Thursday, April 11, 2024

ಬಂಟ್ವಾಳದ ಬಡಗಕಜೆಕಾರು, ತೆಂಕಕಜೆಕಾರು ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ “ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ”ದ ಅಂಗವಾಗಿ ಬಂಟ್ವಾಳದ ಬಡಗಕಜೆಕಾರು, ತೆಂಕಕಜೆಕಾರು ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ ಮತಯಾಚನೆ ನಡೆಸಿದರು.

ಲೋಕಸಭಾ ಅಭ್ಯರ್ಥಿಯ ಪರಿಚಯ ಪತೃ, ಹಾಗೂ ಮೋದಿ ಸರಕಾರದ ಅವಧಿಯಲ್ಲಿ ನಡೆಸಲಾದ ಯೋಜನೆಗಳ ಮಾಹಿತಿ ಕರಪತ್ರವನ್ನು ಮತದಾರರಿಗೆ ನೀಡಿದರು. ಎ. 14 ರಂದು ಮಂಗಳೂರಿನಲ್ಲಿ ನಡೆಯಲಿರುವ ನರೇಂದ್ರ ಮೋದಿಯವರ ರೋಡ್ ಶೋ ಕಾರ್ಯಕ್ರಮದಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗುವಂತೆ ಮನವಿ ಮಾಡಿದರು.

ಬಳಿಕ ಕಾರ್ಯಕರ್ತರ ಜೊತೆ ಮಾತನಾಡಿದ ಅವರು ದೇಶದ ರಕ್ಷಣಾ ವ್ಯವಸ್ಥೆಯಲ್ಲಿ ಮಹತ್ತರವಾದ ಬದಲಾವಣೆ ಮಾಡಿದ್ದು ನರೇಂದ್ರ ಮೋದಿಯವರ ನೇತ್ರತ್ವದ ಬಿಜೆಪಿ ಆಡಳಿತ ಅವಧಿ ಎಂಬುದನ್ನು ನಾವು ನೆನಪಿಸಿಕೊಳ್ಳುಬೇಕಾಗಿದೆ. ಭಾರತದ ಸಂಸ್ಕ್ರತಿಯನ್ನು ಇಡೀ ಜಗತ್ತಿಗೆ ಪಸರಿಸುವ ಮೂಲಕ ಗೌರವ ಪಡೆಯಲು ಅವಕಾಶ ಮಾಡಿದ್ದು ಪ್ರಧಾನಿ ನರೇಂದ್ರ ‌ಮೋದಿಯವರು ಎಂದು ತಿಳಿಸಿದರು. ಕೊರೊನೊ ಸಂದರ್ಭದಲ್ಲಿ ಜೀವ ಮತ್ತು ಜೀವನವನ್ನು ಕಲ್ಪಿಸುವ ಕಾರ್ಯವನ್ನು ಕೇಂದ್ರ ಸರಕಾರ ಮಾಡಿದೆ ಎಂದು ತಿಳಿಸಿದರು. ದ.ಕ.ಜಿಲ್ಲೆಯ ಜನರಿಗೆ ಮಕ್ಕಳ ಭವಿಷ್ಯ ಮುಖ್ಯವಾಗಿದ್ದು ಶಾಂತಿಯ ಮತ್ತು ಸಮೃದ್ದ ಜಿಲ್ಲೆಯ ಅಭಿವೃದ್ಧಿಗೆ ಮತ್ತೊಮ್ಮೆ ಮೋದಿಯವರು ಪ್ರಧಾನಿಯಾಗಬೇಕು ಹಾಗೂ ಜಿಲ್ಲೆಯ ಸಂಸದರಾಗಿ ಕ್ಯಾ.ಬ್ರಿಜೇಶ್ ಚೌಟ ಅವರು ಅತ್ಯಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಬೇಕು ಎಂದು ತಿಳಿಸಿದರು. ಅಭಿವೃದ್ಧಿ ಎಂಬುದು ನಿಂತ ನೀರಾಗದೆ ನಿರಂತರವಾಗಿ ಹರಿಯುವ ನದಿಯಾಗಬೇಕು. ಬಿಜೆಪಿ ಪಕ್ಷಕ್ಕೆ ದೇಶ ಮುಖ್ಯವಾಗಿದ್ದು,ಹಿಂದುತ್ವದ ಜೊತೆಯಲ್ಲಿ ಅಭಿವೃದ್ಧಿಯನ್ನು ಮಾಡಿ ತೋರಿಸಿದ್ದೇವೆ ಎಂದು ತಿಳಿಸಿದರು. ಪುಂಜಾಲಕಟ್ಟೆಯಲ್ಲಿ ಇಲ್ಲಿನ ಜನರ ಬಹು ವರ್ಷದ ಕನಸಾಗಿದ್ದ ಸರಕಾರಿ ಆಸ್ಪತ್ರೆಯ ನಿರ್ಮಾಣಕ್ಕೆ ವೇಗ ದೊರೆತಿದೆ, ಹಾಗೂ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆ ನಿರ್ಮಾಣಕ್ಕೆ ಶಿಲಾನ್ಯಾಸ ನಡೆದಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿಗೆ ಕೊಡುಗೆ ನೀಡುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜಿ.ಪಂ.ಮಾಜಿ ಸದಸ್ಯ ತುಂಗಪ್ಪ ಬಂಗೇರ ಮಾತನಾಡಿ,ದೇಶ ಅಭಿವೃದ್ಧಿಯಾಗಬೇಕಾದರೆ ಗ್ರಾಮ ಅಭಿವೃದ್ಧಿಯಾಗಬೇಕು. ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಅಭಿವೃದ್ಧಿಯಾಗದೆ ಉಳಿದ ಹಳ್ಳಿಹಳ್ಳಿಯ ಅಭಿವೃದ್ಧಿಯನ್ನು ಬಂಟ್ವಾಳದಲ್ಲಿ ರಾಜೇಶ್ ನಾಯ್ಕ್ ಅವರು ಶಾಸಕರಾದ ಬಳಿಕ ಮಾಡಿದ್ದಾರೆ ಎಂದು ಎದೆ ತಟ್ಟಿ ಹೇಳಬಹುದು.

ಇದಕ್ಕೆ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರಕಾರದ ಸಹಕಾರ ಕೂಡ ಇದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿಗೆ ಮತ್ತೊಮ್ಮೆ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕು ಎಂದು ತಿಳಿಸಿದರು. ಜಾತಿ ಹೆಸರಿನಲ್ಲಿ ಬಿಜೆಪಿಯನ್ನು ಒಡೆಯುವ ಕೆಲಸ ಕಾಂಗ್ರೆಸ್ ‌ಮಾಡುತ್ತಿದ್ದು, ಕಾರ್ಯಕರ್ತರು ಜಾಗರೂಕತೆಯಿಂದ ಇರಬೇಕಾಗಿದೆ. ದೇಶ ಮುಖ್ಯವೇ ಹೊರತು ಜಾತಿ ಮುಖ್ಯವಲ್ಲ,ದೇಶ ಉಳಿದರೆ ಮಾತ್ರ ನಾವು ಉಳಿಯಬಹುದು,ಸಂಸ್ಕೃತಿ ಉಳಿಯಬಹುದು ಎಂದು ತಿಳಿಸಿದರು.

ನಾವೂರ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಚಿದಾನಂದ ರೈ ಕಕ್ಯ,ದೇವದಾಸ ಅಬ್ರ ,ಉಪಾಧ್ಯಕ್ಷೆ ಸುಗಂದಿ, ಸದಸ್ಯರಾದ ಸುರೇಶ್ ಬಾರ್ದೊಟ್ಟು,ಸತೀಶ್ ಬಂಗೇರ,ಉಷಾ ಕೇಲ್ದಬೈಲು, ಪ್ರಮುಖರಾದ ಮನೋಹರ್ ಶೇರ, ಕಾಂತಪ್ಪ ಪೂಜಾರಿ ಕೆಳಗಿನ ಪೈರು, ಸುರೇಶ್ ಪೂಜಾರಿ ಬಾರ್ದೊಟ್ಟು, ವಿಶ್ವನಾಥ್ ನಾಯ್ಕ್ ನಡ್ಯೇಲು, ಕೀರ್ತನ್ ಕುಲಾಲ್, ಪ್ರೇಮಾನಂದ,ಸುರೇಖಾ,ರವೀಂದ್ರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಹರೀಶ್ ಪ್ರಭು ಸ್ವಾಗತಿಸಿದರು.

More from the blog

ಲೋಕಸಭಾ ಚುನಾವಣೆಯ ಹಿನ್ನೆಲೆ : ಚಾರ್ಮಾಡಿಯ ಮೂವರು ಗಡಿಪಾರು

ಬೆಳ್ತಂಗಡಿ: ಚುನಾವಣ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಹಾಗೂ ಕೋಮು ಗಲಭೆಗಳಲ್ಲಿ ಭಾಗವಹಿಸುವ ಸಾಧ್ಯತೆ ಇರುವ ಕಾರಣ ಮೂವರು ರೌಡಿಶೀಟರ್‌ಗಳನ್ನು ಧರ್ಮಸ್ಥಳ ಪೊಲೀಸರು ಗಡಿಪಾರು ಮಾಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ನಿವಾಸಿಗಳಾದ...

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...