Saturday, April 13, 2024

ವಿದ್ಯಾರ್ಥಿಗಳಿಗೆ ಜೀವನ ಕೌಶಲ್ಯ ಮತ್ತು ಯುವ ಸ್ಪಂದನ ಸಮಾಲೋಚನೆ ಸೇವೆಗಳ ಕುರಿತು ಕಾರ್ಯಕ್ರಮ

ಸರಕಾರಿ ಪ್ರಥಮ ದರ್ಜೆ ಕಾಲೇಜು ಬಂಟ್ವಾಳ ಕಾಮಾಜೆ ಇಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನ ಆರೋಗ್ಯ ಕೇಂದ್ರ ಎಪಿಡಿಮಿಯೋಲಜಿ ವಿಭಾಗ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಬೆಂಗಳೂರು, ಸಂಯುಕ್ತಾಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಜೀವನ ಕೌಶಲ್ಯ ಮತ್ತು ಯುವ ಸ್ಪಂದನ ಸಮಾಲೋಚನೆ ಸೇವೆಗಳ ಕುರಿತು ಒಂದು ದಿನದ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಕಾರ್ಯಕ್ರಮ ಪ್ರಾಸ್ತಾವಿಕ ನುಡಿಗಳಲ್ಲಿ ಕಾಲೇಜು ಪ್ರಾಂಶುಪಾಲರಾದ ಡಾಕ್ಟರ್ ಪ್ರಕಾಶ್ ಚಂದ್ರ ಸುಶೀಲ ಇವರು ಈಗಿನ ದಿಕ್ಕು ತಪ್ಪುತ್ತಿರುವ ಯುವಕ ಯುವತಿಯರಿಗೆ ಜೀವನ ಕೌಶಲ್ಯ ಅಗತ್ಯವೆಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಯುವ ಜನತೆಗೆ ಎದುರಾಗುವ ಸಮಸ್ಯೆಗಳಿಗೆ ಹೇಗೆ ಎದುರಿಸಿ ಪರಿಹರಿಸಿಕೊಳ್ಳಬೇಕೆಂಬುದರ ಕುರಿತು ಮತ್ತು ಸಹಪಾಠಿಗಳ ಭಾವನೆಗಳಿಗೆ ಹೇಗೆ ಗೌರವಿಸುವುದು, ದಿನನಿತ್ಯ ಜೀವನದಲಾಗುವ ಒತ್ತಡಗಳ ನಿಭಾಯಿಸುವುದರ ಕುರಿತು ಮತ್ತು ವಿಮರ್ಶಾತ್ಮಕ/ ಸೃಜನಾತ್ಮಕ ಚಿಂತನೆಗಳನ್ನು 10 ಕೌಶಲ್ಯ ಗಳ ಕುರಿತು ತರಬೇತಿಯಲ್ಲಿ ಚಟುವಟಿಕೆ ಮೂಲಕ ವಿದ್ಯಾರ್ಥಿಗಳಿಗೆ ತಿಳಿಸಲಾಯಿತು.

ಕಾರ್ಯಕ್ರಮದಲ್ಲಿ ಕಾಲೇಜು ಪ್ರಾಂಶುಪಾಲರಾದ ಡಾಕ್ಟರ್ ಪ್ರಕಾಶ್ ಚಂದ್ರಶೀಲ, ಡಾ ಶ್ರೀಜಾ ಜೆ ಆಂಗ್ಲ ಮಾಧ್ಯಮ ಉಪನ್ಯಾಸಕಿ, ಡಾಕ್ಟರ್ ಅಚ್ಚುತ ಪೂಜಾರಿ ಕಾಮರ್ಸ್ ವಿಭಾಗ, ವೇದಶ್ರೀ ನಿದ್ಯಾ, ಅರ್ಥಶಾಸ್ತ್ರ ವಿಭಾಗ, ಶಶಿಕಲಾ ಕೆ ಸಮಾಜಕಾರ್ಯ ವಿಭಾಗ, ಬಾಲಸುಬ್ರಹ್ಮಣ್ಯ ಪಿಎಸ್ ರಾಜಶಾಸ್ತ್ರ ವಿಭಾಗ, ಓಂ ಪ್ರಕಾಶ್ ಇತಿಹಾಸ ವಿಭಾಗ ಮತ್ತು ಅಲ್ಲಾ ಭಕ್ಷ ಯುವ ಪರಿವರ್ತಕರು/ ಜೀವನ ಕೌಶಲ್ಯ ತರಬೇತಿದಾರರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಯುವ ಸ್ಪಂದನ ಕಾರ್ಯಕ್ರಮ ಇತರರು ಉಪಸಿತರಿದ್ದರು

More from the blog

ಯುವಮೋರ್ಚಾ ಬಂಟ್ವಾಳ ವತಿಯಿಂದ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೆಂದು ಬಿ. ಸಿ ರೋಡಿನ ರಕ್ತೇಶ್ವರಿ ದೇವಸ್ಥಾನದಲ್ಲಿ ಪ್ರಾರ್ಥನೆ

ಯುವಮೋರ್ಚಾ ಬಂಟ್ವಾಳ ವತಿಯಿಂದ ನರೇಂದ್ರ ಮೋದಿ ಮತೊಮ್ಮೆ ಪ್ರಧಾನಿಯಾಗಲೆಂದು ರಕ್ತೇಶ್ವರಿ ದೇವಸ್ಥಾನ ಬಿ. ಸಿ ರೋಡಿನಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.

ಸ್ವಿಮ್ಮಿಂಗ್​ ಪೂಲ್​ ನೀರಿಗೆ ಬಿದ್ದು 4ನೇ ತರಗತಿ ವಿದ್ಯಾರ್ಥಿ ಸಾವು

ಉಡುಪಿ‌: ಸ್ವಿಮ್ಮಿಂಗ್​ ಫೂಲ್​ನಲ್ಲಿ ಮುಳುಗಿ 4ನೇ ತರಗತಿಯ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕುಂದಾಪುರ ತಾಲೂಕಿನ ಹೆಂಗವಳ್ಳಿ ಸಮೀಪದ ಟಿನ್ ಟಾನ್ ಎನ್ವೆಂಚರ್ಸ್ ರೆಸಾರ್ಟ್​​ನಲ್ಲಿ ನಡೆದಿದೆ. ಉಡುಪಿ‌ಯ ಹೊಡೆ ಮೂಲದ ಮುಹಮ್ಮದ್ ಅರೀಝ್ ಮೃತ ವಿದ್ಯಾರ್ಥಿ. ದಾರುಸ್ಸಲಾಮ್...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ ವಾರ್ಷಿಕ ಜಾತ್ರೆ..ಮಹಾರಥೋತ್ಸವ ಕಣ್ಣುಂಬಿಕೊಂಡ ಸಾವಿರಾರು ಭಕ್ತರು

ಬಂಟ್ವಾಳ: ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆಯಲ್ಲಿ ಎ. ೧೧ರಂದು ಸಂಜೆ ರಥೋತ್ಸವ ನಡೆಯಿತು. ಜಾತ್ರೆಯಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು. ಮಹಾಪೂಜೆಯ ಬಳಿಕ ದೇವರು ರಥಾರೋಹಣಗೊಂಡು ಸಾಂಕೇತಿಕವಾಗಿ ರಥವನ್ನು ಎಳೆಯಲಾಯಿತು. ಮಧ್ಯಾಹ್ನ ರಥಕ್ಕೆ...

ಬಂಟ್ವಾಳದ ಬಡಗಕಜೆಕಾರು, ತೆಂಕಕಜೆಕಾರು ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ"ದ ಅಂಗವಾಗಿ ಬಂಟ್ವಾಳದ ಬಡಗಕಜೆಕಾರು, ತೆಂಕಕಜೆಕಾರು ಗ್ರಾಮದಲ್ಲಿ ಮತದಾರರ ಮನೆಗೆ...