Tuesday, April 9, 2024

300 ರೂ. ಗಡಿಯತ್ತ ಹಸಿ ಕೊಕ್ಕೊ… 900 ರೂ. ಗಡಿಯತ್ತ ಒಣ ಕೊಕ್ಕೊ

ಪುತ್ತೂರು: ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಹಸಿ ಕೊಕ್ಕೊ, ಒಣ ಕೊಕ್ಕೊ ಧಾರಣೆ ಮತ್ತಷ್ಟು ಜಿಗಿದಿದ್ದು, ಹೊರ ಮಾರುಕಟ್ಟೆಯಲ್ಲಿಯೂ ಅತ್ಯಧಿಕ ದರ ದಾಖಲಾಗಿದೆ. ಒಣ ಕೊಕ್ಕೊ 900 ರೂ. ಗಡಿಯತ್ತ, ಹಸಿ ಕೊಕ್ಕೊ 300 ರೂ. ಗಡಿಯತ್ತ ತಲುಪುವ ಸಾಧ್ಯತೆ ಕಂಡು ಬಂದಿದೆ.

ಹೊರ ಮಾರುಕಟ್ಟೆ ಎ. 6ರಂದು ಪಂಜ ಮಾರುಕಟ್ಟೆಯಲ್ಲಿ ಹಸಿ ಕೊಕ್ಕೊ ಧಾರಣೆ ಕೆ.ಜಿ.ಗೆ 248 ರೂ. ದಾಖಲಾಗಿತ್ತು. ಎ. 8ರಂದು ಸುಳ್ಯ ಹೊರ ಮಾರುಕಟ್ಟೆಯಲ್ಲಿ ಕೆ.ಜಿ.ಗೆ 258 ರೂ. ದಾಖಲಾಗಿದೆ. ಎ. 1ರಂದು 230 ರೂ. ಇದ್ದ ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಎ. 8ರಂದು 255 ರೂ.ಗೆ ತಲುಪಿದೆ.

ಮಾ. 25ರಂದು 575-650 ರೂ. ಧಾರಣೆಯಲ್ಲಿದ್ದ ಒಣ ಕೊಕ್ಕೊ ಅನಂತರ 675 ರೂ. ಆಸುಪಾಸಿಗೆ ಬಂದು ತಲುಪಿತ್ತು. ಎ. 8ರಂದು ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಒಣ ಕೊಕ್ಕೊ ಕೆ.ಜಿ.ಗೆ 825 ರೂ.ಗೆ ಖರೀದಿ ಆಗುವ ಮೂಲಕ ದಾಖಲೆ ಬರೆದಿದೆ.

More from the blog

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...

ಏಪ್ರಿಲ್ 14ರಂದು ಮಂಗಳೂರಿಗೆ ಪ್ರಧಾನಿ ಮೋದಿ

ಬೆಂಗಳೂರು: ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರ ಸಮಾವೇಶ ಚಿಕ್ಕಬಳ್ಳಾಪುರದಿಂದ ಮಂಗಳೂರಿಗೆ ಸ್ಥಳಾಂತರಗೊಂಡಿದ್ದು, ಅದರಂತೆ, ಏಪ್ರಿಲ್ 14 ರಂದು ದ.ಕ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಮಾವೇಶ ನಡೆಯಲಿದೆ.. ಏಪ್ರಿಲ್ 14ಕ್ಕೆ ಬೆಂಗಳೂರಿಗೆ ಆಗಮಿಸಲಿರುವ...

ಬಂಟ್ವಾಳದ ಕುದ್ಕೋಳಿ: ಹೊತ್ತಿ ಉರಿದ ಡಸ್ಟರ್ ಕಾರು

ಬಂಟ್ವಾಳ: ಬಂಟ್ವಾಳ- ಮೂಡುಬಿದಿರೆ ರಸ್ತೆಯ ಕುದ್ಕೋಳಿ ಸಮೀಪ ಡಸ್ಟರ್ ಕಾರೊಂದು ಏಕಾಏಕಿ ಬೆಂಕಿ ಹತ್ತಿ ಉರಿದ ಘಟನೆ ಇಂದು ಬೆಳಗ್ಗೆ (ಸೋಮವಾರ) ನಡೆದಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ. ಬಳಿಕ ಸ್ಥಳೀಯರು ಹಾಗೂ ಬಂಟ್ವಾಳ...

ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ : ಕಡಬ, ಅಜೆಕಾರಿನಲ್ಲಿ ದಾಖಲೆಯ ಉಷ್ಣಾಂಶ

ಮಂಗಳೂರು: ಮುಂದಿನ ಎರಡು ದಿನಗಳ ಕಾಲ ಬಿಸಿಲಿನ ಶಾಕ ಮತ್ತಷ್ಟು ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಕರಾವಳಿ ಭಾಗದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಎ. 4ರಿಂದ 5ರ...