Saturday, April 6, 2024

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ ಅಧ್ಯಕ್ಷೆ ಪ್ರಮೀಳ ಮಾಣೂರು( ಸಾಯಿಪ್ರಿಯ) ಅವರು ತಿಳಿಸಿದ್ದಾರೆ.

ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಪೊಳಲಿ ಶ್ರೀ ರಾಜರಾಜೇಶ್ವರಿ‌ ದೇವಸ್ಥಾನದ ಅನುವಂಶಿಕ ಪ್ರಧಾನ ಅರ್ಚಕ ರಾಮ್ ಭಟ್ ದೀಪ ಪ್ರಜ್ವಲಿಸುವರು. ಉದ್ಯಮಿ ರಘುನಾಥ ಸೋಮಯಾಜಿ ಉದ್ಘಾಟಿಸುವರು.

ಬಂಟ್ವಾಳ ತಾಲೂಕು ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ರಂಗೋಲಿ, ದ.ಕ.ಜಿಲ್ಲಾ ಧಾರ್ಮಿಕ ಪರಿಷತ್ತು ಸದಸ್ಯ ಜಗನ್ನಾಥ ಚೌಟ ಬದಿಗುಡ್ಡೆ, ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಘಟಕದ ಅಧ್ಯಕ್ಷ ಪ್ರವೀಣ್ ಕುಮಾರ್ ಕೋಡಿಯಾಲ್ ಬೈಲ್, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ರಾಜೇಶ್ ಸ್ಕೈಲಾರ್ಕ್, ತಾರಾನಾಥ ಶೆಟ್ಟಿ ಬೋಳಾರ, ಹಿರಿಯ ಯಕ್ಷಗಾನ ಕಲಾವಿದ ಶಿವರಾಮ ಜೋಗಿ ಅತಿಥಿಗಳಾಗಿ ಭಾಗವಹಿಸುವರು ಎಂದು ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸದಾಶಿವ ಡಿ.ತುಂಬೆ, ಲಕ್ಮೀಯಶವಂತ ಶೆಟ್ಟಿ, ಬಬಿತಾ ಎಸ್.ಎಮ್, ಚಂದ್ರಹಾಸ ಕಡೆಗೋಳಿ ಉಪಸ್ಥಿತರಿದ್ದರು.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...

ಗ್ರಾಮೀಣ ಪುನರ್ವಸತಿ ಕಾರ್ಯಕತರಿಗೆ ಮತದಾನ ಜಾಗೃತಿ

ಬಂಟ್ವಾಳ ತಾಲೂಕು ಪಂಚಾಯತ್, ತಾಲೂಕು ಕಚೇರಿ ಹಾಗೂ ತಾಲೂಕು ಸ್ವೀಪ್ ಸಮಿತಿಯಿಂದ ಗ್ರಾಮೀಣ ಪುನರ್ವಸತಿ ಕಾರ್ಯಕತರಿಗೆ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ತಾಲೂಕು ಆಡಳಿತ ಸೌಧದಿಂದ ಹಮ್ಮಿಕೊಂಡ ಜಾಥಾ ಬಿ.ಸಿ.ರೋಡ್ ಖಾಸಗಿ ಬಸ್ ನಿಲ್ದಾಣ...