Wednesday, April 17, 2024

ಬಂಟ್ವಾಳದ ನರಿಕೊಂಬು ಗ್ರಾಮದಲ್ಲಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

2024 ರ ಎ. 26 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವ ನಿಟ್ಟಿನಲ್ಲಿ “ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ” ಎಂಬ ನೂತನ ಕಾರ್ಯಕ್ರಮ ಆಯೋಜಿಸಿದ್ದು, ಎ.16 ರಂದು ಬಂಟ್ವಾಳದ ನರಿಕೊಂಬು ಗ್ರಾಮದ ಮಾರುತಿನಗರ, ಮೊಗರ್ನಾಡು, ಏಳಬೆ, ಶೇಡಿಗುರಿ, ನಾಯಿಲ, ಮರ್ದೋಳಿ,ನಾಟಿ ಮತ್ತು ಶಂಭೂರು ಭಾಗದಲ್ಲಿ ಮತದಾರರ ಮನೆಗೆ ಮತ್ತು ಅಂಗಡಿಗಳಿಗೆ ಶಾಸಕ ರಾಜೇಶ್ ,ಮಾಜಿ ಶಾಸಕ ಎ‌.ರುಕ್ಮಯ ಪೂಜಾರಿ ಬೇಟಿ ನೀಡಿ ಮತಯಾಚನೆ ನಡೆಸಿದರು.

ಲೋಕಸಭಾ ಅಭ್ಯರ್ಥಿಯ ಪರಿಚಯ ಪತ್ರ,ಹಾಗೂ ಮೋದಿ ಸರಕಾರದ ಅವಧಿಯಲ್ಲಿ ನಡೆಸಲಾದ ಯೋಜನೆಗಳ ಮಾಹಿತಿ ಕರಪತ್ರವನ್ನು ಮತದಾರರಿಗೆ ಅವರು ಜೊತೆಯಾಗಿ ನೀಡಿದರು.

ಶಾಸಕ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು ಅವರು ಮಾತನಾಡಿ, ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಭಾರತ ಸುಧಾರಣೆ ಕಂಡಿದ್ದು, ಭಾರತವನ್ನು ಒಂದನೇ ಸ್ಥಾನಕ್ಕೆ ತರುವ ಪ್ರಯತ್ನ ಮಾಡುತ್ತಿದ್ದಾರೆ. ಅನೇಕ ಸಾಮಾಜಿಕ ಸುಧಾರಣೆಯ ಕಾರ್ಯಕ್ರಮಗಳ ಕನಸು ಕಂಡಿರುವ ಪ್ರಧಾನಿ ನರೇಂದ್ರ ಮೋದಿಯವರ ಯೋಚನೆಗೆ, ಈ ಬಾರಿ ಮತ್ತೊಮ್ಮೆ ಬಿಜೆಪಿಯನ್ನು ಗೆಲ್ಲಿಸಿಕೊಡುವ ಮೂಲಕ ಸಾಥ್ ನೀಡುವ ಎಂದು ತಿಳಿಸಿದರು.

ದ.ಕ.ಜಿಲ್ಲೆಯಲ್ಲಿ ಕಳೆದ ಬಾರಿಯ ಗೆಲುವಿನ ಅಂತರಕ್ಕಿಂತ ಹೆಚ್ಚು ಮತಗಳನ್ನು ಪಡೆದು ಕ್ಯಾ.ಬ್ರಿಜೇಶ್ ಚೌಟ ಅವರನ್ನು ಗೆಲ್ಲಿಸಿ ಎಂದು ಅವರು ಕರೆ ನೀಡಿದರು.

ಮಾಜಿ ಶಾಸಕ ಎ.ರುಕ್ಮಯ ಪೂಜಾರಿ ಅವರು ಮಾತನಾಡಿ, ಕಾಂಗ್ರೇಸ್ ಅಧಿಕಾರದ ಅವಧಿಯಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿತ್ತು. ಆದರೆ ಬಿಜೆಪಿ ನೇತ್ರತ್ವದಲ್ಲಿ ಮೋದಿಯವರು ಪ್ರಧಾನಿಯಾದ ಬಳಿಕ ಉಗ್ರವಾದ ಮುಕ್ತ, ಭ್ರಷ್ಟಾಚಾರ ಮುಕ್ತವಾದ ಅಭಿವೃದ್ಧಿ ಶಕೆ ಆರಂಭವಾಯಿತು.ದೇಶದ ರಕ್ಷಣೆಯನ್ನು ಮೋದಿಯವರಿಂದ ಮಾತ್ರ ಸಾಧ್ಯ ಎಂಬ ವಿಚಾರವನ್ನು ತಿಳಿಸಿದರು. ಬಿಜೆಪಿ ರಾಜ್ಯದಲ್ಲಿ ಅಡಳಿತ ಮಾಡಿದ ಕಳೆದ ಅವಧಿಯಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯಗಳನ್ನು ಮತ್ತು ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕದ ದಿನಗಳನ್ನು ತುಲನೆ ಮಾಡಿ ಎಂದು ಪರೋಕ್ಷವಾಗಿ ಕಾಂಗ್ರೆಸ್ ನ ಬಿಟ್ಟಿ ಭಾಗ್ಯಗಳಿಂದ ಸರಕಾರದ ಮೇಲೆ ಆಗಿರುವ ಪರಿಣಾಮವನ್ನು ಜನರಿಗೆ ತಿಳಿಸಿದರು.

ಶಾಸಕ ರಾಜೇಶ್ ನಾಯ್ಕ್ ಅವರು ಗೆದ್ದ ಬಳಿಕ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿ ಜೊತೆಗೆ ಸರ್ವರಿಗೂ ನ್ಯಾಯ ಒದಗಿಸುವ ಕಾರ್ಯ ಆಗಿದೆ. ಅದೇ ರೀತಿ ಲೋಕಸಭಾ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸಿ ಕಳುಹಿಸಿದರೆ ಕಾರ್ಯಕರ್ತರ ಸಮಸ್ಯೆಗಳಿಗೆ ಸದಾ ಸ್ಪಂದಿಸಲಿದ್ದಾರೆ ಎಂದು ಅವರು ತಿಳಿಸಿದರು.

ನರಿಕೊಂಬು ಗ್ರಾ.ಪಂ.ಉಪಾಧ್ಯಕ್ಷೆ ಮೋಹಿನಿವಾಮನ, ಸದಸ್ಯರಾದ ಚೇತನ್ ಏಳಬೆ,ಅರುಣ್ ಬೋರುಗುಡ್ಡೆ,ಉಷಾಲಾಕ್ಷಿ, ರವಿಅಂಚನ್, ರತ್ನ, ವಿನುತಾಪುರುಷೋತ್ತಮ,ಕಿಶೋರ್ ಶೆಟ್ಟಿ, ಪ್ರಕಾಶ್ ಮಡಿಮೊಗೆರು,ಯೋಗೀಶ್ ಶಾಂತಿಲ, ನಾರಾಯಣ ಪೂಜಾರಿ ದರ್ಖಾಸು,

ಬಿಜೆಪಿ ಪ್ರಮುಖರಾದ ಸಂದೇಶ್ ಶೆಟ್ಟಿ ಅರೆಬೆಟ್ಟು, ಸುದರ್ಶನ ಬಜ, ಸುರೇಶ್ ಕೋಟ್ಯಾನ್, ಪುರುಷೋತ್ತಮ ಸಾಲಿಯಾನ್, ಯಶೋಧರ ಕರ್ಬೆಟ್ಟು, ಆನಂದ ಎ.ಶಂಭೂರು, ಪ್ರೇಮನಾಥ ಶೆಟ್ಟಿ ಅಂತರ, ಶಶಿಧರ್ ಮಾರುತಿನಗರ, ಸಂತೋಷ್,ಉದಯ ಕುಮಾರ್ ಶೆಟ್ಟಿ,

ದಿನೇಶ್ ಶೆಟ್ಟಿ ದಂಬೆದಾರ್, ಕೃಷ್ಣ ಕುಲಾಲ್, ನಾಗೇಶ್ ಕುಲಾಲ್, ಯಶೋಧರ ಬಂಗೇರ, ರಂಜಿತ್ ಮಾಣಿಮಜಲು,ವಸಂತ ಬೀಮಗದ್ದೆ, ಸುರೇಂದ್ರ ಕೊಪ್ಪಳಕೋಡಿ,ನಾರಾಯಣ ಕೇದಿಗೆ,ಪುರುಷೋತ್ತಮ,ಕೇಶವ ಬರ್ಕೆ, ಸತೀಶ್ ನಾಯಿಲ, ಚಿತ್ತರಂಜನ್ ಮತ್ತಿತರರು ಉಪಸ್ಥಿತರಿದ್ದರು

More from the blog

ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ಆತ್ಮಹತ್ಯೆ

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆಯಲ್ಲಿ ಮಹಿಳೆಯೊಬ್ಬರು ತಂದೆ ಹಾಗೂ ಪುತ್ರಿಯ ಮುಂದೆಯೇ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು‌ ನಡೆದಿದೆ. ಕುಮ್ಡೇಲು ನಿವಾಸಿ ಉಮೇಶ್ ಬೆಳ್ಚಡರ ಪತ್ನಿ...

ಲೋಕಸಭಾ ಚುನಾವಣೆ : ದಕ್ಷಿಣ ಕನ್ನಡ ಕ್ಷೇತ್ರದ ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ನೇಮಕ

ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಲು ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ಅವರನ್ನು ನೇಮಕ ಮಾಡಲಾಗಿದೆ.    

ವಿಟ್ಲ ಪೇಟೆಯಲ್ಲಿ ಕಾಂಗ್ರೆಸ್ ರೋಡ್ ಶೋ: ಸುಡುಬಿಸಿಲಿಗೂ ಜಗ್ಗದ ಉತ್ಸಾಹ

ವಿಟ್ಲ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಮಂಗಳವಾರ ವಿಟ್ಲ ಪೇಟೆಯಲ್ಲಿ ರೋಡ್ ಶೋ ನಡೆಸಿ, ಪ್ರಚಾರ ಕಾರ್ಯ ನಡೆಸಿದರು. ಧಾರ್ಮಿಕ ಕೇಂದ್ರಗಳಲ್ಲಿ ವಿಶೇಷ ಪ್ರಾರ್ಥನೆ ನಡೆಸಿ, ಬಳಿಕ...

ಮಾಜಿ ಸಚಿವ ಜನಾರ್ಧನ ಪೂಜಾರಿ ಅವರ ನಿವಾಸಕ್ಕೆ ತೆರಳಿ ಮತದಾನ ಪ್ರಕ್ರಿಯೆ

ಚುನಾವಣಾ ಆಯೋಗದ ನಿರ್ದೇಶನದಂತೆ ಕಳೆದ ಬಾರಿಯಂತೆ ಸೆಕ್ಟರ್‌ ಅಧಿಕಾರಿಗಳ ನೇತೃತ್ವದಲ್ಲಿ ಮತಗಟ್ಟೆ ಅಧಿಕಾರಿಗಳ ತಂಡ ಮನೆ-ಮನೆಗೆ ತೆರಳಿ ಮತದಾನ ಮಾಡಿಸುತ್ತಿದೆ. ಲೋಕಸಭಾ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ 205-ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 85...