Saturday, April 13, 2024

ಇಂದಿನಿಂದ ಅಂಚೆ ಮತದಾನ ಪ್ರಾರಂಭ

ಇಂದಿನಿಂದ 85 ವರ್ಷ ಮೇಲ್ಪಟ್ಟ ಹಾಗೂ ವಿಶೇಷ ಚೇತನರಿಂದ ಅಂಚೆ ಮತದಾನ ನಡೆಯಲಿದೆ. ಏಪ್ರಿಲ್ 18ರವರೆಗೆ ಮನೆಯಿಂದಲೇ ಗೌಪ್ಯ ಮತದಾನಕ್ಕೆ ಅವಕಾಶ ಮಾಡಲಾಗಿದೆ.

ಇಂದಿನಿಂದ ಏಪ್ರಿಲ್ 18ರವರೆಗೆ ಮನೆಯಿಂದಲೇ ಗೌಪ್ಯ ಮತದಾನಕ್ಕೆ ಅವಕಾಶವಿದೆ. ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ ಕ್ಷೇತ್ರದ ಮತದಾರರಿಗೆ ಮನೆಯಿಂದಲೇ ಕುಳಿತು ಅಂಚೆ ಮತದಾನ ಮಾಡುವ ಸೌಲಭ್ಯ ನೀಡಲಾಗಿದ್ದು, ನಗರದ ಮೂರು ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 85 ವರ್ಷ ಮೇಲ್ಪಟ್ಟ 95,128 ಮಂದಿ ಇದ್ದಾರೆ. 22,222 ಮಂದಿ ವಿಶೇಷ ಚೇತನರನ್ನು ಪಟ್ಟಿ ಮಾಡಲಾಗಿದೆ. ಇವರಲ್ಲಿ 85 ವರ್ಷ ಮೇಲ್ಪಟ್ಟ 6206 ಮತದಾರರು ಹಾಗೂ 201 ವಿಶೇಷ ಚೇತನ ಮತದಾರರು ಅಂಚೆ ಮತದಾನ ಮಾಡಲು ನೋಂದಣಿ ಮಾಡಿಕೊಂಡಿದ್ದಾರೆ.

ಅಂಚೆ ಮತದಾನ ಪ್ರಕ್ರಿಯೆ ಹೇಗೆ ನಡೆಯುತ್ತದೆ?

ನೋಂದಣಿ ಮಾಡಿಕೊಂಡ ಮತದಾರರ ಮನೆಗೆ ಮತಗಟ್ಟೆ ಅಧಿಕಾರಿಗಳ ತಂಡ ಭೇಟಿ ನೀಡಲಿದೆ. ಮತದಾರರ ಮನೆಗೆ ಇಬ್ಬರು ಮತಗಟ್ಟೆ ಅಧಿಕಾರಿಗಳು, ಭದ್ರತಾ ಸಿಬ್ಬಂದಿ, ವೀಡಿಯೋಗ್ರಾಫರ್ ತಂಡ ಭೇಟಿ ನೀಡಲಿದ್ದು, ಜೊತೆಗೆ ಪೊಲೀಸ್ ಸಿಬ್ಬಂದಿ ಹಾಗೂ ಒಬ್ಬ ಅಬ್ಸರ್ವರ್ ಕಡ್ಡಾಯವಿದೆ. ತಂಡವು ಮನೆಗೆ ತೆರಳಿ ಮತದಾನ ಗುರುತಿನ ಚೀಟಿ ಪರಿಶೀಲನೆ ಮಾಡಲಿದ್ದು, ಗೌಪ್ಯ ಮತದಾನಕ್ಕಾಗಿ ಅಂಚೆ ಮತಪತ್ರದಲ್ಲಿ ಮತ ಚಲಾಯಿಸಲು ಅವಕಾಶ ನೀಡುತ್ತದೆ.

ಈ ಎಲ್ಲಾ ಪ್ರಕ್ರಿಯೆ ವೀಡಿಯೋಗ್ರಫಿ ಮೂಲಕ ಕಡ್ಡಾಯ ಸೆರೆ ಹಿಡಿಯಲಾಗುತ್ತದೆ. ಪ್ರತಿ ಮತದಾರರ ಮನೆಗೆ ಎರಡು ಬಾರಿ ಟೀಮ್‌ ಭೇಟಿ ನೀಡಲಿದ್ದು, ಎರಡು ಬಾರಿಯೂ ಮತದಾನ ಪ್ರಕ್ರಿಯೆ ನಡೆಯದೇ ಇದ್ದರೆ ಮತ್ತೆ ಮತದಾನ ನಡೆಸಲು ಅವಕಾಶವಿರುವುದಿಲ್ಲ.

ಮನೆಯಿಂದ ಮತದಾನಕ್ಕೆ 12ಡಿ ನಮೂನೆಯಲ್ಲಿ ನೋಂದಣಿ ಮಾಡಿಸಿಕೊಂಡಿರುವವರಿಗೆ ಮತಗಟ್ಟೆಗೆ ಬಂದು ವಿದ್ಯುನ್ಮಾನ ಮತಯಂತ್ರದಲ್ಲಿ ಮತ ಚಲಾಯಿಸುವ ಅವಕಾಶವಿರುವುದಿಲ್ಲ ಎಂದು ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

More from the blog

ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣ : ನಿದ್ದೆಯಲ್ಲಿದ್ದ ಉಗ್ರರನ್ನು ಬಡಿದೆಬ್ಬಿಸಿದ ಎನ್ಐಎ

ಬೆಂಗಳೂರು: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಭರ್ಜರಿ ಕಾರ್ಯಾಚರಣೆ ನಡೆಸಿ, ಉಗ್ರರ ಗ್ಯಾಂಗ್ ಅನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ರಾಮೇಶ್ವರಂ ಕೆಫೆ ಬಾಂಬರ್‌ ಗ್ಯಾಂಗ್ ಬಂಧಿಸಲು NIA ಭರ್ಜರಿ ಬಲೆ...

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ಏ.10ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ…. ರಿಸಲ್ಟ್​ ಚೆಕ್ ಮಾಡೋದು ಹೇಗೆ?

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತಿದೆ. ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾದ ಹಿನ್ನಲೆ ನಾಳೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಾಗಿದೆ. ನಾಳೆ...