Saturday, April 13, 2024

ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಖಂಡನೀಯ-ಜಗದೀಶ್ ಕೊಯಿಲ

ಬಂಟ್ವಾಳ: ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಮಾಡಿದ್ದು ಖಂಡನೀಯ ಎಂದು ಜಗದೀಶ್ ಕೊಯಿಲ ತಿಳಿಸಿದ್ದಾರೆ.

ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ರಾಷ್ಟ್ರೀಯ ವ್ಯಕ್ತಿಯ ಭಾವಚಿತ್ರದ ಜೊತೆ ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರವನ್ನು ಹಾಕಿಕೊಂಡು ರಾಜಕೀಯ ಪ್ರಚಾರದಲ್ಲಿ ತೊಡಗಿಸಿಕೊಂಡಿರುವುದನ್ನು ವಿರೋಧಿಸುತ್ತೇವೆ ಎಂದು ತಿಳಿಸಿದರು.

 

ಬಿಲ್ಲವ ಸಮಾಜಕ್ಕೆ ಅವಮಾನ, ನಾರಾಯಣ ಗುರುಗಳ ವಿಚಾರಗಳಿಗೆ ಅವಮಾನ ಮಾಡುವ ವ್ಯಕ್ತಿಗಳಿಗೆ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ನೆನಪಾಗಿದೆ ಎಂದು ವ್ಯಂಗವಾಡಿದರು.

 

ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಅವರ ಬಗ್ಗೆ ಮತದಾರರಿಗೆ ಒಲವು ಜಾಸ್ತಿಯಾಗಿದ್ದು,ಸಹಿಸಲಾರದ ಕೆಲವೊಂದು ವ್ಯಕ್ತಿಗಳು ಸೋಶಿಯಲ್ ಮೀಡಿಯಾದಲ್ಲಿ ಅವರ ಬಗ್ಗೆ ಇಲ್ಲಸಲ್ಲದ ಆರೋಪ ಮಾಡುತ್ತಿದೆ ಎಂದು ಆರೋಪ ಮಾಡಿದರು.

ಬ್ರಹ್ಮ ಶ್ರೀ ನಾರಾಯಣ ಗುರುಗಳ ಜಯಂತಿಯನ್ನು ರಾಜ್ಯವ್ಯಾಪಿಯಾಗಿ ಮಾಡಲು ಸಿದ್ದರಾಮಯ್ಯ ಸರಕಾರ ಅವಕಾಶ ಮಾಡಿದೆ.

 

ಇಷ್ಟು ವರ್ಷ ಬಿಲ್ಲವ ಸಮುದಾಯದವರಿಗೆ ಬಿಜೆಪಿಯವರು ಮೋಸ ಮಾಡಿದ್ದು ಸಾಕು, ಈಗಾಗಲೇ ಆಗಿರುವ ಅನ್ಯಾಯಗಳಿಗೆ ಈ ಬಾರಿ ಉತ್ತರ ನೀಡಲಿದ್ದಾರೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಜೀವ ಪೂಜಾರಿ ಹರೀಶ್ ಪೂಜಾರಿ ,ವಾಸುಪೂಜಾರಿ, ಪ್ರೇಮನಾಥ್ ಉಪಸ್ಥಿತರಿದ್ದರು.

More from the blog

ಮತದಾರರ ಜಾಗೃತಿ ಕಾರ್ಯಕ್ರಮ, ಕಾಲ್ನಡಿಗೆ ಜಾಥಾ ಹಾಗೂ ಬೀದಿನಾಟಕ

ತಾಲೂಕು ಪಂಚಾಯತ್‌ ಬಂಟ್ವಾಳ, ತಾಲೂಕು ಸ್ವೀಪ್‌ ಸಮಿತಿ, ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಬಂಟ್ವಾಳ ಪುರಸಭೆ, ರಾಷ್ಟ್ರೀಯ ಸೇವಾ ಯೋಜನೆ, ಮತದಾರರ ಸಾಕ್ಷರತಾ...

ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಬೈಕ್ : ಮೂವರಿಗೆ ಗಾಯ

ಬಂಟ್ವಾಳ: ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಬೈಕಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬರುತ್ತಿದ್ದ ಕೆ.ಎಸ್.ಆರ್.ಟಿ‌.ಸಿ.ಬಸ್ ಗೆ ಹೆಲ್ಮೆಟ್ ಧರಿಸಿದೆ...

ಮನೆ ಮನೆಗೆ ತೆರಳಿ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಪರ ಮತಯಾಚನೆ

ನಮ್ಮ ಬೂತ್ ನಮ್ಮ ಹೊಣೆ ಘೋಷನೇಯಂತೆ ಬೂತ್ ಸಂಖ್ಯೆ 126 ವಾರ್ಡ್ 12 ರ ಅಜ್ಜೀಬೆಟ್ಟು ನಲ್ಲಿ ಮನೆ ಮನೆಗೆ ತೆರಲಿ ಲೋಕ ಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿಯವರ ಪರವಾಗಿ ಮತ ಯಾಚನೆ...

ಜಮೀನಿನ ವಿಚಾರದಲ್ಲಿ ತಕರಾರು ನಡೆಸಿ ಹಲ್ಲೆ ಪ್ರಕರಣ : ಶಿಕ್ಷೆ ಪ್ರಕಟ

ಬಂಟ್ವಾಳ: ಜಮೀನಿನ ವಿಚಾರದಲ್ಲಿ ತಕರಾರು ಉಂಟಾಗಿ ಹಲ್ಲೆ ನಡೆಸಿದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಶಿಕ್ಷೆ ಪ್ರಕಟಗೊಳಿಸಿದ ಬಗ್ಗೆ ವರದಿಯಾಗಿದೆ. ದೇವಸ್ಯ ಪಡೂರು ಗ್ರಾಮ,ಕುಟ್ಟಿಕಳ ,ಅಲ್ಲಿಪಾದೆ ಎಂಬಲ್ಲಿ ನೀಲಯ್ಯ ಮೂಲ್ಯ ಹಾಗೂ ಶ್ರೀನಿವಾಸ್ ಪೂಜಾರಿ ರವರಿಗೆ...