Friday, April 5, 2024

ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಚುನಾವಣಾ ಸಿಬ್ಬಂದಿ

ಮಂಗಳೂರು: ವೈಯಕ್ತಿಕ ಕಾರಣಗಳ ಹಿನ್ನೆಲೆಯಲ್ಲಿ ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ  ನಗರದ ಜಿಲ್ಲಾಧಿಕಾರಿಯವರ ಕಚೇರಿ ಆವರಣದಲ್ಲಿ ನಡೆದಿದೆ. ಕೂಡಲೇ ಅವರನ್ನು ನಗರ್ ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ.

ಶ್ರೀಧರ್ ಹೆಗಡೆ ಆತ್ಮಹತ್ಯೆಗೆ ಯತ್ನಿಸಿದವರು. ನಗರದ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿರುವ ಏಕಗವಾಕ್ಷಿ ಪದ್ದತಿ ತಂಡದ ಸದಸ್ಯರಾಗಿದ್ದರು. 2019ರಿಂದ ಬೆಳ್ತಂಗಡಿಯ ಕಡಿರು ಉದ್ಯಾವರ ಪಂಚಾಯಿತಿ ವ್ಯಾಪ್ತಿಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಇವರ ಜಾಗಕ್ಕೆ ಮತ್ತೊಬ್ಬರು ವರ್ಗಾವಣೆಯಾದ ಹಿನ್ನಲೆಯಲ್ಲಿ ಕಳೆದ ಫೆಬ್ರವರಿ ಹಾಗೂ ಮಾರ್ಚ್ ನಿಂದ ಸ್ಥಳ ನಿರೀಕ್ಷಣೆಯಲ್ಲಿದ್ದರು.

ವೈಯಕ್ತಿಕ ಕಾರಣಗಳಿಂದ ಇಂದು ಆತ್ಮಹತ್ಯೆಗೆ ಯತ್ನಿಸಿದ, ಇವರನ್ನು ಕೂಡಲೇ ವೆನ್ ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವೈದ್ಯರು ಚಿಕಿತ್ಸೆ ನೀಡಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ. ಹೆಚ್ಚಿನ ನಿಗಾವಣಿಗಾಗಿ ಇವರನ್ನು ತೀವ್ರ ನಿಗಾ ಘಟಕಕ್ಕೆ ಸ್ಥಳಾಂತರಿಸಲಾಗಿದೆ.

ಇವರ ಪತ್ನಿ ಜಯಂತಿ ಸ್ಟಾಫ್ ನಸ್೯ ಆಗಿ ಬೆಳ್ತಂಗಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಣಧಿಕಾರಿ ಡಾ. ಆನಂದ್, ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ತಿಮ್ಮಯ್ಯ, ಜಿಲ್ಲಾ ಪಂಚಾಯತ ನ ಲೆಕ್ಕಾಧೀಕ್ಷ ಬಾಲು ಡಿ.ಎಂ. ಸೇರಿದಂತೆ ಹಲವು ಅಧಿಕಾರಿಗಳು, ಸಿಬ್ಬಂದಿ ಆಸ್ಪತ್ರೆಯಲ್ಲಿದ್ದು, ಅವರ ಚಿಕಿತ್ಸೆಗೆ ನೆರವಾಗಿದ್ದಾರೆ.

ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಹಾಗೂ ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ಆತ್ಮಹತ್ಯೆಗೆ ಯತ್ನಿಸಿದ ಶ್ರೀಧರ ಹೆಗಡೆ ಅವರ ಪತ್ನಿ, ಮಕ್ಕಳು ಹಾಗೂ ಕುಟುಂಬದ ಸದಸ್ಯರೊಂದಿಗೆ ಮಾತನಾಡಿ, ಅವರಲ್ಲಿ ಆತ್ಮಸ್ಥೈರ್ಯ ತುಂಬಿದರು.

More from the blog

ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ನಾಮಪತ್ರ ಸಲ್ಲಿಕೆ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಅವರು ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಅವರು ಪೂಜೆ...

ದೇವರ ರಥ ಹೋಗುವ ದಾರಿಯಲ್ಲಿ ಇದ್ದ ವಾಹನಗಳನ್ನ ಜಖಂಗೊಳಿಸಿದ ಭಕ್ತರು

ಮುಲ್ಕಿ: ದೇವರ ರಥ ಹೋಗುವ ದಾರಿಯಲ್ಲಿದ್ದ ವಾಹನಗಳನ್ನು ಭಕ್ತರು ಜಖಂ ಗೊಳಿಸಿದ ಘಟನೆ ಮುಲ್ಕಿಯ ಬಪ್ಪನಾಡು ದುರ್ಗಾಪರಮೇಶ್ವರಿ ಜಾತ್ರೆಯಲ್ಲಿ ಇತ್ತೀಚೆಗೆ ನಡೆದಿದ್ದು, ಇದೀಗ ಈ ವಿಡಿಯೋ ವೈರಲ್ ಆಗುತ್ತಿದೆ. ಜಾತ್ರೆಯಲ್ಲಿ ದೇವರ ರಥ ಹೋಗುವ...

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ನಾಮಪತ್ರ ಸಲ್ಲಿಕೆ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪದ್ಮರಾಜ್ ಅರ್.ಪೂಜಾರಿ ಅವರು ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮುಂಭಾಗದಿಂದ ಎ.ಬಿ.ಶೆಟ್ಟಿ ಸರ್ಕಲ್ ವರೆಗೆ...

ಜಿಲ್ಲಾ ಕಾಂಗ್ರೇಸ್ ಹಿಂದುಳಿದ ವರ್ಗದ ಉಪಾಧ್ಯಕ್ಷ ಪದ್ಮನಾಭ ಸೇವಂತ ಅವರದು, ಆತ್ಮಹತ್ಯೆಯಲ್ಲ, ವ್ಯವಸ್ಥಿತ ಕೊಲೆ ಶಂಕೆ: ಪ್ರಕಾಶ್ ಶೆಟ್ಟಿ ತನಿಖೆಗೆ ಒತ್ತಾಯ

ಬಂಟ್ವಾಳ: ದ.ಕ.ಜಿಲ್ಲಾ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಪದ್ಮನಾಭ‌ ಸೇವಂತ ಎಂಬವರ ಸಾವಿನ ಸುತ್ತ ಅನುಮಾನಗಳು ವ್ಯಕ್ಯವಾಗಿದ್ದು, ಮೇಲ್ನೋಟಕ್ಕೆ ಇದೊಂದು ಆತ್ಮಹತ್ಯೆ ಪ್ರಕರಣ ಎಂದು ಕಂಡು ಬಂದರೂ ಇದನ್ನು ವಿಮರ್ಶೆ ಮಾಡಿದರೆ ಇದೊಂದು ಕೊಲೆ...