Tuesday, April 9, 2024

ದಕ್ಷಿಣ ಕನ್ನಡ: ಪಕ್ಷೇತರ ಅಭ್ಯರ್ಥಿ ನಾಮಪತ್ರ ವಾಪಸ್‌ : 9 ಅಭ್ಯರ್ಥಿಗಳು ಕಣದಲ್ಲಿ

ಮಂಗಳೂರು: ಲೋಕಸಭಾ ಚುನಾವಣೆಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಬ್ಬ ಅಭ್ಯರ್ಥಿ ನಾಮಪತ್ರ ಹಿಂಪಡೆದಿದ್ದು, ಒಟ್ಟು ಒಂಬತ್ತು ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ.

ಚುನಾವಣೆಯಲ್ಲಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದ 11 ಮಂದಿಯ ಪೈಕಿ 10 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿತ್ತು. ಪಕ್ಷೇತರ ಅಭ್ಯರ್ಥಿಗಳ ಪೈಕಿ ಫ್ರಾನ್ಸಿಸ್ ಲ್ಯಾನ್ಸಿ ಮಾಡ್ತಾ ಅವರ ನಾಮಪತ್ರ ತಿರಸ್ಕೃತಗೊಂಡಿತ್ತು. ಇಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿತ್ತು. ಅದರಂತೆ ಪಕ್ಷೇತರ ಅಭ್ಯರ್ಥಿ ಸತೀಶ್ ಬೂಡುಮಕ್ಕಿ ನಾಮಪತ್ರ ವಾಪಸ್ ಪಡೆದಿದ್ದಾರೆ.

ಬಿಜೆಪಿಯ ಕ್ಯಾ.ಬ್ರಿಜೇಶ್ ಚೌಟ, ಕಾಂಗ್ರೆಸ್‌ನ ಆ‌ರ್.ಪದ್ಮರಾಜ್ , ಬಹುಜನ ಸಮಾಜ ಪಕ್ಷದ ಕಾಂತಪ್ಪ ಅಲಂಗಾರ್, ಕರ್ನಾಟಕ ರಾಷ್ಟ್ರ ಸಮಿತಿಯ ರಂಜಿನಿ ಎಂ, ಉತ್ತಮ ಪ್ರಜಾಕೀಯ ಪಕ್ಷದ ಕೆ.ಇ.ಮನೋಹರ, ಕರುನಾಡ ಸೇವಕ ಪಕ್ಷದ ದುರ್ಗಾಪ್ರಸಾದ್, ಪಕ್ಷೇತರರಾಗಿ ದೀಪಕ್ ರಾಜೇಶ್ ಕುವೆಲ್ಲೊ, ಮೆಕ್ಸಿಂ ಪಿಂಟೊ ಹಾಗೂ ಸುಪ್ರೀತ್ ಕುಮಾರ್ ಪೂಜಾರಿ ಕಣದಲ್ಲಿ ಇದ್ದಾರೆ.

More from the blog

ಪ್ರಕೃತಿಯಲ್ಲಿ ಒಂದಿಲ್ಲೊಂದು ವಿಸ್ಮಯ : ಈ ರೀತಿಯ ಕಿತ್ತಾಳೆ ಹಣ್ಣು ನೋಡಿದ್ದೀರಾ…

ಬಂಟ್ವಾಳ: ಪಕೃತಿಯಲ್ಲಿ ಆಗೊಮ್ಮೆ ಈಗೊಮ್ಮೆ ವಿಚಿತ್ರ ಸಂಗತಿಗಳು ಕಾಣಸಿಗುತ್ತವೆ. ಹಾಗೇಯೆ ಇಲ್ಲೊಂದು ಕಿತ್ತಾಳೆ ಹಣ್ಣು ತನ್ನ ರೂಪದಲ್ಲಿ ಸ್ವಲ್ಪ ಮಟ್ಟಿಗೆ ವಿಚಿತ್ರ ಕಂಡಿದೆ. ಮಾಮೂಲಿಯಾಗಿ ಕಿತ್ತಾಳೆ ಬಣ್ಣ ಮತ್ತು ಆಕಾರದಲ್ಲಿ ಒಂದೇ ಆಗಿರುತ್ತದೆ. ಆದರೆ...

ಭಕ್ತರೇ ಗಮನಿಸಿ…. ಈ ದಿನ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಆಗೇಲು ಸೇವೆ ಇರುವುದಿಲ್ಲ

ಬಂಟ್ವಾಳ ತಾಲೂಕು ಸಜೀಪಮೂಡ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಏ.12, 14, 16 ರಂದು ಆಗೇಲು ಸೇವೆ ಇರುವುದಿಲ್ಲ. ಏ. 19ರಿಂದ ಆಗೇಲು ಸೇವೆ ನಡೆಯುತ್ತದೆ ಹಾಗೂ ಏ.21 ರಂದು ಆಗೇಲು ಸೇವೆ...

ಲೋಕಸಭಾ ಚುನಾವಣೆ : ಅಕ್ರಮ ವ್ಯವಹಾರಿಗಳಿಗೆ ರಹದಾರಿಯಾದ ಸಾಲೆತ್ತೂರು ಬಳಿಯ ಕೂಡುರಸ್ತೆ ಚೆಕ್ ಪೋಸ್ಟ್

ವಿಟ್ಲ: ಲೋಕಸಭಾ ಚುನಾವಣೆಗೆ ಈಗಾಗಲೇ ದಿನ ನಿಗದಿಯಾಗಿದ್ದು, ಜಿಲ್ಲಾಡಳಿತ ಸರ್ವ ಸನ್ನದ್ದವಾಗಿದೆ. ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತವು ಗಡಿಪ್ರದೇಶ ಸೇರಿದಂತೆ ಜಿಲ್ಲೆಯಲ್ಲಿ 23 ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದೆ. ಆದರೆ...

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...