Wednesday, April 24, 2024

ತಗ್ಗಿದ ಮಳೆ, ರಾಜ್ಯದ 10 ಜಿಲ್ಲೆಗಳಿಗೆ ಮತ್ತೆ ಬಿಸಿಗಾಳಿ ಎಚ್ಚರಿಕೆ

ಬೆಂಗಳೂರು: ಕಳೆದೊಂದು ವಾರದಿಂದ ರಾಜ್ಯದ ವಿವಿಧೆಡೆ ಭಾರೀ ಮಳೆಯಾದ ಬೆನ್ನಲ್ಲೇ ಇದೀಗ ತಾಪಮಾನ ಮತ್ತೆ ಏರಿಕೆಯಾಗಿದ್ದು ರಾಜ್ಯದ 10 ಜಿಲ್ಲೆಗಳಲ್ಲಿ ಬಿಸಿಗಾಳಿಯ ಮುನ್ನೆಚ್ಚರಿಕೆ ನೀಡಲಾಗಿದೆ.

ಎ. 24ರಿಂದ 27ರ ವರೆಗೆ ರಾಯಚೂರು, ವಿಜಯಪುರ, ಯಾದಗಿರಿ, ಕೊಪ್ಪಳ, ಬಾಗಲ ಕೋಟೆ, ಕಲಬುರಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಬಿಸಿಗಾಳಿ ಹೆಚ್ಚಾಗಲಿದ್ದು, ಈ ಬಗ್ಗೆ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್‌ ಏರಿಕೆಯಾಗಲಿದೆ. ಎ. 24ರಂದು ಬೆಳಗಾವಿ, ವಿಜಯಪುರ, ಬಾಗಲಕೋಟೆ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಹಗುರ ಮಳೆಯಾಗಲಿದೆ. ಬಿರುಸಿನ ಗಾಳಿ (30-40 ಕಿ.ಮೀ.) ಬೀಳುವ ಸಾಧ್ಯತೆ ಇದೆ. ಎ. 24ರಿಂದ 27ರ ವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉ.ಕ. ಜಿಲ್ಲೆಗಳಲ್ಲಿ ಬಿಸಿಲಿನ ಬೇಗೆ ಇರಲಿದೆ.

More from the blog

ನೌಕಾಪಡೆಯ 2 ಹೆಲಿಕಾಪ್ಟರ್ ಪತನ; ಛಿದ್ರ, ಛಿದ್ರವಾದ ನೌಕಾಪಡೆಯ 10 ಮಂದಿ

ಕೌಲಾಲಂಪುರ: ಮಲೇಷ್ಯಾ ನೌಕಾಪಡೆಯ ಎರಡು ಹೆಲಿಕಾಪ್ಟರ್‌ಗಳು ಡಿಕ್ಕಿ ಹೊಡೆದು 10 ಮಂದಿ ಮೃತಪಟ್ಟಿರುವ ಘಟನೆ ಸಂಭವಿಸಿದೆ. ಮಲೇಷ್ಯಾದ ಲುಮುಟ್ ಪಟ್ಟಣದ ನೌಕಾನೆಲೆಯಲ್ಲಿ ಹೆಲಿಕಾಪ್ಟರ್​ಗಳು ಪರೇಡ್‌ ನಡೆಸುತ್ತಿರುವಾಗ ಈ ಅವಘಡ ಸಂಭವಿಸಿದೆ. ಅತ್ಯಂತ ಸಮೀಪದಲ್ಲಿ ಹಾರಾಟ...

ಬಿಜೆಪಿ ಪಕ್ಷದಿಂದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಉಚ್ಛಾಟನೆ

ಶಿವಮೊಗ್ಗ: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರನ್ನು ಬಿಜೆಪಿ ಶಿಸ್ತು ಸಮಿತಿ ಸೋಮವಾರ ಪಕ್ಷದಿಂದ ಉಚ್ಚಾಟನೆ ಮಾಡಿದೆ. ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜು ಅವರು ಸೋಮವಾರ ಈಶ್ವರಪ್ಪ ಅವರನ್ನು ಆರು ವರ್ಷಗಳ ಕಾಲ...

ಕಾಂಗ್ರೇಸ್ ಸರಕಾರದ ಆಡಳಿತದಲ್ಲಿ ಹೆಣ್ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ.ವಿಜಯೇಂದ್ರ

ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಮೈತ್ರಿಯಾಗಿ ಒಟ್ಟು 28 ಸ್ಥಾನದಲ್ಲಿದಲ್ಲಿ ಗೆಲುವು ಸಾಧಿಸುವುದು ನಿಶ್ವಿತ,ಇದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು. ಅವರು ಬಿಸಿರೋಡಿನ ಗಾಣದಪಡ್ಪು ಬ್ರಹ್ಮ ಶ್ರೀ ನಾರಾಯಣ ಗುರು...

ಆಸ್ಪತ್ರೆಯಿಂದ ಆಂಬ್ಯುಲೆನ್ಸ್ ನಲ್ಲಿ ತೆರಳಿ ಸಿಇಟಿ ಪರೀಕ್ಷೆ ಬರೆದ ಆ್ಯಸಿಡ್ ದಾಳಿ ಸಂತ್ರಸ್ಥೆ ವಿದ್ಯಾರ್ಥಿನಿ

ಕಡಬ: ಆ್ಯಸಿಡ್ ದಾಳಿಗೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಡಬದ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆಂಬ್ಯುಲೆನ್ಸ್ ಮೂಲಕ ತೆರಳಿ ಸಿಇಟಿ ಪರೀಕ್ಷೆ ಬರೆದಿದ್ದಾರೆ. ಮಾರ್ಚ್ 4ರಂದು ಕಾಲೇಜಿನಲ್ಲಿ ಪರೀಕ್ಷೆಗೆ ತಯಾರಾಗುತ್ತಿದ್ದ ವೇಳೆ ಅಬಿನ್...