Tuesday, April 16, 2024

ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ

ಕನ್ನಡದ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರು ನಿಧನರಾಗಿದ್ದಾರೆ.

81 ವರ್ಷದ ದ್ವಾರಕೀಶ್ ಅವರು, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ದ್ವಾರಕೀಶ್ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ.

ಇವರು1942 ಆಗಸ್ಟ್ 19ರಂದು ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಜನಿಸಿದರು. ಇವರ ತಂದೆ ಶಾಮರಾವ್ ಮತ್ತು ತಾಯಿ ಜಯಮ್ಮ. ಶಾರದ ವಿಲಾಸ್ ಮತ್ತು ಬನುಮ್ಯ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿದ್ದ ಇವರು, ಫ್ರೌಡಶಿಕ್ಷಣದ ನಂತರ ಸಿಪಿಸಿ ಪಾಕಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಮುಗಿಸಿದರು. ನಂತರ ತಮ್ಮ ಸಹೋದರನ ಜೊತೆ ಸೇರಿ ಭಾರತ್ ಆಟೋ ಸ್ಪೇರ್ ಸ್ಟೋರ್ ಆರಂಭಿಸಿದ್ದರು. 1963ರಲ್ಲಿ ವ್ಯಾಪಾರ ಬಿಟ್ಟು ನಟನೆಯತ್ತ ಮುಖ ಮಾಡಿದ್ದರು.

1964ರಲ್ಲಿ ವೀರ ಸಂಕಲ್ಪ ಎಂಬ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ದ್ವಾರಕೀಶ್, ನಟರಾಗಿ, ಹಾಸ್ಯ ಕಲಾವಿದರಾಗಿ, ಪೋಷಕ ನಟನಾಗಿ ಈವರೆಗೂ ನೂರಾರು ಸಿನಿಮಾಗಳಲ್ಲಿ ನಟಿಸಿದ್ದರು. ಒಂದು ಕಾಲದಲ್ಲಿ ವಿಷ್ಣುವರ್ಧನ್ ಹಾಗೂ ದ್ವಾರಕೀಶ್ ಜೋಡಿ ಕಳ್ಳ-ಕುಳ್ಳ ಎಂದೇ ಪ್ರಸಿದ್ಧವಾಗಿತ್ತು.

More from the blog

ಹಿಂದೂ‌ ಸಂಘಟನೆಯ ಕಾರ್ಯಕರ್ತನಿಗೆ ಚೂರಿ ಇರಿತ

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತ ಚೂರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹಿಂದೂಯುವಸೇನೆಯ ಮುಖಂಡನಾಗಿದ್ದು, ಉದ್ಯಮಿಯಾಗಿರುವ...

ಬಾಲಿವುಡ್ ನಟ ಸಲ್ಮಾನ್​ ಖಾನ್ ಮನೆ ಮುಂದೆ ಗುಂಡಿನ ದಾಳಿ

ಮುಂಬೈ: ಬಾಲಿವುಡ್ ಆ್ಯಕ್ಟರ್​ ಸಲ್ಮಾನ್ ಖಾನ್ ಅವರ ನಿವಾಸದ ಮೇಲೆ ಇಂದು ಬೆಳಗಿನ ಜಾವ 5 ಗಂಟೆಗೆ ದುಷ್ಕರ್ಮಿಗಳು ಬೈಕ್​ನಲ್ಲಿ ಬಂದು 5 ಸುತ್ತು ಫೈರಿಂಗ್ ಮಾಡಿ ಎಸ್ಕೇಪ್ ಆಗಿದ್ದಾರೆ. ಮುಂಬೈನ ಬಾಂದ್ರಾ ಪ್ರದೇಶದಲ್ಲಿರುವ...

ಆಟವಾಡುತ್ತಾ ಜಮೀನಿನಲ್ಲಿದ್ದ ಬೋರ್‌ವೆಲ್​ಗೆ ಬಿದ್ದ 6 ವರ್ಷದ ಬಾಲಕ

ಆರು ವರ್ಷದ ಬಾಲಕನೋರ್ವ ತೆರೆದ ಬೋರ್​ವೆಲ್ ಒಳಕ್ಕೆ ಬಿದ್ದ ಘಟನೆ ಮಧ್ಯಪ್ರದೇಶದ ರೇವಾದಲ್ಲಿ ಬೆಳಕಿಗೆ ಬಂದಿದೆ. ಬೋರ್​ವೆಲ್​ಗೆ ಬಿದ್ದ ಬಾಲಕನನ್ನು ರೇವಾ ಜಿಲ್ಲೆಯ ಜಾನೆ ಪೊಲೀಸ್ ಠಾಣೆ ವ್ಯಾಪ್ತಿಯ ಮಾಣಿಕಾ ಗ್ರಾಮದ ಮಯಾಂಕ್ ಎಂದು...

ಇಂದಿನಿಂದ ಅಂಚೆ ಮತದಾನ ಪ್ರಾರಂಭ

ಇಂದಿನಿಂದ 85 ವರ್ಷ ಮೇಲ್ಪಟ್ಟ ಹಾಗೂ ವಿಶೇಷ ಚೇತನರಿಂದ ಅಂಚೆ ಮತದಾನ ನಡೆಯಲಿದೆ. ಏಪ್ರಿಲ್ 18ರವರೆಗೆ ಮನೆಯಿಂದಲೇ ಗೌಪ್ಯ ಮತದಾನಕ್ಕೆ ಅವಕಾಶ ಮಾಡಲಾಗಿದೆ. ಇಂದಿನಿಂದ ಏಪ್ರಿಲ್ 18ರವರೆಗೆ ಮನೆಯಿಂದಲೇ ಗೌಪ್ಯ ಮತದಾನಕ್ಕೆ ಅವಕಾಶವಿದೆ. ಬೆಂಗಳೂರು...