Friday, April 5, 2024

ಮನೆಯ ಮಹಡಿಯಿಂದ ಬಿದ್ದು ಬಾಲಕ ಸಾವು

ಬಂಟ್ವಾಳ: ಮನೆಯ ಮಹಡಿಯ ಮೇಲಿಂದ ಕೆಳಗೆ ಬಿದ್ದು ಬಾಲಕನೋರ್ವ ಮೃತಪಟ್ಟ ಘಟನೆ ಎ.‌ ೧ರ ಮುಂಜಾನೆ ನಡೆದಿದೆ.

ಬಂಟ್ವಾಳ ಜಕ್ರಿಬೆಟ್ಟು ನಿವಾಸಿ ದಿನೇಶ್ ಪೂಜಾರಿ ಅವರ ಪುತ್ರ ಆದಿಶ್(೧೫) ಮೃತಪಟ್ಟ ಬಾಲಕ.

ಆತ ಮನೆಯಲ್ಲಿ ದೊಡ್ಡಮ್ಮನ ಜತೆ ಮಲಗಿದ್ದು, ಮುಂಜಾನೆ ಮೊಬೈಲ್ ಹಿಡಿದುಕೊಂಡು ಹೊರಗೆ ಬಂದಿದ್ದಾನೆ. ಮನೆಮಂದಿ ಬೆಳಗ್ಗೆ ಎದ್ದು ನೋಡುವಾಗ ಮನೆಯ ಮಹಡಿಯ ಮೇಲಿಂದ ಕೆಳಗೆ ಬಿದ್ದಿರುವುದು ಬೆಳಕಿಗೆ ಬಂದಿದೆ. ತಕ್ಷಣ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಕರೆತಂದರೂ ಅದಾಗಲೇ ಆತ ಮೃತಪಟ್ಟಿದ್ದ ಎನ್ನಲಾಗಿದೆ. ಬಂಟ್ವಾಳ ನಗರ ಪೊಲೀಸ್ ಪ್ರಕರಣದ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.

More from the blog

ಸಾವು ಗೆದ್ದು ಬಂದ ಸಾತ್ವಿಕ್ ; ಸತತ 20 ಗಂಟೆಗಳ ಕಾರ್ಯಾಚರಣೆ ಯಶಸ್ವಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ 2 ವರ್ಷದ ಕಂದ ಸಾತ್ವಿಕ್​​ನನ್ನು ಕೊನೆಗೂ ರಕ್ಷಣಾ ಪಡೆಯ ಸಿಬ್ಬಂದಿ ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇಂಡಿಯ ಲಚ್ಯಾನ ಗ್ರಾಮದ ತೋಟದಲ್ಲಿ ಆಟವಾಡುತ್ತಿದ್ದಾಗ ಮಗು ಕೊಳವೆ ಬಾವಿಗೆ ಬಿದ್ದಿತ್ತು. ಈ ಸಂಬಂಧ...

ಕೊಳವೆ ಬಾವಿಗೆ ಬಿದ್ದ 2 ವರ್ಷದ ಕಂದಮ್ಮ : ರಕ್ಷಣೆಗೆ ಅರ್ಧ ಅಡಿಯಷ್ಟೇ ಬಾಕಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ ಮಗು ಸಾತ್ವಿಕ ಸುರಕ್ಷಿತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತಕ್ಕೆ ಬಂದಿದೆ. ಮಗು ಸುರಕ್ಷಿತವಾಗಿದ್ದು, ಕಾರ್ಯಾಚರಣೆ ಆಶಾದಾಯಕವಾಗಿದೆ. 16 ಅಡಿ ಆಳದಲ್ಲಿರುವ ಸಾತ್ವಿಕ್ ರಕ್ಷಣೆಗಾಗಿ 22 ಅಡಿ ಆಳದವರೆಗೆ ಸುರಂಗ...

ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ

ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರು ಬುಧವಾರ ನಾಮಪತ್ರ ಸಲ್ಲಿಸಿದರು. ಇನ್ನು ಕೋಟ ಶ್ರೀನಿವಾಸ್ ಪೂಜಾರಿ ಅವರು ನಾಮಪತ್ರ ಸಲ್ಲಿಸುವ ಮುನ್ನ ಪಕ್ಷದ ಕಾರ್ಯಕರ್ತರ ಬೃಹತ್‌ ಸಮಾವೇಶ...

ಮಿತಿ ಮೀರಿದ ತಾಪಮಾನ : ಖಡಕ್​ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಬಿರು ಬಿಸಿಲು ಹೆಚ್ಚಳವಾಗುತ್ತಿದ್ದು ಮುಂದಿನ 14 ದಿನಗಳ ಕಾಲ ಬಿಸಿಗಾಳಿ ಬೀಸಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ (KSNDMC) ಮುನ್ಸೂಚನೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್​...