Sunday, April 14, 2024

ಲೋಕಸಭಾ ಚುನಾವಣೆ : ‘ಸಂಕಲ್ಪ ಪತ್ರ’ ಹೆಸರಿನಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ

ನವದೆಹಲಿ: ದೆಹಲಿಯಲ್ಲಿರುವ ಬಿಜೆಪಿಯ ಪ್ರಧಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೋಕಸಭೆ ಚುನಾವಣೆಗಾಗಿ ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ‘ಸಂಕಲ್ಪ ಪತ್ರ’ ಹೆಸರಲ್ಲಿ ದೇಶದ ಜನರಿಗೆ ಪ್ರಧಾನಿ ಮೋದಿ ಆಶ್ವಾಸನೆಗಳನ್ನು ನೀಡಿದ್ದು ಮೊದಲ ಸಂಕಲ್ಪ ಪತ್ರವನ್ನು ದೆಹಲಿ ನಿವಾಸಿಗಳಿಗೆ ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್, ನಿರ್ಮಲಾ ಸೀತಾರಾಮನ್, ಪಿಯೂಶ್ ಗೊಯಲ್, ಜೈ ಶಂಕರ್, ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಉಪಸ್ಥಿತರಿದ್ದರು.

ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದ ಪ್ರಧಾನಿ ಮೋದಿ, ಬಿಜೆಪಿಯ ಸಂಕಲ್ಪ ಪತ್ರವು ಸುಧಾರಿತ ಭಾರತದ ನಾಲ್ಕು ಬಲಿಷ್ಠ ಕಂಬಗಳಾದ ಯುವ, ಮಹಿಳೆ, ಬಡವರು ಮತ್ತು ರೈತರ ಶ್ರೇಯೋಭಿವೃದ್ದಿಯನ್ನು ಒಳಗೊಂಡಿದೆ ಎಂದಿದ್ದಾರೆ.

ಪ್ರಣಾಳಿಕೆಯ ಪ್ರಮುಖ ಅಂಶಗಳು

  1. ಹಿರಿಯ ನಾಗರಿಕರು (70 ವರ್ಷಕ್ಕಿಂತ ಹೆಚ್ಚಿನ) ಮತ್ತು ತೃತೀಯ ಲಿಂಗಿ ಸಮಾಜವನ್ನು ಆಯುಷ್ಮಾನ್ ಭಾರತ ಯೋಜನೆಯಡಿಗೆ ತರಲಾಗುವುದು. ಹಿರಿಯ ನಾಗರಿಕರಿಗೆ 5 ಲಕ್ಷ ರೂ ವೆಚ್ಚದ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
  2. ಉಚಿತ ಪಡಿತರ ಯೋಜನೆಯನ್ನು ಮುಂದಿನ ಐದು ವರ್ಷಗಳ ಕಾಲ ಮುಂದುವರಿಸಲಾಗುವುದು ಮತ್ತು ಆಯುಷ್ಮಾನ್ ಭಾರತ್ ಯೋಜನೆಯಡಿ ಕಡಿಮೆ ಬೆಲೆಯ ಔಷಧಿಗಳು ಲಭ್ಯವಿರಲಿದೆ.
  3. ಬಿಜೆಪಿ ಪ್ರಣಾಳಿಕೆಯು 3 ಕೋಟಿ ಮನೆಗಳನ್ನು ನಿರ್ಮಿಸುವುದು, ಎಲ್ಲಾ ಮನೆಗಳಿಗೆ ಅಗ್ಗದ ಪೈಪ್‌ಲೈನ್ ಗ್ಯಾಸ್ ಲಭ್ಯತೆಗಾಗಿ ಕೆಲಸ ಮಾಡುವುದು ಮತ್ತು ವಿದ್ಯುತ್ ಬಿಲ್‌ಗಳನ್ನು ಶೂನ್ಯಕ್ಕೆ ಕಡಿತಗೊಳಿಸುವುದಾಗಿ ಹೇಳಿದೆ.
  4. ಏಕರೂಪ ನಾಗರಿಕ ಸಂಹಿತೆ ಮತ್ತು ಒಂದು ರಾಷ್ಟ್ರ ಒಂದು ಚುನಾವಣೆಯನ್ನು ಜಾರಿಗೊಳಿಸಲಾಗುವುದು ಎಂದು ಬಿಜೆಪಿ ಪ್ರಣಾಳಿಕೆ ಹೇಳಿದೆ.
  5. ಮೂರು ಕೋಟಿ ಮಹಿಳೆಯರನ್ನು ಲಕ್ಷಾಧಿಪತಿ ದೀದಿಗಳನ್ನಾಗಿ ಮಾಡುವುದಾಗಿ ಪ್ರಣಾಳಿಕೆ ಭರವಸೆ ನೀಡಿದೆ.
  6. ಪಿಎಂ ಹೌಸಿಂಗ್ ಸ್ಕೀಮ್ ನಲ್ಲಿ ವಿಶೇಷ ಚೇತನ ಜನರಿಗೆ ಆದ್ಯತೆ ನೀಡಲಾಗುವುದು. ಅಲ್ಲದೆ ಅವರ ಅನುಕೂಲಕ್ಕೆ ತಕ್ಕ ಹಾಗೆ ಮನೆಗಳನ್ನು ನಿರ್ಮಾಣ ಮಾಡಲು ಒತ್ತು ನೀಡಲಾಗುವುದು.

More from the blog

ಪ್ರಧಾನಿ ಮೋದಿ ರೋಡ್ ಶೋಗೆ ಸಿದ್ಧತೆ : ರಸ್ತೆಗಳಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌

ಮಂಗಳೂರು: ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ರೋಡ್‌ ಶೋ ಇರುವ ಹಿನ್ನೆಲೆಯಲ್ಲಿ ಭಾರೀ ಪೊಲೀಸ್‌ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಶನಿವಾರ ಸಂಜೆಯಿಂದಲೇ ಪೊಲೀಸರು ಕಾರ್ಯ ನಿರತರಾಗಿದ್ದು, ಹೊಸದಿಲ್ಲಿಯಿಂದ ಆಗಮಿಸಿರುವ ಎಸ್‌ಪಿಜಿ ಅಧಿಕಾರಿಗಳು ರೋಡ್‌ ಶೋ...

ಮೊಸಳೆಯ ಹೊಟ್ಟೆಯಲ್ಲಿ 1 ಕೆ.ಜಿ ಪ್ಲಾಸ್ಟಿಕ್ ಪತ್ತೆ….! ತ್ಯಾಜ್ಯ ಜೀರ್ಣವಾಗದೆ ಮೊಸಳೆ ಸಾವು

ಸುಬ್ರಹ್ಮಣ್ಯ: ಕಡಬ ಸಮೀಪದ ಪುಳಿಕುಕ್ಕು ಎಂಬಲ್ಲಿ ಕುಮಾರಧಾರಾ ನದಿಯಲ್ಲಿ ಮೊಸಳೆ ಸಾವಿಗೆ ತ್ಯಾಜ್ಯ ಸೇವನೆ ಹಾಗೂ ಪ್ಲಾಸ್ಟಿಕ್‌ ಕಾರಣ ಎಂಬ ಶಂಕೆ ವ್ಯಕ್ತವಾಗಿದೆ. ಕಡಬ-ಪಂಜ ಸಂಪರ್ಕ ರಸ್ತೆಯ ಪಂಜ ವಲಯ ಅರಣ್ಯ ವ್ಯಾಪ್ತಿಯ ಪುಳಿಕುಕ್ಕು...

ಬೋಳಾರ ಚೂರಿ ಇರಿತ ಪ್ರಕರಣ : ಆರೋಪಿ ಅರೆಸ್ಟ್

ಮಂಗಳೂರು: ಬೋಳಾರ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ದಕ್ಷಿಣ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಆನಂದ್‌ ಸಪಲ್ಯ ಬಂಧಿತ ಆರೋಪಿ ಎಂದು ತಿಳಿದುಬಂದಿದೆ. ಬೋಳಾರ್ ನಲ್ಲಿ ಕಟಿಂಗ್ ಶಾಪ್ ನಡೆಸುತ್ತಿರುವ ಎಡ್ವಿನ್ ವಿನಯ್ ಕುಮಾರ್ ಅವರಿಗೆ...

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ : ವಾರಸುದಾರರ ಪತ್ತೆಗೆ ಮನವಿ

ಬಂಟ್ವಾಳ: ಅಪರಿಚಿತ ವ್ಯಕ್ತಿಯೋರ್ವನ‌ ಮೃತದೇಹವೊಂದು ಸಜೀಪ ನಡು ಎಂಬಲ್ಲಿ ರಿಕ್ಷಾ ನಿಲ್ದಾಣದಲ್ಲಿ ಪತ್ತೆಯಾಗಿದೆ. ಸಜೀಪ ನಡು ಗ್ರಾಮದಲ್ಲಿ ನ ರಿಕ್ಷಾ ನಿಲ್ದಾಣದಲ್ಲಿ ಸುಮಾರು 45 ವರ್ಷದ ಗಂಡಸಿನ ಮೃತದೇಹ ಪತ್ತೆಯಾಗಿದ್ದು ಯಾವ ಕಾರಣದಿಂದ ಈತ...