Sunday, April 14, 2024

ಬೋಳಾರ ಚೂರಿ ಇರಿತ ಪ್ರಕರಣ : ಆರೋಪಿ ಅರೆಸ್ಟ್

ಮಂಗಳೂರು: ಬೋಳಾರ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ದಕ್ಷಿಣ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ

ಆನಂದ್‌ ಸಪಲ್ಯ ಬಂಧಿತ ಆರೋಪಿ ಎಂದು ತಿಳಿದುಬಂದಿದೆ.

ಬೋಳಾರ್ ನಲ್ಲಿ ಕಟಿಂಗ್ ಶಾಪ್ ನಡೆಸುತ್ತಿರುವ ಎಡ್ವಿನ್ ವಿನಯ್ ಕುಮಾರ್ ಅವರಿಗೆ ಸಂಜೆ 7 ಗಂಟೆ ಸುಮಾರಿಗೆ ಆರೋಪಿ ಆನಂದ್ ಸಪಲ್ಯ ಎಂಬಾತ ಇರಿದಿದ್ದಾನೆ. ಮದ್ಯ ಸೇವಿಸಿ ಅಂಗಡಿಗೆ ಬಂದು ಎದೆಯ ಮೇಲೆ ಚಾಕುವಿನಿಂದ ಇರಿದಿದ್ದಾನೆ. ಗಾಯಗೊಂಡ ಎಡ್ವಿನ್ ವಿನಯ್ ಕುಮಾರ್ ಅವರನ್ನು ವೆನ್ಲಾಕ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

 

More from the blog

ಪ್ರಧಾನಿ ಮೋದಿ ರೋಡ್ ಶೋ ಸಮಯ ಬದಲಾವಣೆ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ಸಮಯದಲ್ಲಿ ಬದಲಾವಣೆಯಾಗಿದ್ದು, ಏ.14ರಂದು ಸಂಜೆ 7.45ಕ್ಕೆ ರೋಡ್ ಶೋ ಆರಂಭವಾಗಲಿದೆ ಎಂದು ಬಿಜೆಪಿ ರಾಜ್ಯ ಘಟಕದ ಚುನಾವಣಾ ಸಂಚಾಲಕ ವಿ. ಸುನಿಲ್ ಕುಮಾರ್...

ಕುಮಾರಧಾರಾ ನದಿಯಲ್ಲಿ ಮೊಸಳೆ ಮೃತದೇಹ ಪತ್ತೆ

ಸುಬ್ರಹ್ಮಣ್ಯ: ಕುಮಾರಧಾರಾ ನದಿಯ ಪಂಜ – ಕಡಬ ಸಂಪರ್ಕ ರಸ್ತೆಯಲ್ಲಿ ಸಿಗುವ ಪುಳಿಕುಕ್ಕು ಸೇತುವೆಯ ಕೆಳಭಾಗದಲ್ಲಿ ಮೊಸಳೆಯ ಮೃತದೇಹ ಪತ್ತೆಯಾಗಿದೆ. ಶುಕ್ರವಾರ ನದಿಯ ಒಂದು ಬದಿಯ ನೀರಿನಲ್ಲಿ ಅಂದಾಜು 1.5 – 2 ವರ್ಷದ ಮೊಸಳೆಯ...

ನಾಳೆ ಮಂಗಳೂರಿಗೆ ಪ್ರಧಾನಿ ಮೋದಿ : ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿರವರು ಏಪ್ರಿಲ್ 14 ರಂದು ಮಂಗಳೂರಿನ ಲೇಡಿಹಿಲ್ ಬಳಿಯ ಶ್ರೀ ನಾರಾಯಣಗುರು ವೃತ್ತದಿಂದ ನವಭಾರತ ಸರ್ಕಲ್‌ವರೆಗೆ ರೋಡ್ ಶೋ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಪ್ರಧಾನಮಂತ್ರಿಗಳ ಭದ್ರತೆಯ ದೃಷ್ಟಿಯಿಂದ ಹಾಗೂ ಸಂಚಾರ ಸುವ್ಯವಸ್ಥೆಗೆ...

ಎಳನೀರು ಸೇವಿಸಿ 136 ಮಂದಿ ಅಸ್ವಸ್ಥ ಪ್ರಕರಣ : ಬೊಂಡ ಫ್ಯಾಕ್ಟರಿ ಬಂದ್‌ ಗೆ ಆದೇಶ

ಮಂಗಳೂರು: ನಗರದ ಹೊರವಲಯದ ಅಡ್ಯಾರ್‌ನಲ್ಲಿರುವ ಬೊಂಡ ಫ್ಯಾಕ್ಟರಿಯ ಬೊಂಡ ನೀರು ಸೇವಿಸಿ ನೂರಾರು ಮಂದಿ ಅಸ್ವಸ್ಥಗೊಂಡ ಘಟನೆ ವರದಿಯಾಗಿದ್ದು, ಈ ಪ್ರಕರಣದ ಹಿನ್ನೆಲೆಯಲ್ಲಿ ಅಧಿಕಾರಿಗಳು ಗುರುವಾರ ಬೊಂಡ ಫ್ಯಾಕ್ಟರಿಗೆ ಬೀಗ ಜಡಿದಿದ್ದಾರೆ. ದ.ಕ.ಜಿಲ್ಲಾ ಆರೋಗ್ಯ...