Wednesday, April 24, 2024

ಬಿಜೆಪಿ ಗ್ಯಾರಂಟಿ ಬಿಜೆಪಿಯವರ ಬಾಯಲ್ಲಿದೆ, ಕಾಂಗ್ರೆಸ್ ಗ್ಯಾರಂಟಿ ಜನರ ಕೈಯಲ್ಲಿದೆ- ಮಾಜಿ ಸಚಿವ ಬಿ.ರಮಾನಾಥ ರೈ

ಕಾಂಗ್ರೆಸ್ ಗ್ಯಾರಂಟಿ ಸರಿಯಾ? ಮೋದಿ ಗ್ಯಾರಂಟಿಯಾ? ಇದು ಚರ್ಚೆಯಾಗಬೇಕಿದೆ, ಕೇಂದ್ರದ ಬಿಜೆಪಿ ಸರಕಾರ ವಚನ ಭ್ರಷ್ಟ ಸರಕಾರವಾಗಿದೆ, ಬಿಜೆಪಿ ಗ್ಯಾರಂಟಿ ಬಿಜೆಪಿಯವರ ಬಾಯಲ್ಲಿದೆ,ಕಾಂಗ್ರೆಸ್ ಗ್ಯಾರಂಟಿ ಜನರ ಕೈಯಲ್ಲಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ,ಅವರು ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದರು.

ಅವರು ಮೆಲ್ಕಾರ್ ನಿಂದ ಬೇಂಕ್ಯವರೆಗೆ ಬೈಕ್ ರ್ಯಾಲಿಯಲ್ಲಿ ಭಾಗವಹಿಸಿ, ಬಳಿಕ ಸಜೀಪ ಸುಭಾಷ್ ನಗರದಲ್ಲಿ ನಡೆದ ಬಹಿರಂಗ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ಹಾಗಾಗಿ ಕಾಂಗ್ರೆಸ್ ಸುಳ್ಳು ಹೇಳದೆ ಕೇಂದ್ರ ಸರಕಾರ ಆಡಳಿತಕ್ಕೆ ಬಂದರೆ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಗ್ಯಾರಂಟಿಯನ್ನು ನೀಡುತ್ತದೆ ಎಂಬ ಭರವಸೆ ಜನರಲ್ಲಿದೆ ಎಂದು ತಿಳಿಸಿದರು.

ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿರುವ ಬಿಜೆಪಿಯ ಆಡಳಿತವನ್ನು ಕೊನೆಗಾಣಿಸಲು ಈ ಬಾರಿಯ ಲೋಕಸಭಾ ಚುನಾವಣೆ ಮಹತ್ವದ್ದಾಗಿದೆ,ಹಾಗಾಗಿ ಈ ಬಾರಿ ಆಲೋಚಿಸಿ ಕಾಂಗ್ರೆಸ್ ಪಕ್ಷಕ್ಕೆ ಮತನೀಡುವಂತೆ ಮನವಿ ಮಾಡಿದರು.ಪ್ರಜಾಪ್ರಭುತ್ವ ವ್ಯವಸ್ಥೆಯೇ ಉಳಿಯುವುದಿಲ್ಲವಾ? ಎಂಬ ಹೆದರಿಕೆ ಜನರಿಗೆ ಬಂದಿದೆ ಎಂದು ಅವರು ತಿಳಿಸಿದರು.

ಕಾಂಗ್ರೆಸ್ ಬಡವರ ಪರ,ರೈತರ ಪರವಾಗಿ ಕೆಲಸ ಮಾಡಿದೆ, ಕಾಂಗ್ರೆಸ್ ಮಾಡಿದ ಕಾರ್ಯಕ್ರಮಗಳು ಜನರಿಗೆ ತಲುಪಿದ್ದು, ಜನಮಾನಸದಲ್ಲಿ ಉಳಿದಿದೆ ಎಂದು ತಿಳಿಸಿದರು.

ಮತೀಯವಾದಿ ಶಕ್ತಿಯನ್ನು ವಿರೋಧಿಸುವ ಕಾಂಗ್ರೆಸ್, ಸಾಮರಸ್ಯದ ಬದುಕಿಗೆ,ಶಾಂತಿ ನೆಲೆಗೊಳ್ಳಲು ಪಣತೊಟ್ಟು ಕೆಲಸ ಮಾಡಿದೆ ಎಂದು ತಿಳಿಸಿದರು.

ಬಂಡವಾಳಶಾಹಿ ವಿರುದ್ದ ಮತ್ತು ಬಡವರ ನಡುವಿನ ಹೋರಾಟ ಇದಾಗಿದ್ದು, ಬಡವರ ಪರವಾಗಿ ಕಾಂಗ್ರೆಸ್ ಹೋರಾಟ ಮಾಡುತ್ತದೆ ಎಂದು ಹೇಳಿದರು.

ಕಾಂಗ್ರೇಸ್ ಪಕ್ಷ ಲೋಕಸಭಾ ಅಭ್ಯರ್ಥಿಯಾಗಿ ಯಾವುದೇ ಕಪ್ಪುಚುಕ್ಕೆಯಿಲ್ಲದ, ವಿದ್ಯಾವಂತ ಯುವಕ ಪದ್ಮರಾಜ್ ಆರ್.ಪೂಜಾರಿ ಕಣಕ್ಕಿಳಿಸಿದ್ದು, ಅತ್ಯಧಿಕ ಮತಗಳಿಂದ ಗೆಲ್ಲಿಸಿಕೊಡಿ ಎಂದು ಮನವಿ ಮಾಡಿದರು.

ಕಾಂಗ್ರೆಸ್ ಪ್ರಮುಖರಾದ ಅಶ್ವನಿ ಕುಮಾರ್ ರೈ ಮಾತನಾಡಿ, ಯು.ಪಿ.ಎ.ಸರಕಾರದ ಅವಧಿಯಲ್ಲಿ ಬಹಳಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿವೆ. ಆದರೆ ಎನ್.ಡಿ.ಎ‌.ನೇತ್ರತ್ವದ ಬಿಜೆಪಿಯವರು ಸುಳ್ಳು ಹೇಳಿ ಅಧಿಕಾರ ಪಡೆದು, ಜನರಿಗೆ ಮೋಸ ಮಾಡಿದ್ದಾರೆ ಎಂದು ಅವರು ತಿಳಿಸಿದರು.

ವೇದಿಕೆಯಲ್ಲಿ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿಕುಂದರ್ , ಕಾಂಗ್ರೇಸ್ ಪ್ರಮುಖರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಪದ್ಮಶೇಖರ್ ಜೈನ್, ಸಂಜೀವ ಪೂಜಾರಿ, ಅಬ್ಬಾಸ್ ಆಲಿ, ಪಿಯೂಸ್ ಎಲ್ .ರೊಡ್ರಿಗಸ್, ಸುದರ್ಶನ ಜೈನ್, ಪದ್ಮನಾಭ ರೈ, ಸುದರ್ಶನ ಶೆಟ್ಟಿ, ಚಿತ್ತರಂಜನ್ ಶೆಟ್ಟಿ, ಜಯಂತಿ ಪೂಜಾರಿ, ಶೋಭಾ ಶೆಟ್ಟಿ, ಜನಾರ್ದನ ಚೆಂಡ್ತಿಮಾರ್,ಅನ್ವರ್ ಕರೋಪಾಡಿ,ಶೋಬಿತ್ ಪೂಂಜ,ಮಹಮ್ಮದ್ ಶರೀಫ್ , ಕರೀಮ್, ಯೂಸುಫ್ ಕರಂದಾಡಿ,ಇಕ್ಬಾಲ್ ,ರಾಜೇಶ್ ರೊಡ್ರಿಗಸ್ ,ಸಿದ್ದೀಕ್ ಗುಡ್ಡೆಯಂಗಡಿ, ಜೆಸಿಂತಾ ಹಾಗೂ ಮತ್ತಿತರ ಕಾಂಗ್ರೆಸ್ ‌ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಶೆಟ್ಟಿ ಸ್ವಾಗತಿಸಿದರು.

More from the blog

ಕೆ.ಎಸ್.ಎಸ್.ಕಾಲೇಜ್: ಅಧ್ಯಯನ ವಿನಿಮಯ ಕಾರ್ಯಕ್ರಮ 

ಕುಕ್ಕೆಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯದ ವಾಣಿಜ್ಯಶಾಸ್ತ್ರ ಮತ್ತು ಉದ್ಯಮಾಡಳಿತ ವಿಭಾಗವು ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶದ ಆಶ್ರಯದಲ್ಲಿ ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯದೊಂದಿಗೆ ಮಾಡಿಕೊಂಡ ಎಂ.ಓ.ಯು .ಪ್ರಕಾರ ಅಧ್ಯಯನ ವಿನಿಮಯ ಕಾರ್ಯಕ್ರಮ...

ವಿಟ್ಲದಲ್ಲಿ ಬಿಜೆಪಿಯಿಂದ ರೋಡ್ ಶೋ: ಮತಯಾಚನೆ 

ವಿಟ್ಲ: ದ.ಕ ಜಿಲ್ಲಾ ಲೋಕಸಭಾ ಚುನಾವಣೆ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಪರ ವಿಟ್ಲದಲ್ಲಿ ಬಿಜೆಪಿಯಿಂದ ರೋಡ್ ಶೋ ನಡೆಯಿತು. ವಿಟ್ಲದ ಜೈನ ಬಸದಿಯಿಂದ ಹೊರಟ ರೋಡ್ ಶೋ ವಿಟ್ಲ ಮುಖ್ಯ ಪೇಟೆಯಲ್ಲಿ ಸಂಚರಿಸಿ,...

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಅವರಿಗೆ ಬೆಂಬಲ ಸೂಚಿಸುವ ನಿಟ್ಟಿನಲ್ಲಿ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ನ ಹಿಂದುಳಿದ ವರ್ಗಗಳ ಘಟಕದ ಸಭೆ

ಬಂಟ್ವಾಳ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಅವರಿಗೆ ಬೆಂಬಲ ಸೂಚಿಸುವ ನಿಟ್ಟಿನಲ್ಲಿ ಬಂಟ್ವಾಳ ಮತ್ಗು ಪಾಣೆಮಂಗಳೂರು ಬ್ಲಾಕ್ ನ ಹಿಂದುಳಿದ ವರ್ಗಗಳ ಘಟಕದ ಸಭೆ ಬಿಸಿರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆಯಿತು. ಹಿಂದುಳಿದ...

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಶ್ರೀ ಹನುಮೋತ್ಸವ ಶ್ರೀಮದ್ರಾಮಾಯಣ ಮಹಾಯಜ್ಞ

ವಿಟ್ಲ: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಮಂಗಳವಾರ ಶ್ರೀ ಹನುಮೋತ್ಸವದ ಅಂಗವಾಗಿ ಭಗವನ್ನಾಮಸಂಕೀರ್ತನೆ ಮಂಗಲ, ಶ್ರೀಮದ್ರಾಮಾಯಣ ಮಹಾಯಜ್ಞದ ಸಂದರ್ಭದಲ್ಲಿ ದತ್ತಪ್ರಕಾಶ ಪತ್ರಿಕೆಯ 25ನೇ ವರ್ಷದ ಪ್ರಥಮ ಸಂಚಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು. ಶ್ರೀ ಸಂಸ್ಥಾನದ...