Monday, April 15, 2024

ಹಿರಿಯ ಮತ್ತು ಅಂಗವಿಕಲ ಮತದಾರರ ಮನೆಗಳಿಗೆ ತೆರಳಿ ಮತದಾನ ಪ್ರಕ್ರಿಯೆ ನಡೆಸುವ ಕಾರ್ಯ ಪ್ರಾರಂಭ

ಲೋಕಸಭಾ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ 205-ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ 85 ವರ್ಷಕ್ಕೆ ಮೇಲ್ಪಟ್ಟ ಮತ್ತು ಶೇಕಡಾ 40 ಕ್ಕಿಂತ ಜಾಸ್ತಿ ಅಂಗವೈಕಲ್ಯತೆ ಹೊಂದಿರುವ ಮತದಾರರ ಮನೆಗಳಿಗೆ ತೆರಳಿ ಮತದಾನ ಪ್ರಕ್ರಿಯೆ ನಡೆಸುವ ಕಾರ್ಯ ಪ್ರಾರಂಭಗೊಂಡಿತು.

ಸೆಕ್ಟರ್ ಅಧಿಕಾರಿಗಳ ನೇತೃತ್ವದಲ್ಲಿ 25 ಮತಗಟ್ಟೆ ಅಧಿಕಾರಿಗಳ ತಂಡ ರಚಿಸಲಾಗಿದ್ದು, ಈಗಾಗಲೇ ಮತದಾರರ ಪಟ್ಟಿಯಲ್ಲಿ ದಾಖಲಿರುವ ಹಿರಿಯ ಮತ್ತು ಅಂಗವಿಕಲ ಮತದಾರರ ಮನೆಗಳಿಗೆ ತೆರಳಿ ಮತದಾನ ಪ್ರಕ್ರಿಯೆ ನಡೆಸಲಿದ್ದಾರೆ.

ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಈ ಸಂದರ್ಭದಲ್ಲಿ ಉಪಸ್ಥಿತಲಿದ್ದಾರೆ.

ಸಂಪೂರ್ಣ ಮತದಾನದ ವಿಡಿಯೋಗ್ರಾಫಿ ಮಾಡಲಾಗುತ್ತದೆ. ಮೊಡಂಕಾಪಿನ ಇನ್ಫೆಂಟ್ ಜೀಸಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೂರ್ವಾಹ್ನ 7.00 ಗಂಟೆಯಿಂದ ಮಸ್ಟರಿಂಗ್ ಕಾರ್ಯ ನಡೆಯಿತು.

ಈ ಸಂದರ್ಭದಲ್ಲಿ 205-ಬಂಟ್ವಾಳದ ಸಹಾಯಕ ಚುನಾವಣಾಧಿಕಾರಿ ಡಾ. ಉದಯ ಶೆಟ್ಟಿ, ತಹಶೀಲ್ದಾರ್ ಅರ್ಚನಾ ಭಟ್, ಉಪತಹಶೀಲ್ದಾರ್ ನವೀನ್ ಬೆಂಜನಪದವು, ಮಾಸ್ಟರ್ ಟ್ರೈನರ್ ಅಬ್ದುಲ್ ರಝಾಕ್, ವಿಷಯ ನಿರ್ವಾಹಕ ಮಂಜುನಾಥ್ ಕೆ ಹೆಚ್ , ಬಿ ಮೂಡ ಗ್ರಾಮ ಆಡಳಿತ ಅಧಿಕಾರಿ ಕರಿಬಸಪ್ಪ ನಾಯಕ್, ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ಗ್ರಾಮ ಆಡಳಿತ ಅಧಿಕಾರಿಗಳು, ಗ್ರಾಮ ಸಹಾಯಕರು ಉಪಸ್ಥಿತರಿದ್ದರು.

ಪ್ರತೀ ತಂಡದಲ್ಲಿ ಪೊಲೀಸ್ ಸಿಬ್ಬಂದಿ ಮತ್ತು ಬಿ.ಎಲ್.ಒ. ರವರೂ ಸೇರಿದಂತೆ ಏಳು ಜನ ಇರಲಿದ್ದು, ಬಂಟ್ವಾಳ ವಿಧಾನಸಭಾ ಕ್ಷೇತ್ರಕ್ಕೆ 90 ಮತಗಟ್ಟೆ ಅಧಿಕಾರಿಗಳನ್ನು ಹಂಚಿಕೆ ಮಾಡಲಾಗಿರುತ್ತದೆ. ಸದ್ರಿ ಪ್ರಕ್ರಿಯೆ ದಿನಾಂಕ 17-04-2024 ರೊಳಗೆ ಮುಕ್ತಾಯವಾಗಲಿದೆ.

More from the blog

ಹಿಂದುಳಿದ ವರ್ಗದ ಶ್ರೇಯೋಭಿವೃದ್ಧಿಗಾಗಿ ಕೆಲಸ- ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ

ಸುರತ್ಕಲ್: ರಾಜಕೀಯವಾಗಿ ಸಿಕ್ಕ ಅವಕಾಶವನ್ನು ಸಾಮಾಜಿಕ ಶ್ರೇಯೋಭಿವೃದ್ಧಿಗೆ ಬಳಸಿಕೊಳ್ಳಲಾಗುವುದು ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಹೇಳಿದರು. ಪಣಂಬೂರು ಸುಂದರಿ ಲಕ್ಷ್ಮಣ್ ಬಂಗೇರ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು. ...

ಉಳ್ಳಾಲದಲ್ಲಿ ರಾರಾಜಿಸಿದ ಕಾಂಗ್ರೆಸ್ ರೋಡ್ ಶೋ… ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರಿಗೆ ಅಭೂತಪೂರ್ವ ಬೆಂಬಲ ವ್ಯಕ್ತಪಡಿಸಿದ ಮಂಗಳೂರು (ಉಳ್ಳಾಲ) ವಿಧಾನಸಭಾ ಕ್ಷೇತ್ರದ ಜನತೆ

ಉಳ್ಳಾಲ: ರೋಡ್ ಶೋ ಮೂಲಕ ನಡೆಸಿದ ಚುನಾವಣಾ ಪ್ರಚಾರ ಕಾರ್ಯ ಕಾಂಗ್ರೆಸ್'ಗೆ ಹೊಸ ಉತ್ಸಾಹ ತುಂಬುವಲ್ಲಿ ಸಫಲವಾಗಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಭಾನುವಾರ ಮಂಗಳೂರು (ಉಳ್ಳಾಲ) ವಿಧಾನಸಭಾ ಕ್ಷೇತ್ರದಲ್ಲಿ ರೋಡ್ ಶೋ ನಡೆಸಿದ್ದು, ಅಭೂತಪೂರ್ವ...

ಪುಣಚ: ನಿರ್ಮಾಣ ಹಂತದ ಸೇತುವೆ ಕುಸಿತ : 7 ಮಂದಿ ಕಾರ್ಮಿಕರಿಗೆ ಗಾಯ

ವಿಟ್ಲ: ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು ಏಳು ಮಂದಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುಣಚ ಗ್ರಾಮದಲ್ಲಿ ನಡೆದಿದೆ. ಪುಣಚ ಗ್ರಾಮದ ಬರೆಂಜ – ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿಯಲ್ಲಿ ಸೇತುವೆಯ ಕೊನೆಯ...

ಶರಾಬು ಕುಡಿಯಲು ಆಕ್ಷೇಪ… ಯುವಕನಿಗೆ ಹಲ್ಲೆ : ದೂರು, ಪ್ರತಿದೂರು ದಾಖಲು

ಮಚ್ಚಿನ: ಹೊಟೇಲ್‌ ಕಾರ್ಮಿಕನನ್ನು ಶರಾಬು ಕುಡಿಯಲು ಕರೆಯಬಾರದು ಎಂದಿದ್ದಕ್ಕೆ ಯುವಕನ ಮೇಲೆ ಹಲ್ಲೆಗೈದ ಘಟನೆ ಬೆಳ್ತಂಗಡಿ ತಾಲೂಕಿನ ಮಚ್ಚಿನದಲ್ಲಿ ಸಂಭವಿಸಿದೆ. ಮಚ್ಚಿನದ ಪ್ರತಿಭಾ ರೈ ಅವರ ಹೊಟೇಲ್‌ನಲ್ಲಿ ಕೆಲಸ ಮಾಡುತ್ತಿದ್ದ ಚಂದ್ರ ಅವರನ್ನು ಆರೋಪಿ...