Thursday, April 11, 2024

ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಯ ನಕಲಿ ಸುದ್ದಿ ಪ್ರಕಟ : ಕ್ರಮ ಕೈಗೊಳ್ಳುವಂತೆ ಸುಬ್ರಹ್ಮಣ್ಯ ಕಾಂಗ್ರೆಸ್ ವತಿಯಿಂದ ಪೊಲೀಸ್ ದೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಕೋಮು ಭಾವನೆಯ ಹೇಳಿಕೆ ನೀಡಿದ್ದಾರೆಂಬ ನಕಲಿ ಸುದ್ದಿಯನ್ನು ವಾಟ್ಸಾಪ್ ಗ್ರೂಪ್ ಗಳಲ್ಲಿ ಪ್ರಚಾರ ಮಾಡುತ್ತಿರುವವರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸುಬ್ರಹ್ಮಣ್ಯ ಕಾಂಗ್ರೆಸ್ ವತಿಯಿಂದ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ದೂರು ನೀಡಿರುವ ಘಟನೆ ವರದಿಯಾಗಿದೆ.

ಕಾಂಗ್ರೆಸ್ ಸುಬ್ರಹ್ಮಣ್ಯ ಗ್ರಾಮ ಸಮಿತಿಯು ಸಾಮಾಜಿಕ ಜಾಲತಾಣವಾದ ವಾಟ್ಸಪ್ ಗ್ರೂಪ್‌ಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲೆ ಅವಮಾನಕರ ನಕಲಿ ಸುದ್ದಿಗಳನ್ನು ಪ್ರಚಾರ ಮಾಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸುಬ್ರಹ್ಮಣ್ಯ ಠಾಣೆಗೆ ದೂರು ನೀಡಿದೆ.

ಸುಬ್ರಹ್ಮಣ್ಯದ ” ಶೈವಾಗಮ ಕ್ಷೇತ್ರ ಶ್ರೀಕುಕ್ಕೆ” ಹಾಗೂ “ಗೌಡ ನಮಿತಿ ಸುಬ್ರಹ್ಮಣ್ಯ ವಲಯ’ ಎಂಬ ಎರಡು ವಾಟ್ಸಪ್ ಗ್ರೂಪ್ ಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ನಕಲಿ ಕಪೋಲಕಲ್ಪಿತ ಸುದ್ದಿಗಳನ್ನು ದಿನಪತ್ರಿಕೆಗಳಲ್ಲಿ ಪ್ರಕಟಗೊಂಡಂತೆ ಎಡಿಟ್ ಮಾಡಿ ಕೋಮುಗಲಭೆಗಳಿಗೆ ಪ್ರಚೋದನೆ ನೀಡುವಂತಹ ಉದ್ರೇಕಕಾರಿ ಯಾಗಿ ಬರೆಯಲಾಗಿದ್ದು ಹೀಗೆ ಮಾಡುವವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಆಗ್ರಹಿಸಲಾಗಿದೆ.

More from the blog

ಎಳನೀರು ಕುಡಿದು ಅಸ್ವಸ್ಥ ಪ್ರಕರಣ : ಫ್ಯಾಕ್ಟರಿಗೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ

ಮಂಗಳೂರು: ನಗರದ ಹೊರವಲಯದ ಎಳನೀರು ಫ್ಯಾಕ್ಟರಿಯೊಂದರಿಂದ ತಂದ ಎಳನೀರು ಕುಡಿದು ಕೆಲವರು ಅಸ್ವಸ್ಥರಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ವರದಿ ಆಧಾರದಲ್ಲಿ ದ.ಕ ಜಿಲ್ಲಾ ಆರೋಗ್ಯಾಧಿಕಾರಿ ಡಾ| ತಿಮ್ಮಯ್ಯ ಅವರು ಫ್ಯಾಕ್ಟರಿಗೆ ಭೇಟಿ...

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...

ಎ.14ರ ಪ್ರಧಾನಿ ಮೋದಿ ಸಮಾವೇಶ ರದ್ದು : ರೋಡ್ ಶೋದಲ್ಲಿ ಮಾತ್ರ ಭಾಗಿ

ಮಂಗಳೂರು: ಏಪ್ರಿಲ್ 14 ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಧಾನಿ ಮೋದಿ ಬೃಹತ್ ಸಮಾವೇಶಕ್ಕೆ ಆಯೋಜನೆ ಮಾಡಲಾಗಿತ್ತು. ಆದರೆ ಇದೀಗ ಕೊನೆ ಕ್ಷಣದಲ್ಲಿ ಈ ಸಮಾವೇಶ ರದ್ದುಪಡಿಸಲಾಗಿದೆ. ಏಪ್ರಿಲ್ 14ರಂದು ಮಂಗಳೂರಿನಲ್ಲಿ...

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....