Thursday, April 11, 2024

ಲೋಕಸಭಾ ಚುನಾವಣೆಯ ಹಿನ್ನೆಲೆ : ಚಾರ್ಮಾಡಿಯ ಮೂವರು ಗಡಿಪಾರು

ಬೆಳ್ತಂಗಡಿ: ಚುನಾವಣ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಹಾಗೂ ಕೋಮು ಗಲಭೆಗಳಲ್ಲಿ ಭಾಗವಹಿಸುವ ಸಾಧ್ಯತೆ ಇರುವ ಕಾರಣ ಮೂವರು ರೌಡಿಶೀಟರ್‌ಗಳನ್ನು ಧರ್ಮಸ್ಥಳ ಪೊಲೀಸರು ಗಡಿಪಾರು ಮಾಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ನಿವಾಸಿಗಳಾದ ಮಹಮ್ಮದ್‌ ಮಹರೂಫ್‌, ಮಹಮ್ಮದ್‌ ಶಬೀಬ್‌, ಮೊಹಮ್ಮದ್‌ ಮುಬಶೀರ್‌ ನನ್ನು ದ.ಕ. ಜಿಲ್ಲೆಯಿಂದ ಬೆಂಗಳೂರಿನ ಬೆಳಂದೂರು ಪೊಲೀಸ್‌ ಠಾಣಾ ವ್ಯಾಪ್ತಿಗೆ ಚುನಾವಣೆ ಮುಗಿಯುವವರೆಗೆ ಗಡಿಪಾರು ಮಾಡಲಾಗಿದೆ.

2023ರ ಜೂನ್‌ 17ರಂದು ಚಾರ್ಮಾಡಿ ಚೆಕ್‌ಪೋಸ್ಟ್‌ ಬಳಿ ಕೆಎಸ್ಸಾರ್ಟಿಸಿ ಬಸ್‌ ಅಡ್ಡಗಟ್ಟಿ ನಿಲ್ಲಿಸಿ ಚಾಲಕ ಮತ್ತು ನಿರ್ವಾಹಕ ಜತೆ ಜಗಳ ಮಾಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣದಲ್ಲಿ ಭಾಗಿಯಾಗಿದ್ದರು. ಈ ವಿಚಾರದಲ್ಲಿ ಗಡೀಪಾರು ನಿರ್ಧಾರ ಕೈಗೊಳ್ಳಲಾಗಿದೆ.

More from the blog

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...