Thursday, April 18, 2024

ಬಿಸಿರೋಡಿನ ವಾಣಿಜ್ಯ ಕಟ್ಟಡದ ಜಗುಲಿಯಲ್ಲಿ ಚೆಲ್ಲಿರುವ ರಕ್ತ : ಹಲವು ಅನುಮಾನ

ಬಂಟ್ವಾಳ: ಬಿಸಿರೋಡಿನ ವಾಣಿಜ್ಯ ಮಳಿಗೆಯ ಮುಂಭಾಗವೊಂದರಲ್ಲಿ ರಕ್ತ ಚೆಲ್ಲಿರುವುದು ಕಂಡು ಬಂದಿದ್ದು, ಅಂಗಡಿ ಮಾಲಕರಲ್ಲಿ ಒಂದಷ್ಟು ಗೊಂದಲ ಉಂಟಾದ ಘಟನೆ ನಡೆದಿದೆ.

ಎ.18 ರಂದು ಬೆಳಿಗ್ಗೆ ತಾ.ಪಂ. ನ ವಾಣಿಜ್ಯ ಕಟ್ಟಡವೊಂದರ ಜಗುಲಿಯಲ್ಲಿ ರಕ್ತ ಚೆಲ್ಲಿರುವುದು ಕಂಡು ಬಂದಿದೆ.

ಇದನ್ನು ‌ಕಂಡ ಅಂಗಡಿ ಮಾಲಕರು ಹೆದರಿದ್ದು,ಕೂಡಲೇ ಇಲ್ಲೇ ಇರುವ ನಗರ ಪೋಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.

ಕೂಡಲೇ ‌ಪೋಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಆದರೆ ರಕ್ತ ಚೆಲ್ಲಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವ ಆಸ್ಪತ್ರೆಯಲ್ಲಿ ಕೂಡ ದಾಖಲಾದ ಬಗ್ಗೆ ಠಾಣೆಗೆ ಮಾಹಿತಿ ಬಂದಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.

ಇದು ಮನುಷ್ಯ ನ ರಕ್ತವೋ ಅಥವಾ ಇತರ ಪ್ರಾಣಿಗಳ ರಕ್ತವೋ‌ ಎಂಬುದು ಇನ್ನೂ ಕೂಡ ಪತ್ತೆಯಾಗಿಲ್ಲ.

ಬಿಕ್ಷುಕರು ಅಥವಾ ಕುಡಿತದ ಮತ್ತಿನಲ್ಲಿ ಗಲಾಟೆ ನಡೆದು ಗಾಯವಾಗಿ ರಕ್ತ ಚೆಲ್ಲಿರಬಹುದೇ ಎಂಬ ಸಂಶಯಗಳು ಮೂಡಿವೆ . ಆದರೆ ಈವರೆಗೆ ಘಟನೆಗೆ ಸಂಬಂಧಿಸಿದಂತೆ ಸ್ಪಷ್ಟವಾದ ಮಾಹಿತಿ ಲಭ್ಯವಾಗಿಲ್ಲ.

More from the blog

ಲೋಕಸಭಾ ಚುನಾವಣೆ : ಎ.20 ರಂದು‌ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಬೃಹತ್ ಚುನಾವಣಾ ಪ್ರಚಾರ

ಬಂಟ್ವಾಳ: ಲೋಕಸಭಾ ಚುನಾವಣೆಯ ಪ್ರಚಾರ ಬಿರುಸಿನಿಂದ ನಡೆಯುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಎ.20 ರಂದು‌ ಶನಿವಾರ ಮಧ್ಯಾಹ್ನ 2.30 ಕ್ಕೆ ಗಂಟೆಗೆ ಬಿಸಿರೋಡಿನ ಬ್ರಹ್ಮ ಶ್ರೀನಾರಾಯಣ ಗುರು ಮಂದಿರದಲ್ಲಿ ಬೃಹತ್ ಚುನಾವಣಾ...

ಜೀಪ್ ಬೈಕ್ ಗೆ ಡಿಕ್ಕಿ… ಬೈಕ್ ಸವಾರ ಸಾವು : ಇಬ್ಬರು ಮಕ್ಕಳು ಗಂಭೀರ

ಪುತ್ತೂರು: ಜೀಪೊಂದು ಬೈಕ್ ಗೆ ಡಿಕ್ಕಿ ಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಣಿಯೂರು- ಮಂಜೇಶ್ವರ ಅಂತರಾಜ್ಯ ರಸ್ತೆಯ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ...

ನರಿಕೊಂಬು: ನವಜೀವನ ವ್ಯಾಯಾಮ ಶಾಲೆ: ಏ.21ರಂದು ಹನುಮಾನ್ ಮಂದಿರ ಲೋಕಾರ್ಪಣೆ

ಬಂಟ್ವಾಳ: ಇಲ್ಲಿನ ನರಿಕೊಂಬು ಗ್ರಾಮದ ನವಜೀವನ ವ್ಯಾಯಾಮ ಶಾಲೆ ವತಿಯಿಂದ ರೂ 1 ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣಗೊಂಡ ಶ್ರೀ ಹನುಮಾನ್ ಮಂದಿರ ಲೋಕಾರ್ಪಣೆ ಮತ್ತು ಶ್ರೀ ಆಂಜನೇಯ ಬಿಂಬ ಪುನರ್ ಪ್ರತಿಷ್ಠೆ...

ಹಿಂದೂ ಸಂಘಟನೆ ಮುಖಂಡನಿಗೆ ಚೂರಿ ಇರಿದ ಪ್ರಕರಣ : ಆರೋಪಿ ಅರೆಸ್ಟ್

ಬಂಟ್ವಾಳ: ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಚೂರಿ ಇರಿದು ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣೆಯ ಪೋಲೀಸರು ಬಂಧಿಸಿದ ಘಟನೆ ಇಂದು ನಡೆದಿದೆ. ಬಂಟ್ವಾಳ ನಿವಾಸಿ ರವಿ ಯಾನೆ ರವೀಂದ್ರ ಬಂಧಿತ ಆರೋಪಿಯಾಗಿದ್ದಾನೆ. ಎ.14 ರಂದು ಆದಿತ್ಯವಾರ...