Saturday, April 6, 2024

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ.

ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ.

ಮನೆಯಿಂದ ಬಿಸಿರೋಡು ಕಡೆಗೆ ಸ್ಕೂಟರ್ ನಲ್ಲಿ ಸಹಸವಾರನಾಗಿ ಸಂಚಾರ ಮಾಡುತ್ತಿದ್ದ ವೇಳೆ ನರಿಕೊಂಬು ದಿಂಡಿಗೆ ಎಂಬಲ್ಲಿ ರಿಕ್ಷಾ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ಸ್ಥಳದಲ್ಲಿಯೇ ಮೃತಪಟ್ಟ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಘಟನೆಯಿಂದ ರಿಕ್ಷಾ ಚಾಲಕ ಸಜೀಪ ನಿವಾಸಿಗಳು ಜಾಬೀರ್ ಕೂಡ ಗಾಯಗೊಂಡಿದ್ದು, ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

‌‌‌ ಪವನ್ ಬಿ.ಮೂಡ ಕಾಲೇಜಿನ ಪ್ರಥಮ ಪಿಯುಸಿ ವಿಭಾಗದಲ್ಲಿ ವ್ಯಾಸಂಗ ‌ಮಾಡುತ್ತಿದ್ದು, ಅತ್ಯಂತ ಪ್ರತಿಭಾವಂತ ವಿದ್ಯಾರ್ಥಿಯಾಗಿ ಗುರುತಿಸಿಕೊಂಡಿದ್ದ. ರಜಾ ದಿನಗಳಲ್ಲಿ ಅಜ್ಜನ ಹೊಟೇಲ್ ನಲ್ಲಿ ಕೆಲಸ ಮಾಡುತ್ತಿದ್ದ.

ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್.ಐ.ಸುತೇಶ್ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

More from the blog

ಗ್ರಾಮೀಣ ಪುನರ್ವಸತಿ ಕಾರ್ಯಕತರಿಗೆ ಮತದಾನ ಜಾಗೃತಿ

ಬಂಟ್ವಾಳ ತಾಲೂಕು ಪಂಚಾಯತ್, ತಾಲೂಕು ಕಚೇರಿ ಹಾಗೂ ತಾಲೂಕು ಸ್ವೀಪ್ ಸಮಿತಿಯಿಂದ ಗ್ರಾಮೀಣ ಪುನರ್ವಸತಿ ಕಾರ್ಯಕತರಿಗೆ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ತಾಲೂಕು ಆಡಳಿತ ಸೌಧದಿಂದ ಹಮ್ಮಿಕೊಂಡ ಜಾಥಾ ಬಿ.ಸಿ.ರೋಡ್ ಖಾಸಗಿ ಬಸ್ ನಿಲ್ದಾಣ...

ಭಾರತೀಯ ಜನತಾ ಪಾರ್ಟಿ ಸ್ಥಾಪನಾ ದಿನದ ಅಂಗವಾಗಿ ಬಂಟ್ವಾಳ ಮಂಡಲ ಬಿಜೆಪಿ ಕಾರ್ಯಾಲಯದಲ್ಲಿ ಧ್ವಜಾರೋಹಣ

ಭಾರತೀಯ ಜನತಾ ಪಾರ್ಟಿ ಸ್ಥಾಪನಾ ದಿನದ ಅಂಗವಾಗಿ ಬಂಟ್ವಾಳ ಮಂಡಲದ ಅಧ್ಯಕ್ಷರಾದ ಆರ್ ಚೆನ್ನಪ್ಪ ಕೋಟ್ಯಾನ್ ಅವರು ಮಂಡಲ ಬಿಜೆಪಿ ಕಾರ್ಯಾಲಯದಲ್ಲಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ದೇವಪ್ಪ ಪೂಜಾರಿ,ರವೀಶ್ ಶೆಟ್ಟಿ, ಡೊಂಬಯ...

ಮಂಗಳೂರು: ‘ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್’ ಸಂಸ್ಥೆಯ ಸಂಗೀತ ಕ್ಷೇತ್ರದಲ್ಲಿ ಸಂಪುಟ 2′ ರ ನೂತನ ಕೃತಿ ಲೋಕಾರ್ಪಣೆ

ಮಂಗಳೂರು: ಮಂಗಳೂರಿನ ಕುಲಶೇಖರದಲ್ಲಿರುವ 'ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್' ಸಂಸ್ಥೆಯ ಪ್ರಕಾಶನದಲ್ಲಿ ಇಂಗ್ಲಿಷ್, ಹಿಂದಿ ಮತ್ತು ಕನ್ನಡದ ಜನಪ್ರಿಯ ಹಾಡುಗಳನ್ನು ಪಾಶ್ಚಿಮಾತ್ಯ ನೊಟೇಶನ್ ಮೂಲಕ ವಯಲಿನ್, ಗಿಟಾರ್ ಮತ್ತು ಕೀಬೋರ್ಡ್ ನಲ್ಲಿ...

ಮತದಾನ ಜಾಗೃತಿ ಅಂಗವಾಗಿ ಸೆಲ್ಫಿ, ಸಹಿ ಅಭಿಯಾನಕ್ಕೆ ಚಾಲನೆ

ಮತದಾರರರಲ್ಲಿ ಮತದಾನ ಜಾಗೃತಿ ಮೂಡಿಸುವ ಸಲುವಾಗಿ ಬಂಟ್ವಾಳ ತಾಲೂಕು ಪಂಚಾಯತ್, ತಾಲೂಕು ಆಡಳಿತ ಮತ್ತು ತಾಲೂಕು ಸ್ವೀಪ್ ಸಮಿತಿ ವತಿಯಿಂದ ಎ‌.5ರಂದು ಸೆಲ್ಫಿ, ಸಹಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ...