Friday, April 5, 2024

ಕೊಳವೆ ಬಾವಿಗೆ ಬಿದ್ದ 2 ವರ್ಷದ ಕಂದಮ್ಮ : ರಕ್ಷಣೆಗೆ ಅರ್ಧ ಅಡಿಯಷ್ಟೇ ಬಾಕಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ ಮಗು ಸಾತ್ವಿಕ ಸುರಕ್ಷಿತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತಕ್ಕೆ ಬಂದಿದೆ. ಮಗು ಸುರಕ್ಷಿತವಾಗಿದ್ದು, ಕಾರ್ಯಾಚರಣೆ ಆಶಾದಾಯಕವಾಗಿದೆ.

16 ಅಡಿ ಆಳದಲ್ಲಿರುವ ಸಾತ್ವಿಕ್ ರಕ್ಷಣೆಗಾಗಿ 22 ಅಡಿ ಆಳದವರೆಗೆ ಸುರಂಗ ಕೊರೆಯಲಾಗಿದ್ದು, 6 ಅಡಿ ಅಡ್ಡ ರಂದ್ರ ಮಾದರಿಯಲ್ಲಿ ಸುರಂಗ ಕೊರೆಯಲಾಗಿದೆ. ಸಾತ್ವಿಕ ಇರುವ ಸ್ಥಳ ತಲುಪಲು ಇನ್ನು ಅರ್ಧ ಅಡಿ ಮಾತ್ರ ಬಾಕಿ ಇದೆ. ಆದರೆ ಸಾತ್ವಿಕ್ ಇರುವ ಸ್ಥಳಕ್ಕೆ ರಂದ್ರ ಕೊರೆಯುವ ಹಂತದಲ್ಲಿ ಮತ್ತೊಂದು ಕಲ್ಲು ಕಾಣಿಸಿಕೊಂಡಿದ್ದು, ಕಾರ್ಯಾಚರಣೆಗೆ ಕೊಂಚ ತೊಡಕಾಗಿದೆ. ಯಂತ್ರದಿಂದ ಸುರಕ್ಷಿತ ಕೆಲಸ ಅಸಾಧ್ಯವಾದ ಕಾರಣ ಮಾನವಾಧಾರಿತ ಹಾರೆಯಿಂದ ಕಲ್ಲು ಒಡೆಯುವ ತಂತ್ರ ಅನುಸರಿಸಲಾಗುತ್ತಿದೆ. ಇದರಿಂದಾಗಿ ಕಾರ್ಯಾಚರಣೆ ಕೊಂಚ ವಿಳಂಬವಾಗಿದೆ. ಆದರೆ ಬಾಲಕ ಸಾತ್ವಿಕ ಸುರಕ್ಷಿತವಾಗಿದ್ದು, ಆಕ್ಸಿಜನ್ ಪೂರೈಕೆ ಮುಂದುವರೆದಿದೆ.

16 ಅಡಿ ಆಳದಲ್ಲಿರುವ ಸಾತ್ವಿಕ ಕೆಳಗೆ ಕುಸಿಯದಂತೆ ಮೇಲಿನಿಂದ ಎರಡೂ ಕಾಲಿಗೆ ಹಗ್ಗ ಕಟ್ಟಿದ್ದು, ಒಂದು ಹಗ್ಗ ಸುರಕ್ಷಿತವಾಗಿ ಸಾತ್ವಿಕ್ ಸ್ಥಿರವಾಗಿ ಹಿಡಿದಿದೆ. ಹೈದರಾಬಾದ್ ನಿಂದ ಬಂದಿರುವ ಎನ್.ಡಿ.ಆರ್.ಎಫ್. ತಂಡ ಹಾಗೂ ರಾಜ್ಯದ ಎಸ್.ಡಿ.ಅರ್.ಎಫ್. ತಂಡಗಳು ಬಾಲಕ ಸಾತ್ವಿಕನನ್ನು ಸುರಕ್ಷಿತವಾಗಿ ಹೊರತೆಗೆಯುವ ಕಾರ್ಯಾಚರಣೆಯಲ್ಲಿ ಯುದ್ಧೋಪಾದಿಯಲ್ಲಿ ಕೆಲಸ ಮಾಡುತ್ತಿವೆ.

ಬಾಲಕನ ರಕ್ಷಣಾ ಕಾರ್ಯಾಚರಣೆ ಸಂದರ್ಭದಲ್ಲಿ ಜಿಲ್ಲಾಡಳಿತ ಹಾಗೂ ಇಂಡಿ ತಾಲೂಕು ಆಡಳಿತ ರಕ್ಷಣಾ ಕಾರ್ಯಾಚರಣೆಗೆ ಅಗತ್ಯ ಇರುವ ಸಕಲ ಸಿದ್ಧತೆಯೊಂದಿಗಿ ಇಡೀ ರಾತ್ರಿ ಸ್ಥಳದಲ್ಲೇ ಬೀಡು ಬಿಟ್ಟಿದೆ.

More from the blog

ಸಾವು ಗೆದ್ದು ಬಂದ ಸಾತ್ವಿಕ್ ; ಸತತ 20 ಗಂಟೆಗಳ ಕಾರ್ಯಾಚರಣೆ ಯಶಸ್ವಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ 2 ವರ್ಷದ ಕಂದ ಸಾತ್ವಿಕ್​​ನನ್ನು ಕೊನೆಗೂ ರಕ್ಷಣಾ ಪಡೆಯ ಸಿಬ್ಬಂದಿ ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇಂಡಿಯ ಲಚ್ಯಾನ ಗ್ರಾಮದ ತೋಟದಲ್ಲಿ ಆಟವಾಡುತ್ತಿದ್ದಾಗ ಮಗು ಕೊಳವೆ ಬಾವಿಗೆ ಬಿದ್ದಿತ್ತು. ಈ ಸಂಬಂಧ...

ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ

ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರು ಬುಧವಾರ ನಾಮಪತ್ರ ಸಲ್ಲಿಸಿದರು. ಇನ್ನು ಕೋಟ ಶ್ರೀನಿವಾಸ್ ಪೂಜಾರಿ ಅವರು ನಾಮಪತ್ರ ಸಲ್ಲಿಸುವ ಮುನ್ನ ಪಕ್ಷದ ಕಾರ್ಯಕರ್ತರ ಬೃಹತ್‌ ಸಮಾವೇಶ...

ಮಿತಿ ಮೀರಿದ ತಾಪಮಾನ : ಖಡಕ್​ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಬಿರು ಬಿಸಿಲು ಹೆಚ್ಚಳವಾಗುತ್ತಿದ್ದು ಮುಂದಿನ 14 ದಿನಗಳ ಕಾಲ ಬಿಸಿಗಾಳಿ ಬೀಸಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ (KSNDMC) ಮುನ್ಸೂಚನೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್​...

ಯದುವೀರ್​​ ಒಡೆಯರ್​ ಬಳಿ ಇರೋ ಆಸ್ತಿ ಎಷ್ಟು ಗೊತ್ತಾ…?

ಮೈಸೂರು : ಮೈಸೂರು - ಕೊಡಗು ಲೋಕಸಭಾ ಕ್ಷೇತ್ರದಿಂದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಮೈಸೂರು ಒಡೆಯರ್‌ ಆಗಿರುವ ಯದುವೀರ್‌ ಈ ವೇಳೆ ಸುಮಾರು 5 ಕೋಟಿ ರೂ....