Wednesday, April 17, 2024

ಬಂಟ್ವಾಳ: ಕರ್ಪೆ ಗ್ರಾಮದ ಮನೆಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವಂತೆ “ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹಾಗೂ ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ” ಕಾರ್ಯಕ್ರಮದ ಮೂಲಕ ಬಂಟ್ವಾಳದ ವಿಧಾನಸಭಾ ಕ್ಷೇತ್ರದ ಕರ್ಪೆ ಗ್ರಾಮದಲ್ಲಿ ಮನೆಗಳಿಗೆ ಬೇಟಿ ನೀಡಿ ಮತಯಾಚನೆ ನಡೆಸಿದರು. ಲೋಕಸಭಾ ಅಭ್ಯರ್ಥಿಯ ಪರಿಚಯ ಪತ್ರ,ಹಾಗೂ ಮೋದಿ ಸರಕಾರದ ಅವಧಿಯಲ್ಲಿ ನಡೆಸಲಾದ ಯೋಜನೆಗಳ ಮಾಹಿತಿ ಕರಪತ್ರವನ್ನು ಮತದಾರರಿಗೆ ಅವರು ಜೊತೆಯಾಗಿ ನೀಡಿದರು.

ಕಾರ್ಯಕರ್ತರ ಜೊತೆ ಮಾತನಾಡಿದ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು, ಕರ್ಪೆ ಭಾಗದ ಜನರ ಬೇಡಿಕೆಯಂತೆ ಕೇಂದ್ರದಲ್ಲಿ ಮೋದಿ ನೇತ್ರತ್ವದ ಬಿಜೆಪಿ ಅಧಿಕಾರದಲ್ಲಿರುವ ಅವಧಿಯಲ್ಲಿ ಹಾಗೂ ಯಡಿಯೂರಪ್ಪ ಮತ್ತು ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ರಾಜ್ಯ ಸರಕಾರದಿಂದ ಕೋಟ್ಯಾಂತರ ರೂ ಅನುದಾನಗಳ ಮೂಲಕ ಹತ್ತಾರು ಯೋಜನೆಗಳನ್ನು ಕಾರ್ಯರೂಪಕ್ಕೆ ತಂದಿದ್ದೇವೆ. ಮುಂದಿನ ದಿನಗಳಲ್ಲಿ ಈ ಭಾಗದ ಬೇಡಿಕೆಯನ್ನು ಪೂರೈಸಲು ಸದಾ ಸಿದ್ದರಿದ್ದೇವೆ. ಬಿಜೆಪಿಯಲ್ಲಿ ಪಕ್ಷವೇ ಮುಖ್ಯ ಹೊರತು ವ್ಯಕ್ತಿಯಲ್ಲ, ಪಕ್ಷದ ಗೆಲುವಿಗಾಗಿ ಕಾರ್ಯಕರ್ತರು ಜೊತೆಯಾಗಿ ಕೆಲಸ ಮಾಡಬೇಕು. ಬಿಜೆಪಿಗೆ ಶಕ್ತಿ ನೀಡುವ ಗ್ರಾಮಗಳಲ್ಲಿ ಕರ್ಪೆ ಕೂಡ ಒಂದಾಗಿದ್ದು, ಅತ್ಯಂತ ಪ್ರಮುಖ ಚುನಾವಣೆಯಾಗಿರುವ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.

ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ಮಾತನಾಡಿ, ಕಾರ್ಯಕರ್ತರು ಬಿಜೆಪಿಯ ಜೀವಾಳವಾಗಿದ್ದು,ಬಿಜೆಪಿ ಕಾರ್ಯಕರ್ತರ ಪಾರ್ಟಿಯಾಗಿದೆ. ಕಾರ್ಯಕರ್ತರ ಭಾವನೆಗಳಿಗೆ ಬೆಲೆ ನೀಡುವುದರ ಜೊತೆಗೆ ಕಾರ್ಯಕರ್ತರಿಗೆ ಗೌರವ ಸಿಗಬೇಕಾದರೆ ಬಿಜೆಪಿ ನಿರಂತರವಾಗಿ ಆಡಳಿತದಲ್ಲಿರಬೇಕಾಗಿದೆ. ಅಭಿವೃದ್ಧಿ ಜೊತೆಗೆ ಹಿಂದುತ್ವದ ಉಳಿವಿಗಾಗಿ ಕೇಂದ್ರದಲ್ಲಿ ಮೋದಿಯವರನ್ನು ಈ ಬಾರಿ ಮತ್ತೊಮ್ಮೆ ಗೆಲ್ಲಿಸಿ, ಅವರ ಕೈ ಬಲಪಡಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಅತ್ಯಂತ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಿಕೊಡಿ ಎಂದು ‌ಮನವಿ ಮಾಡಿದರು.

ಈ ಸಂದರ್ಭದಲ್ಲಿ ತಾ.ಪಂ.ಮಾಜಿ ಸದಸ್ಯ ಪ್ರಭಾಕರ ಪ್ರಭು, ಗ್ರಾ.ಪಂ.ಅಧ್ಯಕ್ಷೆ ರಾಜೀವಿ ಸದಸ್ಯರಾದ ವಿದ್ಯಾ,ಹೇಮಲತಾ, ಪ್ರಮುಖರಾದ ನವೀನ್ ಕರ್ಪೆ, ತೇಜಸ್ ಪೂಜಾರಿ, ಸುಂದರ ಪೂಜಾರಿ ನೆಕ್ಲಾಜೆ,ರಾಜೇಂದ್ರ ನೆಕ್ಲಾಜೆ, ಹರೀಶ್ ,ಚಂದ್ರಶೇಖರ್ ಕರ್ಪೆ, ರಾಮಕೃಷ್ಣ ನಾಯಕ್, ದಿನೇಶ್ ಶೆಟ್ಟಿ ದಂಬೆದಾರ್, ತಮ್ಮಯ್ಯ ನಾಯ್ಕ,ಸದಾನಂದ, ಕೃಷ್ಣಪ್ಪ ಪೂಜಾರಿ, ಅರುಣ್ ಅರ್ಲ, ಉಮಾನಾಥ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.

More from the blog

ಕುಡಿದ ಮತ್ತಿನಲ್ಲಿ ರೈಲ್ವೆ ಗೇಟ್ ಗೆ ಡಿಕ್ಕಿ ಹೊಡೆದು ಆವಾಂತರ ಸೃಷ್ಟಿಸಿದ ಮನೋರೋಗ ತಜ್ಞ

ಮಂಗಳೂರಿನ ಹೆಸರಾಂತ ಮನೋರೋಗ ತಜ್ಞರೊಬ್ಬರು ಕುಡಿದ ಮತ್ತಿನಲ್ಲಿ ರೈಲ್ವೆ ಗೇಟ್ ಗೆ ಡಿಕ್ಕಿ ಹೊಡೆದು ಆವಾಂತರ ಸೃಷ್ಟಿಸಿದ ಘಟನೆ ನಗರ ಹೊರ ವಲಯದ ಪರಂಗಿಪೇಟೆ ಬಳಿಯ ಅರ್ಕುಳ ಎಂಬಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಕುಡಿದ...

ಏ.21 ರಂದು ಆದಿದ್ರಾವಿಡ ಸಮಾಜ ಬಾಂಧವರ ಕ್ರೀಡಾಕೂಟ ಹಾಗೂ ಸಾಧಕರಿಗೆ ಸನ್ಮಾನ

ಬಂಟ್ವಾಳ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘ(ರಿ.)S74 ಇದರ ವತಿಯಿಂದ ವಿಶ್ವಜ್ಞಾನಿ ಡಾ| ಬಿ. ಆರ್ ಅಂಬೇಡ್ಕರ್ ರವರ 133ನೇ ಜನ್ಮ ದಿನಾಚರಣೆಯ ಅಂಗವಾಗಿ ಸಂಘದ ದಶಮಾನೋತ್ಸವ ಕಾರ್ಯಕ್ರಮದ ಪ್ರಯುಕ್ತ ಆದಿದ್ರಾವಿಡ ಸಮಾಜ...

ಎಸ್.ಎಸ್.ಎಲ್.ಸಿ ಮೌಲ್ಯಮಾಪನ : ನಿಷೇಧಾಜ್ಞೆ ಜಾರಿ

ಮಂಗಳೂರು: ಮಂಗಳೂರಿನ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಏಪ್ರಿಲ್ 15ರಿಂದ ಎಸ್.ಎಸ್.ಎಲ್.ಸಿ ಮುಖ್ಯ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ನಡೆಯಲಿದ್ದು, ಮೌಲ್ಯಮಾಪನ ಕಾರ್ಯವನ್ನು ಸುಸೂತ್ರವಾಗಿ ಹಾಗೂ ಪಾರದರ್ಶಕವಾಗಿ ನಡೆಸಲು ಮತ್ತು ಕಾನೂನುಬಾಹಿರ...

ಲೋಕಸಭಾ ಚುನಾವಣೆ : ಬಂಟ್ವಾಳದ ಕಳ್ಳಿಗೆ ಗ್ರಾಮದಲ್ಲಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

2024 ರ ಎ. 26 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವ ನಿಟ್ಟಿನಲ್ಲಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಎಂಬ...