Friday, April 19, 2024

ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ : ಮಹಿಳೆ ಗಂಭೀರ

ಬೆಳ್ತಂಗಡಿ: ತನ್ನ ಮನೆಯ ಸಾಕು ನಾಯಿ ಜತೆ ಮನೆ ಮಾಲಕಿ ಮುದ್ದಾಡುವಾಗ ಏಕಾಏಕಿ ದಾಳಿ ಮಾಡಿ ತಲೆ ಭಾಗವನ್ನು ಸೀಳಿ ಹಾಕಿ ಕೈಗೆ ಗಂಭೀರ ಗಾಯ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದಲ್ಲಿ ನಡೆದಿದೆ.

ಮುಂಡಾಜೆ ಗ್ರಾಮದ ನಿಡಿಗಲ್ ಓಂಕಾರ್ ನಿವಾಸಿ ದಿ.ರಾಮ್ ದಾಸ್ ಪ್ರಭು ಅವರ ಪತ್ನಿ ಪೂರ್ಣಿಮಾ ಗಾಯಗೊಂಡ ಮಹಿಳೆಯಾಗಿದ್ದಾರೆ.

ಪೂರ್ಣಿಮಾ ತನ್ನ ಮನೆಯಲ್ಲಿ ಸಾಕಿದ್ದ ಸಾಕು ನಾಯಿ ಜತೆ ಎಂದಿನಂತೆ ಎ.18ರಂದು ಆಟವಾಡುತ್ತಿದ್ದರು. ಈ ವೇಳೆ ಮಹಿಳೆ ಕಾಲು ಜಾರಿ ನೆಲಕ್ಕೆ ಜಾರಿಬಿದ್ದ ವೇಳೆ ಸಾಕು ನಾಯಿ ಮಹಿಳೆಯ ಮೇಲೆ ದಾಳಿ ಮಾಡಿ ತಲೆ ಭಾಗವನ್ನು ಸೀಳಿ ಹಾಕಿದ್ದು. ಕೈಗೆ ಕಚ್ಚಿ ಗಂಭೀರ ಗಾಯಮಾಡಿದೆ.

ಮನೆಯವರು ತಕ್ಷಣ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದಾರೆ‌.

 

More from the blog

ಬಿಸಿರೋಡಿನ ವಾಣಿಜ್ಯ ಕಟ್ಟಡದ ಜಗುಲಿಯಲ್ಲಿ ಚೆಲ್ಲಿರುವ ರಕ್ತ : ಹಲವು ಅನುಮಾನ

ಬಂಟ್ವಾಳ: ಬಿಸಿರೋಡಿನ ವಾಣಿಜ್ಯ ಮಳಿಗೆಯ ಮುಂಭಾಗವೊಂದರಲ್ಲಿ ರಕ್ತ ಚೆಲ್ಲಿರುವುದು ಕಂಡು ಬಂದಿದ್ದು, ಅಂಗಡಿ ಮಾಲಕರಲ್ಲಿ ಒಂದಷ್ಟು ಗೊಂದಲ ಉಂಟಾದ ಘಟನೆ ನಡೆದಿದೆ. ಎ.18 ರಂದು ಬೆಳಿಗ್ಗೆ ತಾ.ಪಂ. ನ ವಾಣಿಜ್ಯ ಕಟ್ಟಡವೊಂದರ ಜಗುಲಿಯಲ್ಲಿ ರಕ್ತ...

ಲೋಕಸಭಾ ಚುನಾವಣೆ : ಎ.20 ರಂದು‌ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಬೃಹತ್ ಚುನಾವಣಾ ಪ್ರಚಾರ

ಬಂಟ್ವಾಳ: ಲೋಕಸಭಾ ಚುನಾವಣೆಯ ಪ್ರಚಾರ ಬಿರುಸಿನಿಂದ ನಡೆಯುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಎ.20 ರಂದು‌ ಶನಿವಾರ ಮಧ್ಯಾಹ್ನ 2.30 ಕ್ಕೆ ಗಂಟೆಗೆ ಬಿಸಿರೋಡಿನ ಬ್ರಹ್ಮ ಶ್ರೀನಾರಾಯಣ ಗುರು ಮಂದಿರದಲ್ಲಿ ಬೃಹತ್ ಚುನಾವಣಾ...

ಹಿಮ್ಮುಖವಾಗಿ ಚಲಿಸಿದ ಪಿಕಪ್‌… ವ್ಯಕ್ತಿ ಸಾವು

ಬೆಳ್ತಂಗಡಿ: ಶಿಬಾಜೆ ಗ್ರಾಮದ ತಂಬ್ಲಾಜೆಯಲ್ಲಿ ಪಿಕಪ್‌ ವಾಹನವೊಂದು ಹಿಮ್ಮುಖವಾಗಿ ಚಲಿಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ರುಕ್ಮ ಮುಗೇರ ಹಾಗೂ ನಾಗೇಶ್‌ ಅವರು ಪಿಕಪ್‌ ವಾಹನದಲ್ಲಿ...

ಜೀಪ್ ಬೈಕ್ ಗೆ ಡಿಕ್ಕಿ… ಬೈಕ್ ಸವಾರ ಸಾವು : ಇಬ್ಬರು ಮಕ್ಕಳು ಗಂಭೀರ

ಪುತ್ತೂರು: ಜೀಪೊಂದು ಬೈಕ್ ಗೆ ಡಿಕ್ಕಿ ಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಣಿಯೂರು- ಮಂಜೇಶ್ವರ ಅಂತರಾಜ್ಯ ರಸ್ತೆಯ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ...