Tuesday, April 16, 2024

ದ.ಕ ಜಿಲ್ಲೆಯ 42 ಮಂದಿ ಜೆಡಿಎಸ್ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿರುವುದನ್ನು ವಿರೋಧಿಸಿ ದ.ಕ ಜಿಲ್ಲೆಯ 42 ಮಂದಿ ಜೆಡಿಎಸ್ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಗೊಂಡರು

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಮತ್ತು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಅವರು ಪಕ್ಷದ ಬಾವುಟ ನೀಡಿ ಅವರನ್ನು ಸ್ವಾಗತಿಸಿದರು.

ಈ‌ ವೇಳೆ ಮಾತನಾಡಿದ ವಿನಯ ಕುಮಾರ್ ಸೊರಕೆ ಅವರು ಮಾತನಾಡಿ, ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಶ್ರಮಿಸುವಂತೆ ಕರೆ ನೀಡಿದರು. ಮುಂದಿನ‌ ದಿನಗಳಲ್ಲಿ ತಾಲೂಕು ಮಟ್ಟದಲ್ಲಿಯೂ ಪಕ್ಷ ಸೇರ್ಪಡೆ ನಡೆಯಲಿದೆ ಎಂದರು.

More from the blog

ಬಂಟ್ವಾಳದ ಹಿಂದೂ ಯುವ ಸೇನಾ ಮುಖಂಡನಿಗೆ ಚೂರಿ ಇರಿದ ದುಷ್ಕರ್ಮಿಯನ್ನು ಶೀಘ್ರ ಬಂದಿಸಿ, ಕಠಿನ ಶಿಕ್ಷೆ ವಿಧಿಸುವಂತೆ ಹಿಂದೂ ಯುವ ಸೇನೆ ಆಗ್ರಹ

ಬಂಟ್ವಾಳ: ಹಿಂದೂ ಯುವ ಸೇನೆ ಬಂಟ್ವಾಳ ತಾಲೂಕು ಘಟಕದ ಮಾಜಿ ಅಧ್ಯಕ್ಷ ಪುಷ್ಪರಾಜ್ ರವರು ದುಷ್ಕರ್ಮಿಯಿಂದ ಚೂರಿ ಇರಿತಕ್ಕೊಳಗಾಗಿರುವುದನ್ನು ಹಿಂದೂ ಯುವ ಸೇನೆ ಕೇಂದ್ರೀಯ ಮಂಡಳಿ, ಬಂಟ್ವಾಳ ತಾಲೂಕು ಘಟಕ ಖಂಡಿಸುತ್ತದೆ. ಅಮಾಯಕ ಪುಷ್ಪರಾಜ್...

ಪ್ರಧಾನಿ ಮೋದಿಯವರೇ.. ದಕ್ಷಿಣ ಕನ್ನಡಕ್ಕೆ ನೀವು ಕೊಟ್ಟದ್ದೆಷ್ಟು- ಸಿಎಂ ಪ್ರಶ್ನೆ

ಬೆಂಗಳೂರು: “ನನ್ನ ತೆರಿಗೆ ನನ್ನ ಹಕ್ಕು" ಅಭಿಯಾನದ ಮುಂದುವರಿದ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಚುನಾವಣ ರ್‍ಯಾಲಿ ನಡೆಸಿದ ದಕ್ಷಿಣ ಕನ್ನಡಕ್ಕೆ ತಮ್ಮ ಕೊಡುಗೆಯ ಲೆಕ್ಕ ಕೊಡುವಂತೆ ಕಾಂಗ್ರೆಸ್‌ ಕೇಳಿದೆ. ಪ್ರಧಾನಿ ನರೇಂದ್ರ ಮೋದಿ...

ಹಿಂದೂ‌ ಸಂಘಟನೆಯ ಕಾರ್ಯಕರ್ತನಿಗೆ ಚೂರಿ ಇರಿತ

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತ ಚೂರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹಿಂದೂಯುವಸೇನೆಯ ಮುಖಂಡನಾಗಿದ್ದು, ಉದ್ಯಮಿಯಾಗಿರುವ...

ಮಂಗಳೂರು: ರೋಡ್​ಶೋ ಮೂಲಕ ಪ್ರಧಾನಿ ಮೋದಿ ಚುನಾವಣಾ ಪ್ರಚಾರ

ಮಂಗಳೂರು: ರಾಜ್ಯದ ಲೋಕಸಭಾ ಚುನಾವಣೆ ಅಖಾಡಕ್ಕೆ ಇಳಿದಿರುವ ಪ್ರಧಾನಿ ನರೇಂದ್ರ ಮೋದಿ, ಮೈಸೂರಿನಿಂದ ತಮ್ಮ ಯಾತ್ರೆ ಆರಂಭಿಸಿದ್ದಾರೆ. ಇದೀಗ ಮಂಗಳೂರಿನಲ್ಲಿ ರೋಡ್​ಶೋ ಮೂಲಕ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಮೈಸೂರಿನಲ್ಲಿ ಅದ್ದೂರಿ...