Thursday, April 18, 2024

ಲೋಕಸಭಾ ಚುನಾವಣೆ : ಎ.20 ರಂದು‌ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಬೃಹತ್ ಚುನಾವಣಾ ಪ್ರಚಾರ

ಬಂಟ್ವಾಳ: ಲೋಕಸಭಾ ಚುನಾವಣೆಯ ಪ್ರಚಾರ ಬಿರುಸಿನಿಂದ ನಡೆಯುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಎ.20 ರಂದು‌ ಶನಿವಾರ ಮಧ್ಯಾಹ್ನ 2.30 ಕ್ಕೆ ಗಂಟೆಗೆ ಬಿಸಿರೋಡಿನ ಬ್ರಹ್ಮ ಶ್ರೀನಾರಾಯಣ ಗುರು ಮಂದಿರದಲ್ಲಿ ಬೃಹತ್ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ ಎಂದು ಬಂಟ್ವಾಳ ಮಂಡಲದ ಅಧ್ಯಕ್ಷ ಚೆನ್ನಪ್ಪ ಆರ್.ಕೋಟ್ಯಾನ್ ಅವರು ತಿಳಿಸಿದರು.

ಅವರು ಬಿಸಿರೋಡಿನಲ್ಲಿರುವ ಪಕ್ಷದ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಬಿಜೆಪಿ ಅಭ್ಯರ್ಥಿ ಬಂಟ್ವಾಳ ಕ್ಷೇತ್ರದಲ್ಲಿ ಈಗಾಗಲೇ 5 ಬಾರಿ ಮತಯಾಚನೆಯಲ್ಲಿ ಭಾಗಿಯಾಗಿದ್ದಾರೆ.

ಎ. 22 ರಂದು ಸೋಮವಾರ ಮತ್ತೆ ಬಂಟ್ವಾಳ ಕ್ಷೇತ್ರದಲ್ಲಿ ಸಂಚಾರ ಮಾಡಿ ವಿಭಿನ್ನ ರೀತಿಯಲ್ಲಿ ಮತಯಾಚನೆಯಲ್ಲಿ ತೊಡಗಿಸಿಕೊಳ್ಳಲಿದ್ದಾರೆ.

ಮಂದಿರದಲ್ಲಿ ಬೃಹತ್ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ. ಈಗಾಗಲೇ ಕ್ಷೇತ್ರದಲ್ಲಿ ಧಾರ್ಮಿಕ ಕೇಂದ್ರ ಸಹಿತ ಮನೆ,ಅಂಗಡಿ,ಫ್ಯಾಕ್ಟರಿಗಳಿಗೆ ಹಾಗೂ ಪ್ರಮುಖರನ್ನು ಬೇಟಿ ಮಾಡಿ ಮತಯಾಚನೆ ಮಾಡಿದ್ದಾರೆ.

ಕಾರ್ಯಕರ್ತರು 249 ಬೂತ್ ಗಳಲ್ಲಿ ಪ್ರಥಮ ಸುತ್ತಿನ ಮನೆ ಸಂಪರ್ಕ ಮುಗಿಸಿದ್ದಾರೆ. ಎರಡನೇ ಹಂತದ ಪ್ರಚಾರದಲ್ಲಿ ಇದೀಗ ನಿರತರಾಗಿದ್ದಾರೆ. ಎ. 21 ರಂದು ಆದಿತ್ಯವಾರ ಕ್ಷೇತ್ರದಲ್ಲಿ ಮಹಾಭಿಯಾನ ಕಾರ್ಯದಲ್ಲಿ ಶಾಸಕರು ಹಾಗೂ ಹಿರಿಯ ಜನಪ್ರತಿನಿಧಿಗಳು ಜೊತೆಯಾಗಿ ತೊಡಗಿಸಕೊಳ್ಳಲಿದ್ದಾರೆ.

ಎ. 22 ರಂದು ಸೋಮವಾರ ಅಭ್ಯರ್ಥಿ ಬ್ರಿಜೇಶ್ ಚೌಟರವರ ಪ್ರವಾಸ ಬಂಟ್ವಾಳದಲ್ಲಿ ನಡೆಯಲಿದ್ದು, ಬೆಳಿಗ್ಗೆ 9.00 ಗಂಟೆಗೆ ಕುಲಾಲ ಸಮುದಾಯ ಪ್ರಮುಖರ ಜೊತೆ ಸಮಾಲೋಚನೆ ನಡೆಸಲಿದ್ದಾರೆ. 10.00 ಗಂಟೆಗೆ ವಿಶ್ವಕರ್ಮ ಸಮುದಾಯ ಪ್ರಮುಖರ ಜೊತೆ ಸಮಾಲೋಚನೆ 11.30 ರಿಂದ ಮಧ್ಯಾಹ್ನ 1.00 ಗಂಟೆ ತನಕ ಬಿ.ಸಿ.ರೋಡ್ ಕೈಕಂಬದಿಂದ ರಿಕ್ಷಾ ಪಾರ್ಕ್ ಗಳಲ್ಲಿ ಮತ್ತು ನಗರದಲ್ಲಿ ಮತಯಾಚನೆ ಮಾಡಲಿದ್ದಾರೆ.ಮಧ್ಯಾಹ್ನ 2.30ಕ್ಕೆ ಪ್ರಬುದ್ಧರ ಜೊತೆ ಸಂವಾದ ನಡೆಸಲಿದ್ದಾರೆ.ಸಂಜೆ 4 ಗಂಟೆಯಿಂದ 5 ರವರೆಗೆ ವಿಟ್ಲಪಡ್ನರು ಬಲಿಪಗುರಿ ಹಾಳೆ ತಟ್ಟೆ ಫ್ಯಾಕ್ಟರಿಗೆ ಭೇಟಿ ಮತಯಾಚನೆ ನಡೆಸಲಿದ್ದಾರೆ. ಸಂಜೆ 5 ಗಂಟೆಗೆ ವಿಟ್ಲಪಡ್ನರು ಶಕ್ತಿಕೇಂದ್ರ ಸಾರ್ವಜನಿಕ ಸಭೆ ಅನಂತಾಡಿ ಗೋಳಿಕಟ್ಟೆ ಯಲ್ಲಿ ಜರಗಲಿದೆ. 6.30ಕ್ಕೆ ಕೊಳ್ಳಾಡು ಮಹಾಶಕ್ತಿಕೇಂದ್ರ ಸಾರ್ವಜನಿಕ ಸಭೆ ಸಾಲೆತ್ತೂರು ಜಂಕ್ಷನ್ ನಲ್ಲಿ ಬಾಳ್ತಿಲ ನರಿಕೊಂಬು ಮಹಾಶಕ್ತಿಕೇಂದ್ರದ ಸಭೆ ಕಲ್ಲಡ್ಕ ಜಂಕ್ಷನ್ ನಲ್ಲಿ ರಾತ್ರಿ 7.30ಕ್ಕೆ ಜರಗಲಿದೆ ಎಂದು ಅವರು ತಿಳಿಸಿದರು.

ಈ ಚುನಾವಣೆ ದೇಶದ ಚುನಾವಣೆ ಹಾಗಾಗಿ ಜಾತಿ ಹೆಸರಲ್ಲಿ ಚುನಾವಣೆ ನಡೆಯುವುದಿಲ್ಲ. ಕೆಲವರು ಜಾತಿ ಹೆಸರಿನಲ್ಲಿ ಗುಪ್ತವಾಗಿ ಮತಯಾಚನೆ ಮಾಡುತ್ತಾ ಇದ್ದಾರೆ. ದೇಶದ 140 ಕೋಟಿ ಜನರು ಈ ದೇಶದಲ್ಲಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎನ್ನುವ ಅಪೇಕ್ಷೆಯನ್ನು ಹೊಂದಿದ್ದಾರೆ. ದೇಶ ಉಳಿದರೆ ಧರ್ಮ ಉಳಿಯುತ್ತೆ, ಧರ್ಮ ಉಳಿದರೆ ಜಾತಿ ಉಳಿಯುತ್ತೆ . ಹಾಗಾಗಿ ಎಲ್ಲರೂ ಜಾತಿ ಮತ ಬಿಟ್ಟು ದೇಶದ ಬಗ್ಗೆ ಯೋಚನೆ ಮಾಡಿ ಮತದಾನ ಮಾಡಬೇಕು. ಕಳೆದ 10 ವರ್ಷದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮಾಡಿದ ಸಾಧನೆಗಳನ್ನು ಹಾಗೂ ಕರ್ನಾಟಕದಲ್ಲಿ ಬಿ ಎಸ್ ಯಡಿಯೂರಪ್ಪನವರ ಸರ್ಕಾರದ ಸಾಧನೆಗಳನ್ನು ಜನರಿಗೆ ಮುಟ್ಟಿಸಿ,ಮತಯಾಚನೆ ಮಾಡುತ್ತಾ ಇದ್ದೇವೆ ಎಂದು ತಿಳಿಸಿದರು.

ಶಾಸಕ ರಾಜೇಶ್ ನಾಯ್ಕ್ ಅವರು ಹಿರಿಯ ನಾಯಕರನ್ನು ಜೊತೆಯಾಗಿಸಿಕೊಂಡು ಕ್ಷೇತ್ರದಲ್ಲಿ ಮತಯಾಚನೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ ಎಂಬ ವಿಭಿನ್ನ ಶೈಲಿಯ ಕಾರ್ಯಕ್ರಮದ ಮೂಲಕ ಜನರ ಬಳಿಗೆ ತೆರಳಿ ಮತಯಾಚನೆ ನಡೆಸುತ್ತಿದ್ದು,ಇಡೀ ಜಿಲ್ಲೆಯಲ್ಲಿ ಮಾದರಿ ಕಾರ್ಯಕ್ರಮವಾಗಿದೆ ಎಂದು ತಿಳಿಸಿದರು.ಕಳೆದ ಐದು ವರ್ಷಗಳಲ್ಲಿ ಬಂಟ್ವಾಳದಲ್ಲಿ ಶಾಸಕ ರಾಜೇಶ್ ನಾಯ್ಕ್ ಅವರು ಮಾಡಿರುವ ಅಭಿವೃದ್ಧಿ ಕಾರ್ಯಗಳು ಲೋಕಸಭಾ ಚುನಾವಣೆಯಲ್ಲಿ ನಿರೀಕ್ಷೆಗಿಂತ ಹೆಚ್ಚು ಮತವನ್ನು ಪಡೆಯಲು ಸಾಧ್ಯವಾಗುತ್ತದೆ ಎಂಬ ವಿಶ್ವಾಸವಿದೆ ಎಂದರು.

ಮಾಜಿ ಸಚಿವ ಬಿ. ನಾಗರಾಜ ಶೆಟ್ಟಿ ಮಾತನಾಡಿ , ಜಾತಿ ಮತ್ತು ಸುಳ್ಳಿನ ವಿಷ ಬೀಜ ಬಿತ್ತುವ ಸೋ ಕಾಲ್ಡ್ ಲೀಡರ್ ಗಳ ಮಾತಿಗೆ ಬೆಲೆ ನೀಡದೆ ಭಾರತವನ್ನು ಪತಮವೈಭವದ ಸ್ಥಿತಿಗೆ ತಲುಪಿಸುವ ಕನಸು ಹೊಂದಿರುವ ಮೋದಿಯವರ ಕೈಯನ್ನು ಬಲಪಡಿಸಲು ಬಿಜೆಪಿಗೆ ಮತನೀಡಿ ಎಂದು ಮನವಿ ಮಾಡಿದರು.

ಬಾಜಪದಲ್ಲಿ ಇರುವಷ್ಟು ಕಾರ್ಯಕರ್ತರು ಬೇರೆ ರಾಷ್ಟ್ರೀಯ ಪಕ್ಷದಲ್ಲಿ ಇಲ್ಲ, ಉತ್ತಮ ರೀತಿಯಲ್ಲಿ ಪ್ರಚಾರ ನಡೆಯುತ್ತಿದೆ . ಸೋ ಕಾಲ್ಡ್ ಲೀಡರ್ ಎನಿಸಿಕೊಂಡ ಕೆಲವರು ಜಾತಿ ಹೆಸರಿನಲ್ಲಿ ಮತಗಳನ್ಜು ಒಡೆಯುವ ಕೆಲಸ ನಡೆಯುತ್ತಿದೆ ಎಂಬ ಮಾತುಗಳು ಕೇಳಿ ಬಂದಿದ್ದು, ಬಿಜೆಪಿಯ ಯಾವ ಮತದಾರರು ಗಾಳಿ ಸುದ್ದಿಗೆ ಬಲಿಯಾಗುವವರು ಅಲ್ಲ, ದೇಶದ ಹಿತದೃಷ್ಟಿಯಿಂದ ಮೋದಿಯವರಿಗೆ ಮತ ನೀಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಯಾರು ಯೋಗ್ಯರು, ಹಿಂದುತ್ವದ ಆಧಾರದಲ್ಲಿ ದೇಶವನ್ನು ಮುನ್ನೆಡೆಸುತ್ತಾರೆ ಅಂತಹ ನಾಯಕರಿಗೆ ಮತದಾನ ಮಾಡಿ, ಅದು ಬಿಟ್ಟು ನೋಟಾ ದ ಹಿಂದೆ ಹೋಗಬೇಡಿ. ಜಿಲ್ಲೆಯ ಯಾವುದೇ ಸಮಸ್ಯೆಗಳಿದ್ದರು ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಪರಿಹಾರ ಮಾಡುತ್ತಾರೆ ಎಂದು ಭರವಸೆ ನೀಡಿದರು.

ಜಾಗತಿಕವಾಗಿ ಭಾರತವನ್ನು ಗುರುತಿಸಿಕೊಳ್ಳಲು ಕಾರಣರಾದ , ಹಿಂದುತ್ವದ ಆಧಾರದಲ್ಲಿ ದೇಶವನ್ನು ಉಳಿಸುವ ನಿಟ್ಟಿನಲ್ಲಿ ಮೋದಿಯವರನ್ನು ಗೆಲ್ಲಿಸಿಕೊಡಿ ಎಂದು ಮನವಿ ಮಾಡಿದರು.

ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ ಮಾತನಾಡಿ, ಬಿಜೆಪಿ ಮತ್ತೆ ಪ್ರಧಾನಿಯಾಗ ಬೇಕು ಎಂಬ‌ ಎಲ್ಲರ ಕನಸು ನನಸಾಗುವುದರಲ್ಲಿ ಯಾವುದೇ ಸಂಶಯವಿಲ್ಲ.

ಜಿಲ್ಲೆಯ ಅಭ್ಯರ್ಥಿ ಬ್ರಿಜೇಶ್ ಚೌಟ ಯುವ ನಾಯಕನಾಗಿದ್ದು, ಮೂರು ಲಕ್ಷಕ್ಕೂ ಅಧಿಕ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ ,ಈ ಬಗ್ಗೆ ಯಾವುದೇ ಸಂಶಯ ಬೇಡ ಎಂದು ತಿಳಿಸಿದರು.

ದ.ಕ.ಜಿಲ್ಲೆಯ ಜನರಿಗೆ ಜಾತಿ ಮುಖ್ಯವಲ್ಲ ದೇಶ ಮುಖ್ಯವಾಗಿದ್ದು, ಅಪಪ್ರಚಾರಗಳಿಗೆ ಕಿವಿಗೊಡದಂತೆ ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ದೇವಪ್ಪ ಪೂಜಾರಿ, ಹಿಂದುಳಿದ ವರ್ಗದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೋನಪ್ಪ ದೇವಸ್ಯ, ಬಂಟ್ವಾಳ ಮಂಡಲದ ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಅರಳ, ಕಾರ್ಯದರ್ಶಿ ಪುರುಷೋತ್ತಮ ಶೆಟ್ಟಿ ವಾಮದಪದವು, ಉಪಾಧ್ಯಕ್ಷ ಚಿದಾನಂದ ರೈ ಕಕ್ಯ ಮತ್ತಿತರರು ಉಪಸ್ಥಿತರಿದ್ದರು.

More from the blog

ಜೀಪ್ ಬೈಕ್ ಗೆ ಡಿಕ್ಕಿ… ಬೈಕ್ ಸವಾರ ಸಾವು : ಇಬ್ಬರು ಮಕ್ಕಳು ಗಂಭೀರ

ಪುತ್ತೂರು: ಜೀಪೊಂದು ಬೈಕ್ ಗೆ ಡಿಕ್ಕಿ ಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಣಿಯೂರು- ಮಂಜೇಶ್ವರ ಅಂತರಾಜ್ಯ ರಸ್ತೆಯ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ...

ರಾಜ್ಯದಲ್ಲಿ ಮತ್ತೆ ಏರಿದ ತಾಪಮಾನ

ಬೆಂಗಳೂರು: ಕಳೆದೊಂದು ವಾರದಿಂದ ತಗ್ಗಿದ್ದ ತಾಪಮಾನ ಮತ್ತೆ ಏರಿಕೆಯಾಗಿದ್ದು, ಮುಂದಿನ 5 ದಿನಗಳ ಕಾಲ ಕರ್ನಾಟಕದ ಬಹುತೇಕ ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು 2ರಿಂದ 3 ಡಿಗ್ರಿ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ...

ನರಿಕೊಂಬು: ನವಜೀವನ ವ್ಯಾಯಾಮ ಶಾಲೆ: ಏ.21ರಂದು ಹನುಮಾನ್ ಮಂದಿರ ಲೋಕಾರ್ಪಣೆ

ಬಂಟ್ವಾಳ: ಇಲ್ಲಿನ ನರಿಕೊಂಬು ಗ್ರಾಮದ ನವಜೀವನ ವ್ಯಾಯಾಮ ಶಾಲೆ ವತಿಯಿಂದ ರೂ 1 ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣಗೊಂಡ ಶ್ರೀ ಹನುಮಾನ್ ಮಂದಿರ ಲೋಕಾರ್ಪಣೆ ಮತ್ತು ಶ್ರೀ ಆಂಜನೇಯ ಬಿಂಬ ಪುನರ್ ಪ್ರತಿಷ್ಠೆ...

ಹಿಂದೂ ಸಂಘಟನೆ ಮುಖಂಡನಿಗೆ ಚೂರಿ ಇರಿದ ಪ್ರಕರಣ : ಆರೋಪಿ ಅರೆಸ್ಟ್

ಬಂಟ್ವಾಳ: ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಚೂರಿ ಇರಿದು ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣೆಯ ಪೋಲೀಸರು ಬಂಧಿಸಿದ ಘಟನೆ ಇಂದು ನಡೆದಿದೆ. ಬಂಟ್ವಾಳ ನಿವಾಸಿ ರವಿ ಯಾನೆ ರವೀಂದ್ರ ಬಂಧಿತ ಆರೋಪಿಯಾಗಿದ್ದಾನೆ. ಎ.14 ರಂದು ಆದಿತ್ಯವಾರ...