Monday, April 22, 2024

ಬಿಜೆಪಿ ಪಕ್ಷದಿಂದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಉಚ್ಛಾಟನೆ

ಶಿವಮೊಗ್ಗ: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರನ್ನು ಬಿಜೆಪಿ ಶಿಸ್ತು ಸಮಿತಿ ಸೋಮವಾರ ಪಕ್ಷದಿಂದ ಉಚ್ಚಾಟನೆ ಮಾಡಿದೆ. ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜು ಅವರು ಸೋಮವಾರ ಈಶ್ವರಪ್ಪ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಿದ್ದಾರೆ.

ಪುತ್ರ ಕಾಂತೇಶ್ ಅವರಿಗೆ ಹಾವೇರಿ ಲೋಕಸಭಾ ಟಿಕೆಟ್ ನೀಡದ ಕಾರಣಕ್ಕೆ ಆಕ್ರೋಶಗೊಂದು ಯಡಿಯೂರಪ್ಪ ಮತ್ತು ಪುತ್ರರ ವಿರುದ್ಧ ಸಮರಕ್ಕಿಳಿದು ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿ.ವೈ. ರಾಘವೇಂದ್ರ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿ ಕಣದಿಂದ ಹಿಂದೆ ಸರಿಯದ ಕಾರಣ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಇಂದು ಇಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ನಾಮಪತ್ರ ವಾಪಸ್ ಪಡೆಯಲಿಲ್ಲ. ಇದರಿಂದ ಬಿಜೆಪಿ ಪಕ್ಷದ ಶಿಸ್ತು ಉಲ್ಲಂಘನೆ ಆಗಿದೆ. ಹೀಗಾಗಿ ಪಕ್ಷದ ಶಿಸ್ತು ಸಮಿತಿಯಿಂದ ಉಚ್ಚಾಟನೆ ಮಾಡಿ ಆದೇಶ ಹೊರಡಿಸಲಾಗಿದೆ.

ಚುನಾವಣಾ ಆಯೋಗ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಅವರಿಗೆ ಚುನಾವಣೆ ಚಿಹ್ನೆ ನೀಡಿದ್ದು, ”ಕೈ ಕಟ್ಟಿಕೊಂಡ ರೈತ ಮತ್ತು ಎರಡು ಕಬ್ಬುಗಳು” ಇರುವ ಚಿಹ್ನೆಯನ್ನು ನೀಡಲಾಗಿದೆ.

 

More from the blog

ಕಾಂಗ್ರೇಸ್ ಸರಕಾರದ ಆಡಳಿತದಲ್ಲಿ ಹೆಣ್ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ.ವಿಜಯೇಂದ್ರ

ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಮೈತ್ರಿಯಾಗಿ ಒಟ್ಟು 28 ಸ್ಥಾನದಲ್ಲಿದಲ್ಲಿ ಗೆಲುವು ಸಾಧಿಸುವುದು ನಿಶ್ವಿತ,ಇದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು. ಅವರು ಬಿಸಿರೋಡಿನ ಗಾಣದಪಡ್ಪು ಬ್ರಹ್ಮ ಶ್ರೀ ನಾರಾಯಣ ಗುರು...

ಆಸ್ಪತ್ರೆಯಿಂದ ಆಂಬ್ಯುಲೆನ್ಸ್ ನಲ್ಲಿ ತೆರಳಿ ಸಿಇಟಿ ಪರೀಕ್ಷೆ ಬರೆದ ಆ್ಯಸಿಡ್ ದಾಳಿ ಸಂತ್ರಸ್ಥೆ ವಿದ್ಯಾರ್ಥಿನಿ

ಕಡಬ: ಆ್ಯಸಿಡ್ ದಾಳಿಗೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಡಬದ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆಂಬ್ಯುಲೆನ್ಸ್ ಮೂಲಕ ತೆರಳಿ ಸಿಇಟಿ ಪರೀಕ್ಷೆ ಬರೆದಿದ್ದಾರೆ. ಮಾರ್ಚ್ 4ರಂದು ಕಾಲೇಜಿನಲ್ಲಿ ಪರೀಕ್ಷೆಗೆ ತಯಾರಾಗುತ್ತಿದ್ದ ವೇಳೆ ಅಬಿನ್...

ಏಪ್ರಿಲ್ 25, 26ರಂದು ನಂದಿ ಗಿರಿಧಾಮಕ್ಕೆ ಪ್ರವೇಶ ನಿರ್ಬಂಧ

ಚಿಕ್ಕಬಳ್ಳಾಪುರ: ಲೋಕಸಭೆ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ಉದ್ದೇಶದಿಂದ ಏಪ್ರಿಲ್ 25 ಮತ್ತು 26ರಂದು ಪ್ರಸಿದ್ಧ ಪ್ರವಾಸಿ ತಾಣ ನಂದಿ ಗಿರಿಧಾಮ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಏ.25ರ ಸಂಜೆ 6ರಿಂದ 26ರ ರಾತ್ರಿ 8ರ...

ಲೋಕಸಭಾ ಚುನಾವಣೆ : ಎ.20 ರಂದು‌ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಬೃಹತ್ ಚುನಾವಣಾ ಪ್ರಚಾರ

ಬಂಟ್ವಾಳ: ಲೋಕಸಭಾ ಚುನಾವಣೆಯ ಪ್ರಚಾರ ಬಿರುಸಿನಿಂದ ನಡೆಯುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಎ.20 ರಂದು‌ ಶನಿವಾರ ಮಧ್ಯಾಹ್ನ 2.30 ಕ್ಕೆ ಗಂಟೆಗೆ ಬಿಸಿರೋಡಿನ ಬ್ರಹ್ಮ ಶ್ರೀನಾರಾಯಣ ಗುರು ಮಂದಿರದಲ್ಲಿ ಬೃಹತ್ ಚುನಾವಣಾ...