Friday, April 19, 2024

ಏ.21ರಂದು ನಮ್ಮ ನಡೆ ಮತಗಟ್ಟೆಯ ಕಡೆ ಅಭಿಯಾನ

ಮತದಾರರನ್ನು ಮತಗಟ್ಟೆಗೆ ಸೆಳೆಯುವ ಸಲುವಾಗಿ ಚುನಾವಣಾ ಆಯೋಗ ಸ್ವೀಪ್ ಕಾರ್ಯಕ್ರಮದ ಮೂಲಕ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಅದರಂತೆ ಎ.21ರಂದು ಎಲ್ಲಾ ಬೂತ್ ಮತಗಟ್ಟೆಗಳಲ್ಲಿ ನಮ್ಮ ನಡೆ ಮತಗಟ್ಟೆಯ ಕಡೆ ಅಭಿಯಾನ ಹಮ್ಮಿಕೊಂಡಿದ್ದು, ಬಂಟ್ವಾಳ ತಾಲೂಕು (೨೦೫) ವ್ಯಾಪ್ತಿಯ ೨೪೯ ಮತಗಟ್ಟೆಗಳಲ್ಲಿ ಬೆಳಗ್ಗೆ ೮ ಗಂಟೆಗೆ ಏಕಕಾಲಕ್ಕೆ ಅಭಿಯಾನ ನಡೆಯಲಿದೆ. ಇದರ ಅಂಗವಾಗಿ ಧ್ವಜಾರೋಹಣ, ಮತಗಟ್ಟೆ ಸುತ್ತಮುತ್ತ ಸ್ವಚ್ಛತೆ, ಪ್ರತಿಜ್ಞಾ ವಿಧಿ ಬೋಧನೆ ನಡೆಯಲಿದೆ.

ಬಂಟ್ವಾಳ ಪುರಸಭೆ ವ್ಯಾಪ್ತಿಯ ಪಾಣೆಮಂಗಳೂರು ಮತಗಟ್ಟೆ 152ರಲ್ಲಿ “ನಮ್ಮ ನಡೆ ಮತಗಟ್ಟೆಯ ಕಡೆ ಅಭಿಯಾನ” ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದ್ದು, ಜಾಥಾ, ಧ್ವಜಾರೋಹಣ, ಮತಗಟ್ಟೆ ಸುತ್ತಮುತ್ತ ಸ್ವಚ್ಛತೆ, ಪ್ರತಿಜ್ಞಾ ವಿಧಿ ಬೋಧನೆ ಮತ್ತು ಬೀದಿನಾಟಕ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಹಾಯಕ ಚುನಾವಣಾಧಿಕಾರಿ ಉದಯ್ ಶೆಟ್ಟಿ, ಬಂಟ್ವಾಳ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಸ್ವೀಪ್ ನೋಡಲ್ ಅಧಿಕಾರಿ ರಾಹುಲ್ ಕಾಂಬಳೆ, ತಹಶೀಲ್ದಾರ್ ಅರ್ಚನಾ ಭಟ್ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ. ಗ್ರಾಮ ಪಂಚಾಯತ್ ಮಟ್ಟದಲ್ಲಿ ಸ್ಥಳೀಯ ಬಿಎಲ್‌ಒ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿಗಳು, ಸಾರ್ವಜನಿಕರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಸದಸ್ಯರು ಇತರರು ಭಾಗವಹಿಸುವರು.

More from the blog

ನೇತ್ರಾವತಿ ನದಿ ತೀರದ ಕೃಷಿಕರ ಪಂಪ್ ಸೆಟ್ ಗಳ ವಿದ್ಯುತ್ ಸ್ಥಗಿತ : ರೈತರಿಂದ ಪ್ರತಿಭಟನೆ

ಬಂಟ್ವಾಳ: ದ.ಕ.ಜಿಲ್ಲಾಡಳಿತವೂ ಮಂಗಳೂರು ನಗರಕ್ಕೆ ಕುಡಿಯುವ ನೀರು ಕೊರತೆಯಾಗುತ್ತಿದೆ ಎಂದು ನೇತ್ರಾವತಿ ನದಿ ಪಾತ್ರದ ಕೃಷಿ ಪಂಪ್ ಸೆಟ್ ಗಳ ವಿದ್ಯುತ್ ಕಡಿತ ಮಾಡಿರುವ ವಿರುದ್ಧ ರೈತರು ಬಂಟ್ವಾಳ ತಾಲೂಕು ಆಡಳಿತ ಸೌಧದ...

ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ : ಮಹಿಳೆ ಗಂಭೀರ

ಬೆಳ್ತಂಗಡಿ: ತನ್ನ ಮನೆಯ ಸಾಕು ನಾಯಿ ಜತೆ ಮನೆ ಮಾಲಕಿ ಮುದ್ದಾಡುವಾಗ ಏಕಾಏಕಿ ದಾಳಿ ಮಾಡಿ ತಲೆ ಭಾಗವನ್ನು ಸೀಳಿ ಹಾಕಿ ಕೈಗೆ ಗಂಭೀರ ಗಾಯ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಮುಂಡಾಜೆ...

ಬಿಸಿರೋಡಿನ ವಾಣಿಜ್ಯ ಕಟ್ಟಡದ ಜಗುಲಿಯಲ್ಲಿ ಚೆಲ್ಲಿರುವ ರಕ್ತ : ಹಲವು ಅನುಮಾನ

ಬಂಟ್ವಾಳ: ಬಿಸಿರೋಡಿನ ವಾಣಿಜ್ಯ ಮಳಿಗೆಯ ಮುಂಭಾಗವೊಂದರಲ್ಲಿ ರಕ್ತ ಚೆಲ್ಲಿರುವುದು ಕಂಡು ಬಂದಿದ್ದು, ಅಂಗಡಿ ಮಾಲಕರಲ್ಲಿ ಒಂದಷ್ಟು ಗೊಂದಲ ಉಂಟಾದ ಘಟನೆ ನಡೆದಿದೆ. ಎ.18 ರಂದು ಬೆಳಿಗ್ಗೆ ತಾ.ಪಂ. ನ ವಾಣಿಜ್ಯ ಕಟ್ಟಡವೊಂದರ ಜಗುಲಿಯಲ್ಲಿ ರಕ್ತ...

ಲೋಕಸಭಾ ಚುನಾವಣೆ : ಎ.20 ರಂದು‌ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಬೃಹತ್ ಚುನಾವಣಾ ಪ್ರಚಾರ

ಬಂಟ್ವಾಳ: ಲೋಕಸಭಾ ಚುನಾವಣೆಯ ಪ್ರಚಾರ ಬಿರುಸಿನಿಂದ ನಡೆಯುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಎ.20 ರಂದು‌ ಶನಿವಾರ ಮಧ್ಯಾಹ್ನ 2.30 ಕ್ಕೆ ಗಂಟೆಗೆ ಬಿಸಿರೋಡಿನ ಬ್ರಹ್ಮ ಶ್ರೀನಾರಾಯಣ ಗುರು ಮಂದಿರದಲ್ಲಿ ಬೃಹತ್ ಚುನಾವಣಾ...