Monday, April 8, 2024

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ.

ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ ಮಹಮ್ಮದ್ ರಮೀಜ್ ( 19) ಇರಿತಕ್ಕೊಳಗಾದ ವ್ಯಕ್ತಿಯಾಗಿದ್ದಾನೆ.

ಅಬ್ದುಲ್ ರಹಿಮಾನ್ ಎಂಬಾತ ಆರೋಪಿಯಾಗಿದ್ದು, ಪರಾರಿಯಾಗಿರುವ ಈತನಿಗಾಗಿ ಪೋಲೀಸ್ ತಂಡ ಹುಡುಕಾಟ ನಡೆಸುತ್ತಿದೆ.

ಗಂಭೀರವಾಗಿ ಗಾಯಗೊಂಡಿರುವ ರಮೀಜ್ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ  ಚಿಕಿತ್ಸೆ ಪಡೆಯುತ್ತಿದ್ದು,ಈತನ‌ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.

ಆರೋಪಿ ಅಬ್ದುಲ್ ರಹಿಮಾನ್ ಯಾವುದೋ ಹಣಕಾಸಿನ ಮತ್ತು ಹಳೆಯ ದ್ವೇಷದ ಹಿನ್ನೆಲೆಯಲ್ಲಿ ರಮೀಜ್ ನನ್ನು ಕೊಲೆ ಮಾಡುವ ಉದ್ದೇಶದಿಂದ ಪೋನ್ ಮಾಡಿ ಮನೆಯಲ್ಲಿರುವುದನ್ನು ಖಚಿತಪಡಿಸಿಕೊಂಡು, ಮನೆಯೊಳಗೆ ಬಂದು ಚೂರಿಯಿಂದ ಎರಡು‌ಬಾರಿ ತಿವಿದು ‌ಪರಾರಿಯಾಗಿದ್ದಾನೆ.

ಈ ಬಗ್ಗೆ ಬಂಟ್ವಾಳ ‌ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಾಲಾಗಿದ್ದು,ಆರೋಪಿಗಾಗಿ ಪೋಲೀಸರು ಬಲೆಬೀಸಿದ್ದಾರೆ.

More from the blog

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...

ಲೋಕಾಯುಕ್ತ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕ ಜನಸಂಪರ್ಕ ಸಭೆ

ಬಂಟ್ವಾಳ: ಲೋಕಾಯುಕ್ತ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕ ಜನಸಂಪರ್ಕ ಸಭೆ ಬಿಸಿರೋಡಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಎ. 8 ರಂದು ಸೋಮವಾರ ಲೋಕಾಯುಕ್ತ ಡಿ.ವೈ.ಎಸ್.ಪಿ. ಗಾನ ಕುಮಾರಿ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಮಾತನಾಡಿದ...

ಏಪ್ರಿಲ್ 14ರಂದು ಮಂಗಳೂರಿಗೆ ಪ್ರಧಾನಿ ಮೋದಿ

ಬೆಂಗಳೂರು: ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರ ಸಮಾವೇಶ ಚಿಕ್ಕಬಳ್ಳಾಪುರದಿಂದ ಮಂಗಳೂರಿಗೆ ಸ್ಥಳಾಂತರಗೊಂಡಿದ್ದು, ಅದರಂತೆ, ಏಪ್ರಿಲ್ 14 ರಂದು ದ.ಕ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಮಾವೇಶ ನಡೆಯಲಿದೆ.. ಏಪ್ರಿಲ್ 14ಕ್ಕೆ ಬೆಂಗಳೂರಿಗೆ ಆಗಮಿಸಲಿರುವ...

ದ್ವಿತೀಯ ಪಿಯುಸಿ ಫಲಿತಾಂಶ ಶೀಘ್ರ ಪ್ರಕಟ

ಬೆಂಗಳೂರು: ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಏಪ್ರಿಲ್ 3 ನೇ ವಾರದಲ್ಲಿ ಪ್ರಕಟಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಫಲಿತಾಂಶ ಪ್ರಕಟಗೊಂಡ ನಂತರ, ಪರೀಕ್ಷೆ ಬರೆದಿರುವ ಅಭ್ಯರ್ಥಿಗಳು...