Saturday, April 6, 2024

ರಾಜ್ಯದಲ್ಲಿ 60 ಮಂದಿಯ ನಾಮಪತ್ರ ತಿರಸ್ಕೃತ

ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಲ್ಲಿ 358 ಅಭ್ಯರ್ಥಿಗಳು 492 ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ 13 ಕ್ಷೇತ್ರದಲ್ಲಿ ಪರಿಶೀಲನೆ ಕಾರ್ಯ ಮುಗಿದಿದೆ. 276 ನಾಮಪತ್ರಗಳು ಕ್ರಮಬದ್ಧವಾಗಿದ್ದು, 60 ನಾಮಪತ್ರಗಳು ತಿರಸ್ಕೃತಗೊಂಡಿವೆ.

ಬೆಂಗಳೂರು ದಕ್ಷಿಣ ಕ್ಷೇತ್ರದ ನಾಮಪತ್ರಗಳ ಪರಿಶೀಲನೆ ಕಾರ್ಯ ತಡರಾತ್ರಿಯವರೆಗೆ ನಡೆದಿರುವ ಹಿನ್ನೆಲೆಯಲ್ಲಿ ಆ ಒಂದು ಕ್ಷೇತ್ರದ ಅಂತಿಮ ಉಮೇದುವಾರಿಕೆಯ ಸಂಖ್ಯೆ ತಿಳಿಯಬೇಕಿದೆ. ಇನ್ನುಳಿದಂತೆ ಎಲ್ಲಾ ಕ್ಷೇತ್ರಗಳ ಪರಿಶೀಲನೆ ಕಾರ್ಯ ನಡೆದಿದೆ. ಏ.8ರಂದು ನಾಮಪತ್ರ ವಾಪಸ್‌ ಪಡೆಯಲು ಕಡೆಯ ದಿನವಾಗಿದೆ. ತದನಂತರ ಚುನಾವಣಾ ಅಖಾಡದಲ್ಲಿ ಎಷ್ಟು ಅಭ್ಯರ್ಥಿಗಳಿದ್ದಾರೆ ಎಂಬುದು ಸ್ಪಷ್ಟವಾಗಲಿದೆ.ಬೆಂಗಳೂರು ಉತ್ತರ ಕ್ಷೇತ್ರದಲ್ಲಿ 34 ಅಭ್ಯರ್ಥಿಗಳು 49 ನಾಮಪತ್ರಗಳನ್ನು ಸಲ್ಲಿಕೆ ಮಾಡಿದ್ದಾರೆ. ಇವರ ನಾಮಪತ್ರಗಳ ಪರಿಶೀಲನೆ ಕಾರ್ಯವು ತಡರಾತ್ರಿಯವರೆಗೆ ನಡೆದಿದೆ. ಈ ಹಿನ್ನೆಲೆಯಲ್ಲಿ ಆ ಕ್ಷೇತ್ರದ ಮಾಹಿತಿಯು ತಡವಾಗಿ ಲಭ್ಯವಾಗಬೇಕಿದೆ.

358 ಅಭ್ಯರ್ಥಿಗಳು 492 ನಾಮಪತ್ರಗಳು ಸಲ್ಲಿಕೆ ಮಾಡಿದ್ದಾರೆ. ಇದರಲ್ಲಿ 384 ನಾಮಪತ್ರಗಳು ಸ್ವೀಕೃತಗೊಂಡಿದ್ದು, 60 ನಾಮಪತ್ರಗಳು ತಿರಸ್ಕೃತಗೊಂಡಿದೆ. 276 ನಾಮಪತ್ರ ಕ್ರಮಬದ್ಧವಾಗಿವೆ ಎಂದು ಮುಖ್ಯಚುನಾವಣಾಧಿಕಾರಿ ಕಚೇರಿ ತಿಳಿಸಿದೆ.

ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 13 ಅಭ್ಯರ್ಥಿಗಳು, 19 ಉಮೇದುವಾರಿಕೆ ಸಲ್ಲಿಕೆ ಮಾಡಿದ್ದಾರೆ. ಇದರಲ್ಲಿ 10 ನಾಮಪತ್ರಗಳು ಕ್ರಮಬದ್ಧವಾಗಿದೆ, 4 ತಿರಸ್ಕೃತಗೊಂಡಿವೆ. ದಕ್ಷಿಣ ಕನ್ನಡ ಕ್ಶೇತ್ರದಲ್ಲಿ 11 ಅಭ್ಯರ್ಥಿಗಳು 21 ನಾಮಪತ್ರ ಸಲ್ಲಿಸಿದ್ದು 10 ಕ್ರಮಬದ್ಧವಾಗಿದೆ.

More from the blog

ಜಿಲ್ಲಾ ಕಾಂಗ್ರೇಸ್ ಹಿಂದುಳಿದ ವರ್ಗದ ಉಪಾಧ್ಯಕ್ಷ ಪದ್ಮನಾಭ ಸೇವಂತ ಅವರದು, ಆತ್ಮಹತ್ಯೆಯಲ್ಲ, ವ್ಯವಸ್ಥಿತ ಕೊಲೆ ಶಂಕೆ: ಪ್ರಕಾಶ್ ಶೆಟ್ಟಿ ತನಿಖೆಗೆ ಒತ್ತಾಯ

ಬಂಟ್ವಾಳ: ದ.ಕ.ಜಿಲ್ಲಾ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಪದ್ಮನಾಭ‌ ಸೇವಂತ ಎಂಬವರ ಸಾವಿನ ಸುತ್ತ ಅನುಮಾನಗಳು ವ್ಯಕ್ಯವಾಗಿದ್ದು, ಮೇಲ್ನೋಟಕ್ಕೆ ಇದೊಂದು ಆತ್ಮಹತ್ಯೆ ಪ್ರಕರಣ ಎಂದು ಕಂಡು ಬಂದರೂ ಇದನ್ನು ವಿಮರ್ಶೆ ಮಾಡಿದರೆ ಇದೊಂದು ಕೊಲೆ...

ಕರ್ನಾಟಕದ 28 ಲೋಕಸಭಾ ಕ್ಷೇತ್ರದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳು ಯಾರು…?

ಕರ್ನಾಟಕದ 28 ಲೋಕಸಭಾ ಕ್ಷೇತ್ರಕ್ಕೂ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದ್ದು, ಚುನಾವಣಾ ರಣರಂಗ ರಂಗೇರಿದೆ. ಯಾವ್ಯಾವ ಲೋಕಸಭಾ ಕ್ಷೇತ್ರದಿಂದ ಅಂತಿಮವಾಗಿ ಕಣಕ್ಕಿಳಿದ ಅಭ್ಯರ್ಥಿಗಳು ಯಾರು ಅನ್ನೋ ಕಂಪ್ಲೀಟ್‌ ಮಾಹಿತಿ...

ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ವ್ಯಕ್ತಿ ಸಾವು ಸ್ಕೂಟರ್ ನಲ್ಲಿದ್ದ ಯುವತಿ ಗಂಭೀರ

ಬೆಳ್ತಂಗಡಿ : ದ್ವಿಚಕ್ರ ವಾಹನ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ ಘಟನೆ ಗುರುವಾರ ರಾತ್ರಿ ನಡೆದಿದೆ. ಬೆಳ್ತಂಗಡಿ ನಗರದ ಸಂತೆಕಟ್ಟೆ ಬಸ್ ನಿಲ್ದಾಣದ ಮುಂಭಾಗದಲ್ಲಿ...

ನಿಲ್ಲಿಸಿದ್ದ ಲಾರಿಗೆ ಕಾರು ಡಿಕ್ಕಿ: ಕಾರಿನಲ್ಲಿದ್ದವರು ಗಂಭೀರ

ವಿಟ್ಲ: ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರಿಯಲ್ಲಿ ಗುರುವಾರ ರಾತ್ರಿ ಮರ ಸಾಗಾಟ ಲಾರಿಗೆ ಕಾರು ಡಿಕ್ಕಿಯಾಗಿದೆ. ಕಾರು ಲಾರಿಯ ಹಿಂಭಾಗಕ್ಕೆ ಡಿಕ್ಕಿಯಾದ ರಬ್ಬಸಕ್ಕೆ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದವರು...