Saturday, April 20, 2024

ಆಸ್ಪತ್ರೆಯಿಂದ ಆಂಬ್ಯುಲೆನ್ಸ್ ನಲ್ಲಿ ತೆರಳಿ ಸಿಇಟಿ ಪರೀಕ್ಷೆ ಬರೆದ ಆ್ಯಸಿಡ್ ದಾಳಿ ಸಂತ್ರಸ್ಥೆ ವಿದ್ಯಾರ್ಥಿನಿ

ಕಡಬ: ಆ್ಯಸಿಡ್ ದಾಳಿಗೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಡಬದ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆಂಬ್ಯುಲೆನ್ಸ್ ಮೂಲಕ ತೆರಳಿ ಸಿಇಟಿ ಪರೀಕ್ಷೆ ಬರೆದಿದ್ದಾರೆ.

ಮಾರ್ಚ್ 4ರಂದು ಕಾಲೇಜಿನಲ್ಲಿ ಪರೀಕ್ಷೆಗೆ ತಯಾರಾಗುತ್ತಿದ್ದ ವೇಳೆ ಅಬಿನ್ ಎಂಬಾತ ಆ್ಯಸಿಡ್ ಎರಚಿದ ಕಾರಣ ಮೂವರು ವಿದ್ಯಾರ್ಥಿನಿಯರಿಗೆ ಸುಟ್ಟ ಗಾಯಗಳಾಗಿತ್ತು. ಇಬ್ಬರು ಸಹಪಾಠಿಗಳು 12% ಮತ್ತು 10% ಸುಟ್ಟಗಾಯಗಳಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಡಿಸ್ಟಾರ್ಜ್ ಆಗಿದ್ದಾರೆ. ಇನ್ನು ಸಂತ್ರಸ್ಥೆ 17ವರ್ಷದ ಯುವತಿಗೆ 20% ಸುಟ್ಟಗಾಯಗಳಾಗಿದ್ದವು. ಈಕೆ ಇನ್ನೂ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈಕೆ ತನ್ನ ತಾಯಿಯೊಂದಿಗೆ ಐಸೋಲೇಶನ್ ವಾರ್ಡ್ ನಲ್ಲಿ ಇದ್ದುಕೊಂಡೇ ಸಿಇಟಿಗೆ ತಯಾರಿ ನಡೆಸುತ್ತಿದ್ದರು. ಸಿಇಟಿಗಾಗಿ ಈಕೆ ಮತ್ತು ಇಬ್ಬರು ಸಹಪಾಠಿಗಳಿಗೆ ಪುತ್ತೂರಿನಲ್ಲಿ ಪರೀಕ್ಷಾ ಕೇಂದ್ರ ನಿಗದಿಯಾಗಿತ್ತು.

ಆದರೆ ಚಿಕಿತ್ಸೆ ವೇಳೆ ದೂರದ ಪ್ರಯಾಣ ಮಾಡದಂತೆ ಬಾಲಕಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಸಲಹೆ ನೀಡಿದ್ದ ಕಾರಣ ದ.ಕ ಜಿಲ್ಲಾ ಪದವಿ ಪೂರ್ವ ಇಲಾಖೆಯ ಉಪನಿರ್ದೇಶಕರು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಅವರ ಗಮನಕ್ಕೆ ತಂದಿದ್ದರು. ಹೀಗಾಗಿ ಮಂಗಳೂರಿನ ಆಸ್ಪತ್ರೆಯಿಂದ ಸುಮಾರು ಒಂದು ಕಿ.ಮೀ ದೂರದಲ್ಲಿರುವ ಪದವಿಪೂರ್ವ ಕಾಲೇಜುನಲ್ಲಿ ಈಕೆಗೆ ಸಿಇಟಿ ಬರೆಯಲು ರಮ್ಯಾ ಅವರು ಅನುಮತಿ ನೀಡಿದ್ದರು.

ಅದರಂತೆ ವಿದ್ಯಾರ್ಥಿನಿ ಸಿಇಟಿ ಕೇಂದ್ರಕ್ಕೆ ತನ್ನ ತಾಯಿಯೊಂದಿಗೆ ಆಂಬ್ಯುಲೆನ್ಸ್ ನಲ್ಲಿ ಬಂದಿದ್ದು ಆಕೆಗೆ ಪ್ರತ್ಯೇಕ ತರಗತಿಯನ್ನು ನೀಡಲಾಗಿತ್ತು. ಅಲ್ಲಿ ಮೊದಲ ದಿನ ಜೀವಶಾಸ್ತ್ರ ಪರೀಕ್ಷೆ ಬರೆದು ಬಳಿಕ ಮಧ್ಯಾಹ್ನ 12.15ಕ್ಕೆ ಆಸ್ಪತ್ರೆಗೆ ಮರಳಿ 2.30 ವಾಪಸ್ ಬಂದು ಗಣಿತ ಪರೀಕ್ಷೆ ಬರೆದಿದ್ದಾರೆ .ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ವಿಷಯದ ಪರೀಕ್ಷೆಗಳನ್ನು ಶುಕ್ರವಾರ ಬರೆದಿದ್ದಾರೆ.

ಆ್ಯಸಿಡ್‌ ದಾಳಿಯಿಂದ ಸಂತ್ರಸ್ತರಾಗಿರುವ ಮೂವರು ವಿದ್ಯಾರ್ಥಿನಿಯರೂ ಏ.29ರಂದು ಪ್ರಾರಂಭವಾಗುವ ಪಿಯುಸಿ ಮರು ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದಾರೆ. ವೈದ್ಯರ ಸಲಹೆಯಂತೆ ಇಲಾಖೆಯು ಮರು ಪರೀಕ್ಷೆಗೆ ಹಾಜರಾಗಲು ಅನುಕೂಲವಾಗುವಂತೆ ಎಲ್ಲಾ ಕ್ರಮಗಳನ್ನು ಕೈಗೊಂಡಿದೆ ಎಂದು ಪದವಿ ಪೂರ್ವ ಇಲಾಖೆಯ ಉಪನಿರ್ದೇಶಕ ಜಯಣ್ಣ ಸಿ.ಡಿ. ಮಾಹಿತಿ ನೀಡಿದ್ದಾರೆ.

More from the blog

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

ದಕ್ಷಿಣ ಕನ್ನಡ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರು ಭೇಟಿ ನೀಡಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಮಾಲೋಚನಾ...

ಜನಪರವಾದ ಕೆಲಸ ಮಾಡದ ಬಿಜೆಪಿಗೆ ಸೋಲು ಖಚಿತ-ಚಾಮರಸ ಮಾಲೀಪಾಟೀಲ್

ಬಂಟ್ವಾಳ: 2024 ರ ಚುನಾವಣೆಯಲ್ಲಿ ಬಿಜೆಪಿ ಹಾಗೂ ಮಿತ್ರಪಕ್ಷವನ್ನು ಸೋಲಿಸುವ ತೀರ್ಮಾನವನ್ನು ಕರ್ನಾಟಕ ರಾಜ್ಯ ರೈತ ಸಂಘ ಮಾಡಿದ್ದು, ಈ ದೃಷ್ಟಿಯಿಂದ ರೈತರ ಮನವೊಲಿಸುವ ಕಾರ್ಯದಲ್ಲಿ ತೊಡಗಿದ್ದೇವೆ, ಈ ಬಾರಿ ಬಿಜೆಪಿ ನೆಲಕಚ್ಚುವುದು...

ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ಭೇಟಿ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 17-ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ರವರು ದಿನಾಂಕ 19-04-2024 ರಂದು ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಭೇಟಿ ನೀಡಿದರು. ಸೂಕ್ಷ್ಮ ಮತಗಟ್ಟೆಗಳಿರುವ ಪ್ರದೇಶಗಳಿಗೆ...

ಏ.21ರಂದು ನಮ್ಮ ನಡೆ ಮತಗಟ್ಟೆಯ ಕಡೆ ಅಭಿಯಾನ

ಮತದಾರರನ್ನು ಮತಗಟ್ಟೆಗೆ ಸೆಳೆಯುವ ಸಲುವಾಗಿ ಚುನಾವಣಾ ಆಯೋಗ ಸ್ವೀಪ್ ಕಾರ್ಯಕ್ರಮದ ಮೂಲಕ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಅದರಂತೆ ಎ.21ರಂದು ಎಲ್ಲಾ ಬೂತ್ ಮತಗಟ್ಟೆಗಳಲ್ಲಿ ನಮ್ಮ ನಡೆ ಮತಗಟ್ಟೆಯ ಕಡೆ ಅಭಿಯಾನ ಹಮ್ಮಿಕೊಂಡಿದ್ದು, ಬಂಟ್ವಾಳ...