Friday, April 5, 2024

ಬೆಳ್ತಂಗಡಿ: ಆನ್ ಲೈನ್ ಮೂಲಕ ಸಾಲ ನೀಡುವುದಾಗಿ ನಂಬಿಸಿ ವಂಚನೆ : ದೂರು ದಾಖಲು

ಬೆಳ್ತಂಗಡಿ: ಮಹಿಳೆಯೊಬ್ಬರಿಗೆ ಫೇಸ್‌ಬುಕ್‌ ಆಪ್‌ ಮೂಲಕ ಸಾಲ ನೀಡುವುದಾಗಿ ಅಪರಿಚಿತರರು ನಂಬಿಸಿ ವಂಚನೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದಲ್ಲಿ ನಡೆದಿದೆ.

ವಂಚನೆಗೊಳಗಾದ ಮಹಿಳೆ ನೆಬಿಸಾ ಅವರು ಈ ಬಗ್ಗೆ ವೇಣೂರು ಪೋಲಿಸ್‌ ಠಾಣೆಗೆ ದೂರು ನೀಡಿದ್ದಾರೆ.

ಮಾ. 21ರಂದು ಫೇಸ್‌ಬುಕ್‌ನಲ್ಲಿ ಮನಿ ವ್ಯೂ ಪರ್ಸನಲ್‌ ಲೋನ್‌ ಆಪ್ ಮೂಲಕ ಅಪರಿಚಿತರರು ಪರಿಚಯ ಮಾಡಿಕೊಂಡಿದ್ದಾರೆ. ಸಾಲದ ಬಗ್ಗೆ ಅಪರಿಚಿತರಿಂದ ಮಾಹಿತಿ ಪಡೆದ ನೆಬಿಸಾ ಅವರು 5 ಲಕ್ಷ ರೂ. ಸಾಲ ಪಡೆಯಲು ದಾಖಲೆಗಳನ್ನು ಕಳುಹಿಸಿದ್ದರು.

ನಂತರ ಫೋನ್‌ ಮೂಲಕ ನೆಬಿಸಾ ಅವರನ್ನು ಸಂಪರ್ಕಿಸಿದ ಅಪರಿಚಿತರರು ಮಾ. 28ರ ತನಕ ವಿವಿಧ ಹಂತದಲ್ಲಿ ಒಟ್ಟು 96,743 ರೂ. ಹಣವನ್ನು ಆನ್‌ ಲೈನ್‌ ಮೂಲಕ ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಬಳಿಕ ಸಾಲವನ್ನು ನೀಡದೇ, ವರ್ಗಾಯಿಸಿಕೊಂಡ ಹಣವನ್ನು ಹಿಂತಿರುಗಿಸದೆ ವಂಚನೆಗೈದಿರುವುದಾಗಿ ತಿಳಿಸಲಾಗಿದೆ.

More from the blog

ಜಿಲ್ಲಾ ಕಾಂಗ್ರೇಸ್ ಹಿಂದುಳಿದ ವರ್ಗದ ಉಪಾಧ್ಯಕ್ಷ ಪದ್ಮನಾಭ ಸೇವಂತ ಅವರದು, ಆತ್ಮಹತ್ಯೆಯಲ್ಲ, ವ್ಯವಸ್ಥಿತ ಕೊಲೆ ಶಂಕೆ: ಪ್ರಕಾಶ್ ಶೆಟ್ಟಿ ತನಿಖೆಗೆ ಒತ್ತಾಯ

ಬಂಟ್ವಾಳ: ದ.ಕ.ಜಿಲ್ಲಾ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಪದ್ಮನಾಭ‌ ಸೇವಂತ ಎಂಬವರ ಸಾವಿನ ಸುತ್ತ ಅನುಮಾನಗಳು ವ್ಯಕ್ಯವಾಗಿದ್ದು, ಮೇಲ್ನೋಟಕ್ಕೆ ಇದೊಂದು ಆತ್ಮಹತ್ಯೆ ಪ್ರಕರಣ ಎಂದು ಕಂಡು ಬಂದರೂ ಇದನ್ನು ವಿಮರ್ಶೆ ಮಾಡಿದರೆ ಇದೊಂದು ಕೊಲೆ...

ನಾಪತ್ತೆಯಾಗಿದ್ದ ಸರಕಾರಿ ಅಧಿಕಾರಿಯ ಮೃತದೇಹ ಪಟ್ರಮೆ ಸಮೀಪದ ನದಿಯಲ್ಲಿ ಪತ್ತೆ

ಬಂಟ್ವಾಳ: ಕಳೆದ ಆರು‌ ದಿನಗಳ‌ ಹಿಂದೆ ಕಾಣೆಯಾಗಿದ್ದ ಸರಕಾರಿ ಆದಿಕಾರಿಯೋರ್ವನ‌ ಮೃತದೇಹ ಇಂದು ಸಂಜೆ ಧರ್ಮಸ್ಥಳ ಪೋಲೀಸ್ ಠಾಣಾ ವ್ಯಾಪ್ತಿಯ ಪಟ್ರಮೆ ಎಂಬಲ್ಲಿ ನದಿಯಲ್ಲಿ ಪತ್ತೆಯಾಗಿದೆ. ಚುನಾವಣಾ ಕರ್ತವ್ಯದಲ್ಲಿರುವ ಸರಕಾರಿ ಅಧಿಕಾರಿ ಲಕ್ಮೀನಾರಾಯಣ ಅವರು...

ಪ್ರಾಣಿಗಳಿಗೆ ವಿಷವಿಕ್ಕಿದ ದುರುಳರು : 10 ಕ್ಕೂ ಅಧಿಕ ಸಾಕು, ಬೀದಿ ನಾಯಿಗಳ ಸಾವು

ಬೆಳ್ತಂಗಡಿ: ಮುಂಡಾಜೆ ಗ್ರಾಮದ ಸೋಮಂತಡ್ಕದ ಅಗರಿ- ಹುರ್ತಾಜೆ ರಸ್ತೆಯಲ್ಲಿ ಯಾರೋ ದುಷ್ಕರ್ಮಿಗಳು ವಿಷವಿಕ್ಕಿದ ಪರಿಣಾಮ 10ಕ್ಕಿಂತ ಅಧಿಕ ಸಾಕು ನಾಯಿ ಹಾಗೂ ಬೀದಿ ನಾಯಿಗಳು ಸಾವನ್ನಪ್ಪಿದ ಘಟನೆ ನಡೆದಿದೆ. ಮಾ. 30 ರ ಶನಿವಾರ...

ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ವ್ಯಕ್ತಿ ಸಾವು ಸ್ಕೂಟರ್ ನಲ್ಲಿದ್ದ ಯುವತಿ ಗಂಭೀರ

ಬೆಳ್ತಂಗಡಿ : ದ್ವಿಚಕ್ರ ವಾಹನ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ ಘಟನೆ ಗುರುವಾರ ರಾತ್ರಿ ನಡೆದಿದೆ. ಬೆಳ್ತಂಗಡಿ ನಗರದ ಸಂತೆಕಟ್ಟೆ ಬಸ್ ನಿಲ್ದಾಣದ ಮುಂಭಾಗದಲ್ಲಿ...