Saturday, April 13, 2024

ಆಟವಾಡುತ್ತಾ ಜಮೀನಿನಲ್ಲಿದ್ದ ಬೋರ್‌ವೆಲ್​ಗೆ ಬಿದ್ದ 6 ವರ್ಷದ ಬಾಲಕ

ಆರು ವರ್ಷದ ಬಾಲಕನೋರ್ವ ತೆರೆದ ಬೋರ್​ವೆಲ್ ಒಳಕ್ಕೆ ಬಿದ್ದ ಘಟನೆ ಮಧ್ಯಪ್ರದೇಶದ ರೇವಾದಲ್ಲಿ ಬೆಳಕಿಗೆ ಬಂದಿದೆ.

ಬೋರ್​ವೆಲ್​ಗೆ ಬಿದ್ದ ಬಾಲಕನನ್ನು ರೇವಾ ಜಿಲ್ಲೆಯ ಜಾನೆ ಪೊಲೀಸ್ ಠಾಣೆ ವ್ಯಾಪ್ತಿಯ ಮಾಣಿಕಾ ಗ್ರಾಮದ ಮಯಾಂಕ್ ಎಂದು ಗುರುತಿಸಲಾಗಿದೆ.

ಪೊಲೀಸರ ಪ್ರಕಾರ, ಮಯೂರ್​ ನಿನ್ನೆ ಮದ್ಯಾಹ್ನ ಸುಮಾರು 3:30ರ ಸುಮಾರಿಗೆ ಕೊಳವೆ ಬಾವಿಗೆ ಬಿದ್ದಿದ್ದಾನೆ. ಗೋಧಿ ಕಟಾವು ವೇಳೆ ಸ್ನೇಹಿತರೊಂದಿಗೆ ಆಟವಾಡುತ್ತಾ ಹೋಗಿ ಬೋರ್​ವೇಲ್​ಗೆ ಬಿದ್ದಿದ್ದಾನೆ

ಹೆಚ್ಚುವರಿ ಪೊಲೀಸ್​ ಅಧಿಕಾರಿ ಅನಿಲ್​​ ಸೋಂಕರ್​ ಮಾತನಾಡಿದ್ದು, ಬೋರ್​ವೆಲ್​ ಸುಮಾರು 70 ಅಡಿ ಅಳವಿದೆ. ಬಾಲಕ 40 ಅಡಿಯಲ್ಲಿ ಸಿಲುಕಿದ್ದಾನೆ. ಆತನಿಗೆ ಆಮ್ಲಜನಕ ಒದಗಿಸಲಾಗಿದೆ ಎಂದು ಹೇಳಿದ್ದಾರೆ.

ಸದ್ಯ ಬಾಲಕನ ರಕ್ಷಣೆಗಾಗಿ ರಾಜ್ಯ ವಿಪತ್ತು ತುರ್ತು ನಿರ್ವಹಣಾ ಪಡೆ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸ್ಥಳದಲ್ಲಿದೆ. ಬಾಲಕನ ಚಲನೆಯನ್ನು ಗಮನಿಸಲು ಸಿಸಿಟಿವಿ ಸಹ ಬೋರ್​ವೆಲ್​ ಒಳಕ್ಕೆ ಇಳಿಸಲಾಗಿದೆ. ಆದರೆ ಮಳೆಯಿಂದಾಗಿ ರಕ್ಷಣಾ ಕಾರ್ಯಚರಣೆಗೆ ಅಡ್ಡಿಯಾಗುತ್ತಿದೆ.

More from the blog

ಇಂದಿನಿಂದ ಅಂಚೆ ಮತದಾನ ಪ್ರಾರಂಭ

ಇಂದಿನಿಂದ 85 ವರ್ಷ ಮೇಲ್ಪಟ್ಟ ಹಾಗೂ ವಿಶೇಷ ಚೇತನರಿಂದ ಅಂಚೆ ಮತದಾನ ನಡೆಯಲಿದೆ. ಏಪ್ರಿಲ್ 18ರವರೆಗೆ ಮನೆಯಿಂದಲೇ ಗೌಪ್ಯ ಮತದಾನಕ್ಕೆ ಅವಕಾಶ ಮಾಡಲಾಗಿದೆ. ಇಂದಿನಿಂದ ಏಪ್ರಿಲ್ 18ರವರೆಗೆ ಮನೆಯಿಂದಲೇ ಗೌಪ್ಯ ಮತದಾನಕ್ಕೆ ಅವಕಾಶವಿದೆ. ಬೆಂಗಳೂರು...

ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣ : ನಿದ್ದೆಯಲ್ಲಿದ್ದ ಉಗ್ರರನ್ನು ಬಡಿದೆಬ್ಬಿಸಿದ ಎನ್ಐಎ

ಬೆಂಗಳೂರು: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಭರ್ಜರಿ ಕಾರ್ಯಾಚರಣೆ ನಡೆಸಿ, ಉಗ್ರರ ಗ್ಯಾಂಗ್ ಅನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ರಾಮೇಶ್ವರಂ ಕೆಫೆ ಬಾಂಬರ್‌ ಗ್ಯಾಂಗ್ ಬಂಧಿಸಲು NIA ಭರ್ಜರಿ ಬಲೆ...

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....