Wednesday, April 17, 2024

ಅಯೋಧ್ಯೆಯಲ್ಲಿ ಅದ್ಧೂರಿ ರಾಮನವಮಿ ; ರಾಮಲಲ್ಲಾ ಹಣೆ ಮೇಲೆ ಸೂರ್ಯ ತಿಲಕ

ಅಯೋಧ್ಯೆ: ಬರೋಬ್ಬರಿ 500 ವರ್ಷಗಳ ಬಳಿಕ ಅಯೋಧ್ಯೆಯಲ್ಲಿ ಮೊದಲ ಶ್ರೀರಾಮನವಮಿಯನ್ನು ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತಿದೆ.

ಮೊದಲ ರಾಮನವಮಿಯಂದು ರಾಮಲಲ್ಲಾನಿಗೆ ಸೂರ್ಯನ ತಿಲಕ ಸ್ಪರ್ಶಿಸಿದ್ದು, ಸೂರ್ಯವಂಶಸ್ಥನಿಗೆ ಸೂರ್ಯನ ಅಭಿಷೇಕ ನೆರವೇರಿಸಲಾಗಿದೆ.

ರಾಮನವಮಿ ಅಂಗವಾಗಿ ಮಧ್ಯಾಹ್ನ 12 ಗಂಟೆಗೆ ಸರಿಯಾಗಿ 4 ನಿಮಿಷಗಳ ಕಾಲ ಬಾಲರಾಮನ ಮೂರ್ತಿಗೆ ಸೂರ್ಯ ತಿಲಕ ಸ್ಪರ್ಶಿಸಿದ್ದು, ರಾಮನ ಭಕ್ತರ ಸಂಭ್ರಮ ಮುಗಿಲು ಮುಟ್ಟಿದೆ.

ಅಯೋಧ್ಯೆಯಲ್ಲಿ ಇಂದು ಬೆಳಗ್ಗೆ 3.30ರಿಂದಲೇ ರಾಮನ ದರ್ಶನಕ್ಕೆ ವಿಶೇಷ ವ್ಯವಸ್ಥೆ ಮಾಡಲಾಗಿದೆ.

ಶ್ರೀರಾಮನಿಗೆ ನೈವೇದ್ಯ, ವಿಶೇಷ ಮಂಗಳಾರತಿ ನೆರವೇರಿಸುವಾಗ 5 ನಿಮಿಷ ಪರದೆ ಹಾಕಲಾಗುತ್ತಿದೆ. ಉಳಿದಂತೆ ರಾತ್ರಿ 11 ಗಂಟೆಯವರೆಗೂ ನಿರಂತರ 19 ಗಂಟೆಗಳ ಕಾಲ ಭಕ್ತರಿಗೆ ಶ್ರೀರಾಮನ ದರ್ಶನಕ್ಕೆ ವಿಶೇಷ ವ್ಯವಸ್ಥೆ ಮಾಡಲಾಗಿದೆ.

ಸಾವಿರಾರು ಭಕ್ತರು ಅಯೋಧ್ಯೆಯಲ್ಲಿ ವಿಶೇಷ ಸೂರ್ಯತಿಲಕದ ಅಪರೂಪದ ದೃಶ್ಯವನ್ನು ಕಣ್ತುಂಬಿಕೊಂಡು ಸಂತಸಗೊಂಡಿದ್ದಾರೆ.

More from the blog

ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ

ಕನ್ನಡದ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರು ನಿಧನರಾಗಿದ್ದಾರೆ. 81 ವರ್ಷದ ದ್ವಾರಕೀಶ್ ಅವರು, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ದ್ವಾರಕೀಶ್ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ಇವರು1942 ಆಗಸ್ಟ್ 19ರಂದು ಮೈಸೂರು...

ಹಿಂದೂ‌ ಸಂಘಟನೆಯ ಕಾರ್ಯಕರ್ತನಿಗೆ ಚೂರಿ ಇರಿತ

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತ ಚೂರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹಿಂದೂಯುವಸೇನೆಯ ಮುಖಂಡನಾಗಿದ್ದು, ಉದ್ಯಮಿಯಾಗಿರುವ...

ಬಾಲಿವುಡ್ ನಟ ಸಲ್ಮಾನ್​ ಖಾನ್ ಮನೆ ಮುಂದೆ ಗುಂಡಿನ ದಾಳಿ

ಮುಂಬೈ: ಬಾಲಿವುಡ್ ಆ್ಯಕ್ಟರ್​ ಸಲ್ಮಾನ್ ಖಾನ್ ಅವರ ನಿವಾಸದ ಮೇಲೆ ಇಂದು ಬೆಳಗಿನ ಜಾವ 5 ಗಂಟೆಗೆ ದುಷ್ಕರ್ಮಿಗಳು ಬೈಕ್​ನಲ್ಲಿ ಬಂದು 5 ಸುತ್ತು ಫೈರಿಂಗ್ ಮಾಡಿ ಎಸ್ಕೇಪ್ ಆಗಿದ್ದಾರೆ. ಮುಂಬೈನ ಬಾಂದ್ರಾ ಪ್ರದೇಶದಲ್ಲಿರುವ...

ಆಟವಾಡುತ್ತಾ ಜಮೀನಿನಲ್ಲಿದ್ದ ಬೋರ್‌ವೆಲ್​ಗೆ ಬಿದ್ದ 6 ವರ್ಷದ ಬಾಲಕ

ಆರು ವರ್ಷದ ಬಾಲಕನೋರ್ವ ತೆರೆದ ಬೋರ್​ವೆಲ್ ಒಳಕ್ಕೆ ಬಿದ್ದ ಘಟನೆ ಮಧ್ಯಪ್ರದೇಶದ ರೇವಾದಲ್ಲಿ ಬೆಳಕಿಗೆ ಬಂದಿದೆ. ಬೋರ್​ವೆಲ್​ಗೆ ಬಿದ್ದ ಬಾಲಕನನ್ನು ರೇವಾ ಜಿಲ್ಲೆಯ ಜಾನೆ ಪೊಲೀಸ್ ಠಾಣೆ ವ್ಯಾಪ್ತಿಯ ಮಾಣಿಕಾ ಗ್ರಾಮದ ಮಯಾಂಕ್ ಎಂದು...