Tuesday, April 16, 2024

ಮಾಜಿ ಸಿ.ಎಂ.ಕುಮಾರಸ್ವಾಮಿ ಹೇಳಿಕೆ ವಿರೋಧಿಸಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

ಬಂಟ್ವಾಳ: ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಮಾಜಿ ಸಿ.ಎಂ. ಕುಮಾರ ಸ್ವಾಮಿ ಅವರ ಹೇಳಿಕೆಯನ್ನು ವಿರೋಧಿಸಿ ಬಿಸಿರೋಡಿನ ಪ್ಲೈ ಓವರ್ ನ ಅಡಿಭಾಗದಲ್ಲಿ ಪ್ರತಿಭಟನೆ ನಡೆಯಿತು.

ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ದಾರಿತಪ್ಪುತ್ತಿದ್ದಾರೆ ಎಂಬ ಹೇಳಿಕೆಯನ್ನು ಕುಮಾರ ಸ್ವಾಮಿ ನೀಡಿದ್ದು, ಇದು ಖಂಡನೀಯ ಎಂದು ಮಹಿಳಾ ಕಾಂಗ್ರೆಸ್ ತಿಳಿಸಿದೆ.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಬಿ.ರಮಾನಾಥ ರೈ , ಹೆಣ್ಣು ಮಕ್ಕಳಿಗೆ ಅಪಮಾನ ಮಾಡಿದ್ದು,ಈ ಮಾತಿನಿಂದ ಹೇಳಿಕೆ ನೀಡಿದವರ ಮೌಲ್ಯ ಕುಸಿಯುತ್ತದೆ ಎಂದು ತಿಳಿಸಿದರು.

ಬಿಜೆಪಿಯವರು ಮಾತೆಯರು,ಮಾತೆಯರು ಎಂದು ಮತಪಡೆಯುತ್ತಾರೆ ವಿನಹಃ ಅವರಿಗೆ ಗೌರವ ನೀಡಲು ಗೊತ್ತಿಲ್ಲ ಎಂದು ಆರೋಪ ಮಾಡಿದರು.

ಈ ಹೇಳಿಕೆಗೆ ಮಹಿಳೆಯರು ಒಂದಾಗಿ ಲೋಕಸಭಾ ಚುನಾವಣೆಯಲ್ಲಿ ಪಾಠ ಕಲಿಸಬೇಕು ಎಂದು ಅವರು ತಿಳಿಸಿದರು.

ಪ್ರತಿಭಟನೆಯಲ್ಲಿ ಜೊಸ್ಪಿನ್ ಡಿಸೋಜ,ಜಯಂತಿ ಪೂಜಾರಿ,ಜೆಸಿಂತಾ ಡಿಸೋಜ,ಮಲ್ಲಿಕಾ ಶೆಟ್ಟಿ,ಅಶ್ವನಿಕುಮಾರ್ ರೈ, ಬೇಬಿಕುಂದರ್,ಸುದೀಪ್ ಕುಮಾರ್ ರೈ,ಮಾಯಿಲಪ್ಪ ಸಾಲಿಯಾನ್,ಐಡಾ ಸುರೇಶ್ ,ಸುದರ್ಶನ್ ಜಯುನ್ ಶೋಭಾ ಶೆಟ್ಟಿ,ಜನಾರ್ದನ ಚಂಡ್ತಿಮಾರ್, ಪದ್ಮಶೇಖರ್ ಜೈನ್ ,ಸಂಜೀವ ಪೂಜಾರಿ, ಮಧುಸೂದನ್ ಶೆಣೈ,ಪರಮೇಶ್ವರ ಮೂಲ್ಯ,ಅಬ್ಬಾಸ್ ಆಲಿ,ಚಂದ್ರಪ್ರಕಾಶ್ ಶೆಟ್ಟಿ,ಸದಾಶಿವ ಬಂಗೇರ ಉಪಸ್ಥಿತರಿದ್ದರು.

More from the blog

ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ಸಾವು

ಮೂಡುಬಿದಿರೆ: ಮೆದುಳು ಜ್ವರ ಉಲ್ಪಣಗೊಂಡ ಪರಿಣಾಮ ವಿದ್ಯಾರ್ಥಿನಿಯೋರ್ವಳು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಮೂಡುಬಿದಿರೆ ನಿವಾಸಿ ವಿದ್ಯಾರ್ಥಿನಿ ಸ್ವಸ್ತಿ ಶೆಟ್ಟಿ ಮೃತ್ಯು. ಸ್ವಸ್ತಿ ಶೆಟ್ಟಿ ಅವರು ಶಿರ್ತಾಡಿ ಮೌಂಟ್‌ ಕಾರ್ಮೆಲ್‌ ಹೈಸ್ಕೂಲ್ ನಲ್ಲಿ ನ...

ಅಪಘಾತ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ : ಬಜರಂಗದಳ, ವಿ.ಹಿಂ.ಪರಿಷತ್ ಕಲ್ಲಡ್ಕ ಪ್ರಖಂಡದಿಂದ ಖಂಡನೆ

ಬಂಟ್ವಾಳ: ಅಪಘಾತ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ ನಡೆಸಿದ ಘಟನೆ ಕಲ್ಲಡ್ಕದ ಕರಿಂಗಾನ ಕ್ರಾಸ್ ಎಂಬಲ್ಲಿ ಸಂಜೆ ವೇಳೆ ನಡೆದಿದೆ. ಪುತ್ತೂರು ಏರ್ಮುಂಜ ಪಲ್ಲ ನಿವಾಸಿಗಳಾದ ಮಂಜುನಾಥ್ ಮತ್ತು ಅವರ ಪತ್ನಿ ಪೂರ್ಣಿಮಾ...

ಪುಣಚ ವಲಯ ಕಾಂಗ್ರೆಸ್ ಸಮಿತಿ ಕಾರ್ಯಕರ್ತರ ಸಭೆ

ವಿಟ್ಲ - ಪುಣಚ ವಲಯ ಕಾಂಗ್ರೆಸ್ ಸಮಿತಿ ಕಾರ್ಯಕರ್ತರ ಸಭೆ ನೀರುಮಜಲು ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ವಠಾರದಲ್ಲಿ ನಡೆಯಿತು. ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ ಕಳೆದ...

ಕೆನರಾ ರೊಬೆಕೋ ಸಂಸ್ಥೆಯಿಂದ ಕೊಯಿಲ ಶಾಲಾ ವಿದ್ಯಾರ್ಥಿಗಳಿಗೆ ಬೈಸಿಕಲ್ ಕೊಡುಗೆ

ಬಂಟ್ವಾಳ: ತಾಲೂಕಿನ ಕೊಯಿಲ ಸರ್ಕಾರಿ ಪ್ರೌಢಶಾಲೆ ಇಲ್ಲಿನ ವಿದ್ಯಾರ್ಥಿಗಳಿಗೆ ಕೆನರಾ ರೊಬೆಕೋ ಸಂಸ್ಥೆಯ ವತಿಯಿಂದ 45 ಬೈಸಿಕಲ್ ಗಳನ್ನು ವಿತರಿಸಲಾಯಿತು. ಕೆನರಾ ರೊಬೆಕೋ ಸಂಸ್ಥೆಯ ಮಂಗಳೂರು ವಿಭಾಗದ ವ್ಯವಸ್ಥಾಪಕರಾದ ಮುರಳೀಧರ ಶೆಣೈ, ಅಧಿಕಾರಿ ರಾಜೇಶ್...