Thursday, April 18, 2024

ಹಿಮ್ಮುಖವಾಗಿ ಚಲಿಸಿದ ಪಿಕಪ್‌… ವ್ಯಕ್ತಿ ಸಾವು

ಬೆಳ್ತಂಗಡಿ: ಶಿಬಾಜೆ ಗ್ರಾಮದ ತಂಬ್ಲಾಜೆಯಲ್ಲಿ ಪಿಕಪ್‌ ವಾಹನವೊಂದು ಹಿಮ್ಮುಖವಾಗಿ ಚಲಿಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ.

ರುಕ್ಮ ಮುಗೇರ ಹಾಗೂ ನಾಗೇಶ್‌ ಅವರು ಪಿಕಪ್‌ ವಾಹನದಲ್ಲಿ ಗೊಬ್ಬರ ಲೋಡ್‌ ಮಾಡಿಕೊಂಡು ಬರಲು ತೆರಳಿದ್ದರು. ಈ ವೇಳೆ ಶಿಬಾಜೆ ಬಳಿ ನಿಲ್ಲಿಸಿದಾಗ ರುಕ್ಮ ಮುಗೇರ ರಸ್ತೆಯ ಬದಿಯಲ್ಲಿ ನಿಂತುಕೊಂಡಿದ್ದರು. ಅದರ ಚಾಲಕ ಜಯೇಶ್‌ ಅವರು ದುಡುಕುತನದಿಂದ ಹಿಮ್ಮುಖವಾಗಿ ಚಲಾಯಿಸಿ, ರಸ್ತೆಯ ಬದಿಯಲ್ಲಿ ನಿಂತುಕೊಂಡಿದ್ದ ರುಕ್ಮ ಮುಗೇರ ಅವರಿಗೆ ಢಿಕ್ಕಿ ಹೊಡೆದಿದೆ.

ಅಪಘಾತದ ಪರಿಣಾಮ, ರುಕ್ಮ ಮುಗೇರ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡರು ತಕ್ಷಣ ಅವರಿಗೆ ಉಜಿರೆಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

ಈ ವಿಚಾರವಾಗಿ ಉಪೇಂದ್ರ ಅವರು ನೀಡಿದ ದೂರಿನಂತೆ ಬೆಳ್ತಂಗಡಿ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

More from the blog

ಶರಾಬು ಕುಡಿಯಲು ಆಕ್ಷೇಪ… ಯುವಕನಿಗೆ ಹಲ್ಲೆ : ದೂರು, ಪ್ರತಿದೂರು ದಾಖಲು

ಮಚ್ಚಿನ: ಹೊಟೇಲ್‌ ಕಾರ್ಮಿಕನನ್ನು ಶರಾಬು ಕುಡಿಯಲು ಕರೆಯಬಾರದು ಎಂದಿದ್ದಕ್ಕೆ ಯುವಕನ ಮೇಲೆ ಹಲ್ಲೆಗೈದ ಘಟನೆ ಬೆಳ್ತಂಗಡಿ ತಾಲೂಕಿನ ಮಚ್ಚಿನದಲ್ಲಿ ಸಂಭವಿಸಿದೆ. ಮಚ್ಚಿನದ ಪ್ರತಿಭಾ ರೈ ಅವರ ಹೊಟೇಲ್‌ನಲ್ಲಿ ಕೆಲಸ ಮಾಡುತ್ತಿದ್ದ ಚಂದ್ರ ಅವರನ್ನು ಆರೋಪಿ...

ಹಿಂದೂ‌ ಸಂಘಟನೆಯ ಕಾರ್ಯಕರ್ತನಿಗೆ ಚೂರಿ ಇರಿತ

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತ ಚೂರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹಿಂದೂಯುವಸೇನೆಯ ಮುಖಂಡನಾಗಿದ್ದು, ಉದ್ಯಮಿಯಾಗಿರುವ...

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...

ಅಕ್ರಮ ಮರಳು ಸಾಗಾಟ: ವಾಹನ ಸಹಿತ ಆರೋಪಿ ಅರೆಸ್ಟ್

ಬೆಳ್ತಂಗಡಿ: ಅಕ್ರಮ ಮರಳು ಸಾಗಾಟದ ಎರಡು ಪಿಕಪ್‌ ವಾಹನ ಹಾಗೂ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರನ್ನು ವೇಣೂರು ಠಾಣೆಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವೇಣೂರಿನ ಪಲ್ಗುಣಿ ನದಿಯಲ್ಲಿ ಅಕ್ರಮವಾಗಿ ಮರಳು ಕಳ್ಳತನ ಮಾಡಿ ಸಾಗಾಟ ಮಾಡುತ್ತಿರುವುದಾಗಿ...