Saturday, April 6, 2024

ಹೆರಿಗೆ ವೇಳೆ ವಿಪರೀತ ರಕ್ತಸ್ರಾವ : ಲಾಯಿಲದ ಮಹಿಳೆ ಸಾವು

ಬೆಳ್ತಂಗಡಿ: ಹೆರಿಗೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ತೀವ್ರ ರಕ್ತ ಸ್ರಾವದಿಂದ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಬದ್ಯಾರ್ ಖಾಸಗಿ ಆಸ್ಪತ್ರೆಯಲ್ಲಿ ಲಾಯಿಲ ಗ್ರಾಮದ ಗಾಂಧಿನಗರ ನಿವಾಸಿ ಗಾಯತ್ರಿ ಎಂಬವರು ಎರಡನೇ ಹೆರಿಗೆಗಾಗಿ ಎ.03 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಎ.04 ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಅದರೆ ಹೆರಿಗೆ ನಂತರ ವಿಪರೀತ ರಕ್ತ ಸ್ರಾವ ಉಂಟಾಗಿದ್ದು ರಾತ್ರಿ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದು ಇದರಿಂದ ಕುಟುಂಬಸ್ಥರು ಆಕ್ರೋಶಗೊಂಡರಲ್ಲದೇ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ್ದಾರೆ.

ಕೆಲ ಹೊತ್ತು ಗೊಂದಲದ ವಾತಾವರಣ ನಿರ್ಮಾಣವಾಗಿದ್ದು ಸ್ಥಳಕ್ಕೆ ಪೊಲೀಸರು ಆಗಮಿಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಅದರೆ ಈ ಬಗ್ಗೆ ಯಾವುದೇ ಪೊಲೀಸ್ ದೂರು ಕೂಡ ದಾಖಲಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ಮೃತ ಮಹಿಳೆಗೆ 3 ವರ್ಷದ ಹೆಣ್ಣು ಮಗುವೊಂದಿದೆ.

More from the blog

ಬೆಳ್ತಂಗಡಿ: ಆನ್ ಲೈನ್ ಮೂಲಕ ಸಾಲ ನೀಡುವುದಾಗಿ ನಂಬಿಸಿ ವಂಚನೆ : ದೂರು ದಾಖಲು

ಬೆಳ್ತಂಗಡಿ: ಮಹಿಳೆಯೊಬ್ಬರಿಗೆ ಫೇಸ್‌ಬುಕ್‌ ಆಪ್‌ ಮೂಲಕ ಸಾಲ ನೀಡುವುದಾಗಿ ಅಪರಿಚಿತರರು ನಂಬಿಸಿ ವಂಚನೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದಲ್ಲಿ ನಡೆದಿದೆ. ವಂಚನೆಗೊಳಗಾದ ಮಹಿಳೆ ನೆಬಿಸಾ ಅವರು ಈ ಬಗ್ಗೆ ವೇಣೂರು ಪೋಲಿಸ್‌...

ಜಿಲ್ಲಾ ಕಾಂಗ್ರೇಸ್ ಹಿಂದುಳಿದ ವರ್ಗದ ಉಪಾಧ್ಯಕ್ಷ ಪದ್ಮನಾಭ ಸೇವಂತ ಅವರದು, ಆತ್ಮಹತ್ಯೆಯಲ್ಲ, ವ್ಯವಸ್ಥಿತ ಕೊಲೆ ಶಂಕೆ: ಪ್ರಕಾಶ್ ಶೆಟ್ಟಿ ತನಿಖೆಗೆ ಒತ್ತಾಯ

ಬಂಟ್ವಾಳ: ದ.ಕ.ಜಿಲ್ಲಾ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಪದ್ಮನಾಭ‌ ಸೇವಂತ ಎಂಬವರ ಸಾವಿನ ಸುತ್ತ ಅನುಮಾನಗಳು ವ್ಯಕ್ಯವಾಗಿದ್ದು, ಮೇಲ್ನೋಟಕ್ಕೆ ಇದೊಂದು ಆತ್ಮಹತ್ಯೆ ಪ್ರಕರಣ ಎಂದು ಕಂಡು ಬಂದರೂ ಇದನ್ನು ವಿಮರ್ಶೆ ಮಾಡಿದರೆ ಇದೊಂದು ಕೊಲೆ...

ನಾಪತ್ತೆಯಾಗಿದ್ದ ಸರಕಾರಿ ಅಧಿಕಾರಿಯ ಮೃತದೇಹ ಪಟ್ರಮೆ ಸಮೀಪದ ನದಿಯಲ್ಲಿ ಪತ್ತೆ

ಬಂಟ್ವಾಳ: ಕಳೆದ ಆರು‌ ದಿನಗಳ‌ ಹಿಂದೆ ಕಾಣೆಯಾಗಿದ್ದ ಸರಕಾರಿ ಆದಿಕಾರಿಯೋರ್ವನ‌ ಮೃತದೇಹ ಇಂದು ಸಂಜೆ ಧರ್ಮಸ್ಥಳ ಪೋಲೀಸ್ ಠಾಣಾ ವ್ಯಾಪ್ತಿಯ ಪಟ್ರಮೆ ಎಂಬಲ್ಲಿ ನದಿಯಲ್ಲಿ ಪತ್ತೆಯಾಗಿದೆ. ಚುನಾವಣಾ ಕರ್ತವ್ಯದಲ್ಲಿರುವ ಸರಕಾರಿ ಅಧಿಕಾರಿ ಲಕ್ಮೀನಾರಾಯಣ ಅವರು...

ಪ್ರಾಣಿಗಳಿಗೆ ವಿಷವಿಕ್ಕಿದ ದುರುಳರು : 10 ಕ್ಕೂ ಅಧಿಕ ಸಾಕು, ಬೀದಿ ನಾಯಿಗಳ ಸಾವು

ಬೆಳ್ತಂಗಡಿ: ಮುಂಡಾಜೆ ಗ್ರಾಮದ ಸೋಮಂತಡ್ಕದ ಅಗರಿ- ಹುರ್ತಾಜೆ ರಸ್ತೆಯಲ್ಲಿ ಯಾರೋ ದುಷ್ಕರ್ಮಿಗಳು ವಿಷವಿಕ್ಕಿದ ಪರಿಣಾಮ 10ಕ್ಕಿಂತ ಅಧಿಕ ಸಾಕು ನಾಯಿ ಹಾಗೂ ಬೀದಿ ನಾಯಿಗಳು ಸಾವನ್ನಪ್ಪಿದ ಘಟನೆ ನಡೆದಿದೆ. ಮಾ. 30 ರ ಶನಿವಾರ...