Tuesday, April 9, 2024

ಅಕ್ರಮ ಮರಳು ಸಾಗಾಟ: ವಾಹನ ಸಹಿತ ಆರೋಪಿ ಅರೆಸ್ಟ್

ಬೆಳ್ತಂಗಡಿ: ಅಕ್ರಮ ಮರಳು ಸಾಗಾಟದ ಎರಡು ಪಿಕಪ್‌ ವಾಹನ ಹಾಗೂ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರನ್ನು ವೇಣೂರು ಠಾಣೆಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ವೇಣೂರಿನ ಪಲ್ಗುಣಿ ನದಿಯಲ್ಲಿ ಅಕ್ರಮವಾಗಿ ಮರಳು ಕಳ್ಳತನ ಮಾಡಿ ಸಾಗಾಟ ಮಾಡುತ್ತಿರುವುದಾಗಿ ಎ. 7ರಂದು ರಾತ್ರಿ ವೇಣೂರು ಮಾಹಿತಿ ಬಂದ ಮೇರೆಗೆ, ಪಿಎಸ್‌ಐ ಶ್ರೀಶೈಲ ಡಿ. ಮುರಗೋಡ್‌, ಸಿಬಂದಿಗಳೊಂದಿಗೆ ಸ್ಥಳಕ್ಕೆ ಹೋದಾಗ, ವೇಣೂರು ಡ್ಯಾಂ ಬಳಿ ಕರಿಮಣೇಲು ಗ್ರಾಮದ ನಿವಾಸಿ ಸತೀಶ್‌ ಮತ್ತು ಮೂಡುಕೋಡಿ ಗ್ರಾಮದ ನವೀನ್‌ ಎರಡು ಪಿಕಪ್‌ಗಳಲ್ಲಿ ತಲಾ 30 ಬುಟ್ಟಿಗಳಷ್ಟು ಮರಳನ್ನು ತುಂಬಿಸಿರುವುದು ಕಂಡುಬಂದಿತ್ತು.

ಆರೋಪಿಗಳು ಸಂಬಂಧಪಟ್ಟ ಇಲಾಖೆಯಿಂದ ಯಾವುದೇ ಅನುಮತಿಯನ್ನು ಪಡೆಯದೇ ಅನಧಿಕೃತವಾಗಿ ನದಿಯಿಂದ ಅಕ್ರಮವಾಗಿ ಮರಳನ್ನು ಕಳವು ಮಾಡಿಕೊಂಡು ಸಾಗಾಟ ಮಾಡುತ್ತಿರುವುದು ದೃಢಪಟ್ಟಿದ್ದು, ವಾಹನಗಳನ್ನು ಹಾಗೂ ಆರೋಪಿಗಳನ್ನು ವಶಕ್ಕೆ ಪಡೆದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

More from the blog

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...

ಹೆರಿಗೆ ವೇಳೆ ವಿಪರೀತ ರಕ್ತಸ್ರಾವ : ಲಾಯಿಲದ ಮಹಿಳೆ ಸಾವು

ಬೆಳ್ತಂಗಡಿ: ಹೆರಿಗೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ತೀವ್ರ ರಕ್ತ ಸ್ರಾವದಿಂದ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬದ್ಯಾರ್ ಖಾಸಗಿ ಆಸ್ಪತ್ರೆಯಲ್ಲಿ ಲಾಯಿಲ ಗ್ರಾಮದ ಗಾಂಧಿನಗರ ನಿವಾಸಿ ಗಾಯತ್ರಿ ಎಂಬವರು ಎರಡನೇ...

ಬೆಳ್ತಂಗಡಿ: ಆನ್ ಲೈನ್ ಮೂಲಕ ಸಾಲ ನೀಡುವುದಾಗಿ ನಂಬಿಸಿ ವಂಚನೆ : ದೂರು ದಾಖಲು

ಬೆಳ್ತಂಗಡಿ: ಮಹಿಳೆಯೊಬ್ಬರಿಗೆ ಫೇಸ್‌ಬುಕ್‌ ಆಪ್‌ ಮೂಲಕ ಸಾಲ ನೀಡುವುದಾಗಿ ಅಪರಿಚಿತರರು ನಂಬಿಸಿ ವಂಚನೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದಲ್ಲಿ ನಡೆದಿದೆ. ವಂಚನೆಗೊಳಗಾದ ಮಹಿಳೆ ನೆಬಿಸಾ ಅವರು ಈ ಬಗ್ಗೆ ವೇಣೂರು ಪೋಲಿಸ್‌...

ಜಿಲ್ಲಾ ಕಾಂಗ್ರೇಸ್ ಹಿಂದುಳಿದ ವರ್ಗದ ಉಪಾಧ್ಯಕ್ಷ ಪದ್ಮನಾಭ ಸೇವಂತ ಅವರದು, ಆತ್ಮಹತ್ಯೆಯಲ್ಲ, ವ್ಯವಸ್ಥಿತ ಕೊಲೆ ಶಂಕೆ: ಪ್ರಕಾಶ್ ಶೆಟ್ಟಿ ತನಿಖೆಗೆ ಒತ್ತಾಯ

ಬಂಟ್ವಾಳ: ದ.ಕ.ಜಿಲ್ಲಾ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಪದ್ಮನಾಭ‌ ಸೇವಂತ ಎಂಬವರ ಸಾವಿನ ಸುತ್ತ ಅನುಮಾನಗಳು ವ್ಯಕ್ಯವಾಗಿದ್ದು, ಮೇಲ್ನೋಟಕ್ಕೆ ಇದೊಂದು ಆತ್ಮಹತ್ಯೆ ಪ್ರಕರಣ ಎಂದು ಕಂಡು ಬಂದರೂ ಇದನ್ನು ವಿಮರ್ಶೆ ಮಾಡಿದರೆ ಇದೊಂದು ಕೊಲೆ...