 900 ರೂ. ಗಡಿಯತ್ತ ಒಣ ಕೊಕ್ಕೊ

ಪುತ್ತೂರು: ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಹಸಿ ಕೊಕ್ಕೊ, ಒಣ ಕೊಕ್ಕೊ ಧಾರಣೆ ಮತ್ತಷ್ಟು ಜಿಗಿದಿದ್ದು, ಹೊರ ಮಾರುಕಟ್ಟೆಯಲ್ಲಿಯೂ ಅತ್ಯಧಿಕ ದರ ದಾಖಲಾಗಿದೆ. ಒಣ ಕೊಕ್ಕೊ 900 ರೂ. ಗಡಿಯತ್ತ, ಹಸಿ ಕೊಕ್ಕೊ 300 ರೂ....