Friday, April 19, 2024

ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ಭೇಟಿ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 17-ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ರವರು ದಿನಾಂಕ 19-04-2024 ರಂದು ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಭೇಟಿ ನೀಡಿದರು.

ಸೂಕ್ಷ್ಮ ಮತಗಟ್ಟೆಗಳಿರುವ ಪ್ರದೇಶಗಳಿಗೆ ಭೇಟಿ ನೀಡಿದ ಅವರು ದ.ಕ. ಜಿ.ಪಂ.ಹಿ.ಪ್ರಾ.ಶಾಲೆ ಕೊಡಂಗೆ ಬಿ ಮೂಡಾ ಇಲ್ಲಿರುವ ಮತಗಟ್ಟೆ ಸಂಖ್ಯೆ 122, 123 ಮತ್ತು 124 ಗಳಲ್ಲಿ ಸಿದ್ಧತೆಗಳನ್ನು ಪರಿಶೀಲಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ತಹಶೀಲ್ದಾರ್‌ ಅರ್ಚನಾ ಭಟ್‌, ಚುನಾವಣಾ ಉಪತಹಶೀಲ್ದಾರ್‌ ನವೀನ್‌ ಕುಮಾರ್‌ ಬೆಂಜನಪದವು, ಕಂದಾಯ ನಿರೀಕ್ಷಕರಾದ ಜನಾರ್ಧನ ಜೆ., ವಿಜಯ್‌ ಆರ್.‌, ಗ್ರಾಮ ಆಡಳಿತ ಅಧಿಕಾರಿ ಕರಿಬಸಪ್ಪ ನಾಯಕ್‌, ಮತಗಟ್ಟೆ ಅಧಿಕಾರಿಗಳಾದ ಜ್ಯೋತಿ, ಸೌಮ್ಯ,ಆಶಾ ಉಪಸ್ಥಿತರಿದ್ದರು.

More from the blog

ಜನಪರವಾದ ಕೆಲಸ ಮಾಡದ ಬಿಜೆಪಿಗೆ ಸೋಲು ಖಚಿತ-ಚಾಮರಸ ಮಾಲೀಪಾಟೀಲ್

ಬಂಟ್ವಾಳ: 2024 ರ ಚುನಾವಣೆಯಲ್ಲಿ ಬಿಜೆಪಿ ಹಾಗೂ ಮಿತ್ರಪಕ್ಷವನ್ನು ಸೋಲಿಸುವ ತೀರ್ಮಾನವನ್ನು ಕರ್ನಾಟಕ ರಾಜ್ಯ ರೈತ ಸಂಘ ಮಾಡಿದ್ದು, ಈ ದೃಷ್ಟಿಯಿಂದ ರೈತರ ಮನವೊಲಿಸುವ ಕಾರ್ಯದಲ್ಲಿ ತೊಡಗಿದ್ದೇವೆ, ಈ ಬಾರಿ ಬಿಜೆಪಿ ನೆಲಕಚ್ಚುವುದು...

ಏ.21ರಂದು ನಮ್ಮ ನಡೆ ಮತಗಟ್ಟೆಯ ಕಡೆ ಅಭಿಯಾನ

ಮತದಾರರನ್ನು ಮತಗಟ್ಟೆಗೆ ಸೆಳೆಯುವ ಸಲುವಾಗಿ ಚುನಾವಣಾ ಆಯೋಗ ಸ್ವೀಪ್ ಕಾರ್ಯಕ್ರಮದ ಮೂಲಕ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಅದರಂತೆ ಎ.21ರಂದು ಎಲ್ಲಾ ಬೂತ್ ಮತಗಟ್ಟೆಗಳಲ್ಲಿ ನಮ್ಮ ನಡೆ ಮತಗಟ್ಟೆಯ ಕಡೆ ಅಭಿಯಾನ ಹಮ್ಮಿಕೊಂಡಿದ್ದು, ಬಂಟ್ವಾಳ...

ನೇತ್ರಾವತಿ ನದಿ ತೀರದ ಕೃಷಿಕರ ಪಂಪ್ ಸೆಟ್ ಗಳ ವಿದ್ಯುತ್ ಸ್ಥಗಿತ : ರೈತರಿಂದ ಪ್ರತಿಭಟನೆ

ಬಂಟ್ವಾಳ: ದ.ಕ.ಜಿಲ್ಲಾಡಳಿತವೂ ಮಂಗಳೂರು ನಗರಕ್ಕೆ ಕುಡಿಯುವ ನೀರು ಕೊರತೆಯಾಗುತ್ತಿದೆ ಎಂದು ನೇತ್ರಾವತಿ ನದಿ ಪಾತ್ರದ ಕೃಷಿ ಪಂಪ್ ಸೆಟ್ ಗಳ ವಿದ್ಯುತ್ ಕಡಿತ ಮಾಡಿರುವ ವಿರುದ್ಧ ರೈತರು ಬಂಟ್ವಾಳ ತಾಲೂಕು ಆಡಳಿತ ಸೌಧದ...

ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ : ಮಹಿಳೆ ಗಂಭೀರ

ಬೆಳ್ತಂಗಡಿ: ತನ್ನ ಮನೆಯ ಸಾಕು ನಾಯಿ ಜತೆ ಮನೆ ಮಾಲಕಿ ಮುದ್ದಾಡುವಾಗ ಏಕಾಏಕಿ ದಾಳಿ ಮಾಡಿ ತಲೆ ಭಾಗವನ್ನು ಸೀಳಿ ಹಾಕಿ ಕೈಗೆ ಗಂಭೀರ ಗಾಯ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಮುಂಡಾಜೆ...