Wednesday, April 10, 2024

ದ.ಕ. ಉಡುಪಿ ಜಿಲ್ಲೆಗೆ ಇಂದು ರಜೆ ಘೋಷಣೆ : ನಿಗದಿತ ವೇಳಾಪಟ್ಟಿಯಂತೆ ಪರೀಕ್ಷೆ

ಮಂಗಳೂರು: ಈದ್ ಉಲ್-ಫಿತರ್ ಪ್ರಯುಕ್ತ ಏಪ್ರಿಲ್ 10ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಾರ್ವಜನಿಕ ರಜೆ ಘೋಷಿಸಲಾಗಿದೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯಿಂದ ಅಧಿಕೃತ ಆದೇಶ ಹೊರಡಿಸಲಾಗಿದ್ದು, ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ವಿಜಯ್ ಕುಮಾರ್ ಎಚ್.ಬಿ ಅಧಿಕೃತ ಆದೇಶಕ್ಕೆ ಸಹಿ ಹಾಕಿದ್ದಾರೆ.

ರಜೆಯ ಹೊರತಾಗಿಯೂ ಶಾಲಾ-ಕಾಲೇಜುಗಳಿಗೆ ನಿಗದಿತ ವೇಳಾಪಟ್ಟಿಯಂತೆ ಪರೀಕ್ಷೆಗಳು ನಡೆಯಲಿವೆ. ಸರ್ಕಾರಿ ಕಚೇರಿಗಳನ್ನು ಮುಚ್ಚಲಾಗುವುದು. ಏಪ್ರಿಲ್ 11 ಅನ್ನು ನಿಯಮಿತ ಕೆಲಸದ ದಿನವೆಂದು ಪರಿಗಣಿಸಲಾಗುತ್ತದೆ.

More from the blog

300 ರೂ. ಗಡಿಯತ್ತ ಹಸಿ ಕೊಕ್ಕೊ… 900 ರೂ. ಗಡಿಯತ್ತ ಒಣ ಕೊಕ್ಕೊ

ಪುತ್ತೂರು: ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಹಸಿ ಕೊಕ್ಕೊ, ಒಣ ಕೊಕ್ಕೊ ಧಾರಣೆ ಮತ್ತಷ್ಟು ಜಿಗಿದಿದ್ದು, ಹೊರ ಮಾರುಕಟ್ಟೆಯಲ್ಲಿಯೂ ಅತ್ಯಧಿಕ ದರ ದಾಖಲಾಗಿದೆ. ಒಣ ಕೊಕ್ಕೊ 900 ರೂ. ಗಡಿಯತ್ತ, ಹಸಿ ಕೊಕ್ಕೊ 300 ರೂ....

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...

ಏಪ್ರಿಲ್ 14ರಂದು ಮಂಗಳೂರಿಗೆ ಪ್ರಧಾನಿ ಮೋದಿ

ಬೆಂಗಳೂರು: ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರ ಸಮಾವೇಶ ಚಿಕ್ಕಬಳ್ಳಾಪುರದಿಂದ ಮಂಗಳೂರಿಗೆ ಸ್ಥಳಾಂತರಗೊಂಡಿದ್ದು, ಅದರಂತೆ, ಏಪ್ರಿಲ್ 14 ರಂದು ದ.ಕ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಮಾವೇಶ ನಡೆಯಲಿದೆ.. ಏಪ್ರಿಲ್ 14ಕ್ಕೆ ಬೆಂಗಳೂರಿಗೆ ಆಗಮಿಸಲಿರುವ...

ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ : ಕಡಬ, ಅಜೆಕಾರಿನಲ್ಲಿ ದಾಖಲೆಯ ಉಷ್ಣಾಂಶ

ಮಂಗಳೂರು: ಮುಂದಿನ ಎರಡು ದಿನಗಳ ಕಾಲ ಬಿಸಿಲಿನ ಶಾಕ ಮತ್ತಷ್ಟು ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಕರಾವಳಿ ಭಾಗದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಎ. 4ರಿಂದ 5ರ...