Thursday, April 25, 2024

ಲೋಕಸಭಾ ಚುನಾವಣೆ : ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಮಸ್ಟರಿಂಗ್ ಕಾರ್ಯ

ಲೋಕಸಭಾ ಚುನಾವಣೆ 2024 ರ ಹಿನ್ನೆಲೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಮಸ್ಟರಿಂಗ್ ಕಾರ್ಯವು ಈ ದಿನ ಇನ್ಫೆಂಟ್ ಜೀಸಸ್ ಆಂಗ್ಲ ಮತ್ತು ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆಯಿತು.

ಐವರು ಮಾಸ್ಟರ್ ಟ್ರೈನರ್ ಗಳ ನೇತೃತ್ವದಲ್ಲಿ 25 ಸೆಕ್ಟರ್ ಅಧಿಕಾರಿಗಳು 25 ಕೊಠಡಿಗಳಲ್ಲಿ ಮಸ್ಟರಿಂಗ್ ಕಾರ್ಯವನ್ನು ನಡೆಸಿಕೊಟ್ಟರು. ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ 249 ಮತಗಟ್ಟೆಗಳಿದ್ದು ಪ್ರತಿ ಮತಗಟ್ಟೆಗೂ ತಲಾ ಒಬ್ಬರು ಪಿ .ಆರ್ .ಓ ಒಬ್ಬರು ಎ.ಪಿ.ಆರ್.ಓ ಮತ್ತು ಇಬ್ಬರು ಪಿ.ಓ ಹಾಗೂ ಒಬ್ಬರು ಡಿ ಗ್ರೂಪ್ ಮತ್ತು ಒಬ್ಬರು ಪೊಲೀಸ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. 92 ವಾಹನ ಪಥಗಳ ವ್ಯವಸ್ಥೆ ರೂಪಿಸಲಾಗಿದ್ದು ಎಲ್ಲ ಮತಗಟ್ಟೆ ಅಧಿಕಾರಿಗಳು ತಮ್ಮ ತಮ್ಮ ಮತಗಟ್ಟೆಗಳಿಗೆ ಚುನಾವಣಾ ಸಾಮಾಗ್ರಿಗಳೊಂದಿಗೆ ತೆರಳಿದರು. 118 ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ಗೆ ವ್ಯವಸ್ಥೆಯನ್ನು ಮಾಡಲಾಗಿರುತ್ತದೆ. ಸೂಕ್ಷ್ಮ ಪ್ರದೇಶದಲ್ಲಿ 14 ಮೈಕ್ರೋ ಆಬ್ಸರ್ ವರ್ ಗಳನ್ನು ನಿಯೋಜಿಸಲಾಗಿರುತ್ತದೆ. ಐದು ಸಖಿ ಮತಗಟ್ಟೆಗಳಿದ್ದು ಮಹಿಳೆಯರಿಂದಲೇ ನಿರ್ವಹಿಸಲ್ಪಡುತ್ತದೆ. ಒಂದು ಸಾಂಪ್ರದಾಯಿಕ ಮತಗಟ್ಟೆ,

ಒಂದು ಯುವ ಮತದಾರರ ಮತಗಟ್ಟೆ, ಒಂದು ವಿಶೇಷ ಚೇತನರ ಮತಗಟ್ಟೆ ಕಾರ್ಯನಿರ್ವಹಿಸಲಿದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣಾ ವೀಕ್ಷಕರು ಮತ್ತು ಎಸ್ಪಿ ಅವರು ಮಸ್ಟರಿಂಗ್ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಬಂಟ್ವಾಳ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾ ಅಧಿಕಾರಿ ಡಾ. ಉದಯ ಶೆಟ್ಟಿ, ತಹಶೀಲ್ದಾರ್ ಅರ್ಚನಾ ಭಟ್, ವಿವಿಧ ಇಲಾಖೆಗಳ ಅಧಿಕಾರಿಗಳು, ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತ ಅಧಿಕಾರಗಳು, ಗ್ರಾಮ ಸಹಾಯಕರು, ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು

More from the blog

ಬಂಟ ಬ್ರಿಗೇಡ್ ಹೆಸರಿನಲ್ಲಿ ಕರಪತ್ರ ತಯಾರಿಸಿ ಅಪಪ್ರಚಾರ : ಪಣೋಲಿಬೈಲಿನಲ್ಲಿ ಸಜೀಪಮೂಡ ಬಿಜೆಪಿ ಕಾರ್ಯಕರ್ತರಿಂದ ಪ್ರಾರ್ಥನೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚುನಾವಣೆ ಕಾವು ಏರುತ್ತಿದ್ದು ಹಿಂದುತ್ವದ ಭದ್ರಕೋಟೆಯನ್ನು ಚಿದ್ರಮಾಡುವ ದುರುದ್ದೇಶದಿಂದ ಕೆಲವು ಕಿಡಿಗೇಡಿಗಳು ಅಸ್ತಿತ್ವವೇ ಇಲ್ಲದೇ ಇರುವ ಬಂಟ ಬ್ರಿಗೇಡ್ ಎಂಬ ನಾಮದ ಅಡಿಯಲ್ಲಿ ಕರಪತ್ರ ತಯಾರಿಸಿ ಜಾತಿ ಜಾತಿಗಳ...

ಬಾಲಕಿ ಜೊತೆ ಅಸಭ್ಯ ವರ್ತನೆ : ಪ್ರಕರಣ ದಾಖಲು

ಬಂಟ್ವಾಳ: ಪೊಳಲಿಯಲ್ಲಿ ಬಾಲಕಿಯನ್ನು ಅಪ್ಪಿ ಹಿಡಿದು ಅನುಚಿತವಾಗಿ ವರ್ತಿಸಿದ ಘಟನೆಯು ಎ. ೨೪ರಂದು ನಡೆದಿದ್ದು, ಆರೋಪಿಯ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಡಕಬೈಲು ನಿವಾಸಿ ಅಮೀನ್ ಯಾನೆ ಮೊಹಮ್ಮದ್ ಅಮೀನ್...

ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

ಕುಂದಾಪುರ: ಬಡಗುತಿಟ್ಟಿನ ಯಕ್ಷಗಾನದ ಶ್ರೇಷ್ಠ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಅವರು ಎ.25 ರಂದು ಬೆಳಗ್ಗೆ 4.30 ಕ್ಕೆ ಬೆಂಗಳೂರಿನಲ್ಲಿ ಪುತ್ರನ ಮನೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಪೆರ್ಡೂರು ಮೇಳದಲ್ಲಿ 28 ವರ್ಷಗಳಲ್ಲಿ ಕಾಲ ಪ್ರಧಾನ...

ಬಸ್ ನಲ್ಲಿ ಯುವತಿಗೆ ಕಿರುಕುಳ : ಸಂತ್ರಸ್ತ ಯುವತಿಯ ಮನೆಗೆ ಡಾ| ಪ್ರಭಾಕರ್ ಭಟ್ ಭೇಟಿ

ಬಂಟ್ವಾಳ:ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೋರ್ವಳಿಗೆ ಗುಂಡ್ಯದಲ್ಲಿ ಕಿರುಕುಳ ನೀಡಿದ ಘಟನೆ ನಡೆದಿದ್ದು, ಸಂತ್ರಸ್ತ ಯುವತಿಯ ಮನೆಗೆ ಆರ್.ಎಸ್.ಎಸ್.ಪ್ರಮುಖರಾದ ಡಾ| ಪ್ರಭಾಕರ್ ಭಟ್ ಬೇಟಿ ನೀಡಿ ಪ್ರಕರಣವನ್ನು ದೈರ್ಯವಾಗಿ ಎದುರಿಸಿದ ಯುವತಿಯ ಕಾರ್ಯಕ್ಕೆ ಮೆಚ್ಚುಗೆ...