Wednesday, April 17, 2024

ಕುಡಿದ ಮತ್ತಿನಲ್ಲಿ ರೈಲ್ವೆ ಗೇಟ್ ಗೆ ಡಿಕ್ಕಿ ಹೊಡೆದು ಆವಾಂತರ ಸೃಷ್ಟಿಸಿದ ಮನೋರೋಗ ತಜ್ಞ

ಮಂಗಳೂರಿನ ಹೆಸರಾಂತ ಮನೋರೋಗ ತಜ್ಞರೊಬ್ಬರು ಕುಡಿದ ಮತ್ತಿನಲ್ಲಿ ರೈಲ್ವೆ ಗೇಟ್ ಗೆ ಡಿಕ್ಕಿ ಹೊಡೆದು ಆವಾಂತರ ಸೃಷ್ಟಿಸಿದ ಘಟನೆ ನಗರ ಹೊರ ವಲಯದ ಪರಂಗಿಪೇಟೆ ಬಳಿಯ ಅರ್ಕುಳ ಎಂಬಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ.

ಕುಡಿದ ಮತ್ತಿನಲ್ಲಿ ಅತಿ ವೇಗವಾಗಿ ಕಾರು ಚಲಾಯಿಸಿಕೊಂಡು ಬಂದ ವೈದ್ಯರು ರೈಲ್ವೆ ಗೇಟ್ ಗೆ ಡಿಕ್ಕಿ ಹೊಡೆದಿದ್ದಾರೆ. ಈ ವೇಳೆ ನೆರವು ನೀಡಲು ಸ್ಥಳಕ್ಕೆ ಆಗಮಿಸಿದ ಸ್ಥಳೀಯರನ್ನು ಕುಡಿದ ಮತ್ತಿನಲ್ಲಿ ವೈದ್ಯರು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂಬ ಆರೋಪಗಳಿವೆ. ಘಟನೆಯ ವೇಳೆ ಮಾನಸಿಕ ಸ್ವಾಸ್ಥ್ಯ ಕಳೆದುಕೊಂಡವರಂತೆ ವರ್ತಿಸಿದ ಈ ಮನೋರೋಗ ತಜ್ಞರ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕುಡಿದು ರೈಲ್ವೆ ಗೇಟ್ ಗೆ ಡಿಕ್ಕಿ ಹೊಡೆದ ಪ್ರಕರಣವನ್ನು ಮುಚ್ಚಿ ಹಾಕಲು ರೈಲ್ವೆ ಮತ್ತು ಪೊಲೀಸ್ ಅಧಿಕಾರಿಗಳ ಮೇಲೆ ಪ್ರಭಾವ ಬೀರಲು ವೈದ್ಯರು ಪ್ರಯತ್ನಿಸುತ್ತಿದ್ದಾರೆ. ಈ ಬಗ್ಗೆ ಸಂಬಂಧಿತ ಇಲಾಖೆಯ ಉನ್ನತ ಅಧಿಕಾರಿಗಳಿಗೆ ದೂರು ನೀಡಲು ಸ್ಥಳೀಯರು ನಿರ್ಧರಿಸಿದ್ದಾರೆ.

More from the blog

ಬಂಟ್ವಾಳದ ಕರ್ಪೆ ಗ್ರಾಮದಲ್ಲಿ ಮನೆಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವಂತೆ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹಾಗೂ ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಕಾರ್ಯಕ್ರಮದ ಮೂಲಕ ಬಂಟ್ವಾಳದ...

ಏ.21 ರಂದು ಆದಿದ್ರಾವಿಡ ಸಮಾಜ ಬಾಂಧವರ ಕ್ರೀಡಾಕೂಟ ಹಾಗೂ ಸಾಧಕರಿಗೆ ಸನ್ಮಾನ

ಬಂಟ್ವಾಳ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘ(ರಿ.)S74 ಇದರ ವತಿಯಿಂದ ವಿಶ್ವಜ್ಞಾನಿ ಡಾ| ಬಿ. ಆರ್ ಅಂಬೇಡ್ಕರ್ ರವರ 133ನೇ ಜನ್ಮ ದಿನಾಚರಣೆಯ ಅಂಗವಾಗಿ ಸಂಘದ ದಶಮಾನೋತ್ಸವ ಕಾರ್ಯಕ್ರಮದ ಪ್ರಯುಕ್ತ ಆದಿದ್ರಾವಿಡ ಸಮಾಜ...

ಎಸ್.ಎಸ್.ಎಲ್.ಸಿ ಮೌಲ್ಯಮಾಪನ : ನಿಷೇಧಾಜ್ಞೆ ಜಾರಿ

ಮಂಗಳೂರು: ಮಂಗಳೂರಿನ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಏಪ್ರಿಲ್ 15ರಿಂದ ಎಸ್.ಎಸ್.ಎಲ್.ಸಿ ಮುಖ್ಯ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ನಡೆಯಲಿದ್ದು, ಮೌಲ್ಯಮಾಪನ ಕಾರ್ಯವನ್ನು ಸುಸೂತ್ರವಾಗಿ ಹಾಗೂ ಪಾರದರ್ಶಕವಾಗಿ ನಡೆಸಲು ಮತ್ತು ಕಾನೂನುಬಾಹಿರ...

ಲೋಕಸಭಾ ಚುನಾವಣೆ : ಬಂಟ್ವಾಳದ ಕಳ್ಳಿಗೆ ಗ್ರಾಮದಲ್ಲಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

2024 ರ ಎ. 26 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವ ನಿಟ್ಟಿನಲ್ಲಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಎಂಬ...