Tuesday, April 9, 2024

ಮನೆಗೆ‌ ನುಗ್ಗಿ ಚೂರಿ ಇರಿದ ಪ್ರಕರಣ : ಆರೋಪಿ ಅರೆಸ್ಟ್

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ‌ಗ್ರಾಮಾಂತರ ಪೋಲೀಸ್ ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ್ದು,ನ್ಯಾಯಾಲಯ ಈತನಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

ಅಬ್ದುಲ್ ರಹಿಮಾನ್ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ಈತನನ್ನು ಪರಂಗಿಪೇಟೆಯಲ್ಲಿ ಬಂಧಿಸಲಾಗಿದೆ.

ಘಟನೆಯ ‌ವಿವರ

ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ  ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ ಮಹಮ್ಮದ್ ರಮೀಜ್ ( 19) ಎಂಬಾತನಿಗೆ ಮನೆಗೆ ನುಗ್ಗಿ ಚೂರಿಯಿಂದ ಇರಿಯಲಾಗಿತ್ತು.

ಅಬ್ದುಲ್ ರಹಿಮಾನ್ ಎಂಬಾತ ಚೂರಿ ಇರಿದು ಪರಾರಿಯಾಗಿದ್ದಬಳಿಕ ಈತನಿಗಾಗಿ ಪೋಲೀಸ್ ತಂಡ ಹುಡುಕಾಟ ನಡೆಸುತ್ತಿತ್ತು.ಇದೀಗ ಆರೋಪಿಯನ್ನು ಪೋಲೀಸರು ಪರಂಗಿಪೇಟೆಯಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಆರೋಪಿ ಪರಂಗಿಪೇಟೆಯಲ್ಲಿ ಈ ಹಿಂದೆ ನಡೆದ ಚೂರಿ ಇರಿತ ಪ್ರಕರಣವೊಂದರ ಆರೋಪಿ ಕೂಡ ಆಗಿದ್ದ ಎಂದು ಪೋಲೀಸ್ ಮೂಲಗಳು ತಿಳಿಸಿವೆ.

ಆರೋಪಿ ಅಬ್ದುಲ್ ರಹಿಮಾನ್ ಯಾವುದೋ ಹಣಕಾಸಿನ ಮತ್ತು ಹಳೆಯ ದ್ವೇಷದ ಹಿನ್ನೆಲೆಯಲ್ಲಿ ರಮೀಜ್ ನನ್ನು ಕೊಲೆ ಮಾಡುವ ಉದ್ದೇಶದಿಂದ ಪೋನ್ ಮಾಡಿ ಮನೆಯಲ್ಲಿರುವುದನ್ನು ಖಚಿತಪಡಿಸಿಕೊಂಡು, ಮನೆಯೊಳಗೆ ಬಂದು ಚೂರಿಯಿಂದ ಎರಡು‌ಬಾರಿ ತಿವಿದು ‌ಪರಾರಿಯಾಗಿದ್ದ.

More from the blog

ಬಿಜೆಪಿ ಬಂಟ್ವಾಳ ಮಂಡಲದ ವತಿಯಿಂದ ನಾರಿಶಕ್ತಿ ಮಹಿಳಾ ಸಮಾವೇಶ

ಬಂಟ್ವಾಳ: ನಾರಿ ಶಕ್ತಿ ಸಶಕ್ತರಾಗಬೇಕು ಎಂಬುದು ಮಹತ್ವದ ಕನಸು ಮತ್ತು ಪರಿಕಲ್ಪನೆಯಾಗಿದ್ದು, ರಾಜಕೀಯವಾಗಿ ಮಹಿಳೆಯರನ್ನು ಸಬಲೀಕರಣ ಮಾಡಿದ ಪಕ್ಷ ಬಿಜೆಪಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರದ...

ವಿಕಸಿತ ಭಾರತ ಸಂಕಲ್ಪದೊಂದಿಗೆ ಗ್ರಾಮ, ಮನೆ, ಮನ ಅಭಿಯಾನ ಸಂಪರ್ಕಕ್ಕೆ ಶಾಸಕ ರಾಜೇಶ್ ನಾಯ್ಕ್ ಚಾಲನೆ

ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು, ದ.ಕ.ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಪ್ರಚಂಡ ಬಹುಮತದೊಂದಿಗೆ ಗೆಲುವು ಸಾಧಿಸಬೇಕು ಎಂಬ ಯೋಚನೆಯಿಂದ ಶಾಸಕ ರಾಜೇಶ್ ನಾಯ್ಕ್ ಅವರು ವಿಕಸಿತ ಭಾರತ ಸಂಕಲ್ಪದೊಂದಿಗೆ ಗ್ರಾಮ ,ಮನೆ,...

ವೀರಕಂಬ ಗ್ರಾಮದ ಗ್ರಾಮದೈವ ಶ್ರೀ ಗಿಳಿಕಿಂಜತಾಯಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

ಬಂಟ್ವಾಳ ತಾಲೂಕು ವೀರಕಂಬ ಗ್ರಾಮದ ಗ್ರಾಮದೈವ ಶ್ರೀ ಗಿಳಿಕಿಂಜತಾಯಿ ದೇವಸ್ಥಾನದ ವರ್ಷವದಿ ಜಾತ್ರೆಯು ಊರ ಪರವೂರ ಭಕ್ತದಿಗಳ ಸೇರಿಗೆಯಲ್ಲಿ ವಿಜೃಂಭಣೆಯಿಂದ ಜರಗಿತು. ದಿನಾಂಕ 7-4-2024 ರ ರಾತ್ರಿ ಗಿಳಿಕಿಂಜ ಬಂಡಾರ ಮನೆಯಿಂದ ದೈವದ ಬಂಡಾರ...

ದಕ್ಷಿಣ ಕನ್ನಡ: ಪಕ್ಷೇತರ ಅಭ್ಯರ್ಥಿ ನಾಮಪತ್ರ ವಾಪಸ್‌ : 9 ಅಭ್ಯರ್ಥಿಗಳು ಕಣದಲ್ಲಿ

ಮಂಗಳೂರು: ಲೋಕಸಭಾ ಚುನಾವಣೆಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಬ್ಬ ಅಭ್ಯರ್ಥಿ ನಾಮಪತ್ರ ಹಿಂಪಡೆದಿದ್ದು, ಒಟ್ಟು ಒಂಬತ್ತು ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದ 11 ಮಂದಿಯ ಪೈಕಿ 10 ಅಭ್ಯರ್ಥಿಗಳ...