Wednesday, April 17, 2024

ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ಆತ್ಮಹತ್ಯೆ

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆಯಲ್ಲಿ ಮಹಿಳೆಯೊಬ್ಬರು ತಂದೆ ಹಾಗೂ ಪುತ್ರಿಯ ಮುಂದೆಯೇ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು‌ ನಡೆದಿದೆ.

ಕುಮ್ಡೇಲು ನಿವಾಸಿ ಉಮೇಶ್ ಬೆಳ್ಚಡರ ಪತ್ನಿ ಯಶೋಧಾ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಘಟನೆಯ ಕುರಿತು ಆಕೆಯ ಪುತ್ರಿ ಸಂಪ್ರೀತಾ ನೀಡಿದ ದೂರಿನಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತ ಯಶೋಧ ಅವರು ಮೂರ್ಛೆ ರೋಗದಿಂದ ಬಳಲುತ್ತಿದ್ದು ಕೆಲವೊಂದು ಬಾರಿ ತೀವ್ರ ಕೋಪಕ್ಕೆ ಒಳಗಾಗಿ ತಾಯಿಯಲ್ಲಿ ಜಗಳ ಮಾಡುತ್ತಿದ್ದರು. ಹೀಗಾಗಿ ಯಶೋಧ ಅವರ ಗಂಡ 10 ವರ್ಷದ ಹಿಂದೆ ಬಿಟ್ಟು ಹೋಗಿರುತ್ತಾರೆ.

ಎ. ೧೫ರಂದು ನಿನ್ನೆ ರಾತ್ರಿ 09:30 ಗಂಟೆ ಸಮಯಕ್ಕೆ ತಾಯಿಯೊಂದಿಗೆ ಬಾಯಿ ಮಾತಿನ ತಕರಾರು ಮಾಡಿದ್ದು, ತಾಯಿ ಕೈಯಿಂದ ಹೊಡೆಯಲು ಮುಂದಾದಾಗ ಅಣ್ಣ ತಡೆದಿರುತ್ತಾನೆ.

ಬಳಿಕ ಯಶೋಧ ಅವರಷ್ಟಕ್ಕೆ ಬೈದುಕೊಂಡು ಹೋಗಿ ಮಲಗಿದ್ದು, ಇಂದು ಬೆಳಿಗ್ಗೆ ಎಂದಿನಂತೆ ಎದ್ದು, ಕೆ ಎಸ್ ಆರ್ ಟಿ ಸಿ ಬಿಜೈ ಬಸ್ ಸ್ಟಾಂಡ್ ಗೆ ಕೆಲಸಕ್ಕೆ ಹೋಗಿರುತ್ತಾರೆ. ಆದರೆ 9 ಗಂಟೆಗೆ ಮನೆಗೆ ಕರೆ ಮಾಡಿ “ನಾನು ಫರಂಗಿಪೇಟೆಯಲ್ಲಿದ್ದೇನೆ. ನನಗೆ ಬದುಕುವುದು ಇಷ್ಟವಿಲ್ಲ. ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ” ಎಂದು ಹೇಳಿ ಫೋನ್ ಕಟ್ ಮಾಡಿದ್ದಾರೆ.

ಕೂಡಲೇ ಪುತ್ರಿ ಹಾಗೂ ತಂದೆ ಬಾಲಕೃಷ್ಣ ಅವರ ರಿಕ್ಷಾದಲ್ಲಿ ಫರಂಗಿಪೇಟೆಗೆ ಬಂದಾಗ ಯಶೋಧಾ ಅವರು ನೇತ್ರಾವತಿ ನದಿ ಕಿನಾರೆಗೆ ವೇಗವಾಗಿ ನಡೆದುಕೊಂಡು ಹೋಗುತ್ತಿದ್ದು, ಓಡಿ ಹೋಗಿ ನದಿ ಕಿನಾರೆ ಬಳಿ ಹಿಡಿದುಕೊಂಡಾಗ ಪುತ್ರಿ ಹಾಗೂ ತಂದೆಯೊಂದಿಗೆ ಉರುಡಾಟ ಮಾಡಿ ಯಶೋಧರವರು ಏಕಾಏಕಿಯಾಗಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ.

ಕೂಡಲೇ ಅಲ್ಲಿ ಸೇರಿದ ಜನ ಸೇರಿ ಮೃತಪಟ್ಟ ಯಶೋಧ ಅವರ ಮೃತ ದೇಹವನ್ನು ಎತ್ತಿ ನದಿ ತೀರದಲ್ಲಿ ಮಲಗಿಸಿದ್ದಾರೆ. ಘಟನೆಯ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More from the blog

ಲೋಕಸಭಾ ಚುನಾವಣೆ : ದಕ್ಷಿಣ ಕನ್ನಡ ಕ್ಷೇತ್ರದ ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ನೇಮಕ

ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಲು ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ಅವರನ್ನು ನೇಮಕ ಮಾಡಲಾಗಿದೆ.    

ವಿಟ್ಲ ಪೇಟೆಯಲ್ಲಿ ಕಾಂಗ್ರೆಸ್ ರೋಡ್ ಶೋ: ಸುಡುಬಿಸಿಲಿಗೂ ಜಗ್ಗದ ಉತ್ಸಾಹ

ವಿಟ್ಲ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಮಂಗಳವಾರ ವಿಟ್ಲ ಪೇಟೆಯಲ್ಲಿ ರೋಡ್ ಶೋ ನಡೆಸಿ, ಪ್ರಚಾರ ಕಾರ್ಯ ನಡೆಸಿದರು. ಧಾರ್ಮಿಕ ಕೇಂದ್ರಗಳಲ್ಲಿ ವಿಶೇಷ ಪ್ರಾರ್ಥನೆ ನಡೆಸಿ, ಬಳಿಕ...

ಮಾಜಿ ಸಚಿವ ಜನಾರ್ಧನ ಪೂಜಾರಿ ಅವರ ನಿವಾಸಕ್ಕೆ ತೆರಳಿ ಮತದಾನ ಪ್ರಕ್ರಿಯೆ

ಚುನಾವಣಾ ಆಯೋಗದ ನಿರ್ದೇಶನದಂತೆ ಕಳೆದ ಬಾರಿಯಂತೆ ಸೆಕ್ಟರ್‌ ಅಧಿಕಾರಿಗಳ ನೇತೃತ್ವದಲ್ಲಿ ಮತಗಟ್ಟೆ ಅಧಿಕಾರಿಗಳ ತಂಡ ಮನೆ-ಮನೆಗೆ ತೆರಳಿ ಮತದಾನ ಮಾಡಿಸುತ್ತಿದೆ. ಲೋಕಸಭಾ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ 205-ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 85...

ಮಾಜಿ ಸಿ.ಎಂ.ಕುಮಾರಸ್ವಾಮಿ ಹೇಳಿಕೆ ವಿರೋಧಿಸಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

ಬಂಟ್ವಾಳ: ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಮಾಜಿ ಸಿ.ಎಂ. ಕುಮಾರ ಸ್ವಾಮಿ ಅವರ ಹೇಳಿಕೆಯನ್ನು ವಿರೋಧಿಸಿ ಬಿಸಿರೋಡಿನ ಪ್ಲೈ ಓವರ್ ನ ಅಡಿಭಾಗದಲ್ಲಿ ಪ್ರತಿಭಟನೆ ನಡೆಯಿತು. ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು...