Thursday, April 18, 2024

ಜೀಪ್ ಬೈಕ್ ಗೆ ಡಿಕ್ಕಿ… ಬೈಕ್ ಸವಾರ ಸಾವು : ಇಬ್ಬರು ಮಕ್ಕಳು ಗಂಭೀರ

ಪುತ್ತೂರು: ಜೀಪೊಂದು ಬೈಕ್ ಗೆ ಡಿಕ್ಕಿ ಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಣಿಯೂರು- ಮಂಜೇಶ್ವರ ಅಂತರಾಜ್ಯ ರಸ್ತೆಯ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ.

ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ ಪ್ರಸ್ತುತ ಮಂಗಳೂರಿನಲ್ಲಿ ಲಾರಿ ಚಾಲಕರಾಗಿರುವ ಲೋಕೇಶ್ ಮೃತಪಟ್ಟವರು. ಅವರ ಇಬ್ಬರು ಮಕ್ಕಳು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಲೋಕೇಶ್ ಅವರು ಮಕ್ಕಳೊಂದಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆಯುತ್ತಿರುವ ಜಾತ್ರೆಗೆ ಆಗಮಿಸಿ ಹಿಂದಿರುಗುತ್ತಿದ್ದಾಗ ವೇಳೆಯಲ್ಲಿ ಮುಂಭಾಗದಿಂದ ಆಗಮಿಸಿದ ಜೀಪು ಬೈಕ್ ಗೆ ಡಿಕ್ಕಿಯಾಗಿತ್ತು. ಡಿಕ್ಕಿಯ ರಭಸಕ್ಕೆ ಬೈಕ್ ಎರಡು ತುಂಡಾಗಿದೆ. ಸುಮಾರು ೫೦ ಮೀಟರ್ ದೂರದ ತನಕ ಬೈಕನ್ನು ಎಳೆದುಕೊಂಡು ಹೋಗಿದೆ.

ಈ ಸಂದರ್ಭ ರಸ್ತೆಗೆ ಎಸೆಯಲ್ಪಟ್ಟ ಲೊಕೇಶ್ ಅವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

More from the blog

ನರಿಕೊಂಬು: ನವಜೀವನ ವ್ಯಾಯಾಮ ಶಾಲೆ: ಏ.21ರಂದು ಹನುಮಾನ್ ಮಂದಿರ ಲೋಕಾರ್ಪಣೆ

ಬಂಟ್ವಾಳ: ಇಲ್ಲಿನ ನರಿಕೊಂಬು ಗ್ರಾಮದ ನವಜೀವನ ವ್ಯಾಯಾಮ ಶಾಲೆ ವತಿಯಿಂದ ರೂ 1 ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣಗೊಂಡ ಶ್ರೀ ಹನುಮಾನ್ ಮಂದಿರ ಲೋಕಾರ್ಪಣೆ ಮತ್ತು ಶ್ರೀ ಆಂಜನೇಯ ಬಿಂಬ ಪುನರ್ ಪ್ರತಿಷ್ಠೆ...

ಹಿಂದೂ ಸಂಘಟನೆ ಮುಖಂಡನಿಗೆ ಚೂರಿ ಇರಿದ ಪ್ರಕರಣ : ಆರೋಪಿ ಅರೆಸ್ಟ್

ಬಂಟ್ವಾಳ: ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಚೂರಿ ಇರಿದು ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣೆಯ ಪೋಲೀಸರು ಬಂಧಿಸಿದ ಘಟನೆ ಇಂದು ನಡೆದಿದೆ. ಬಂಟ್ವಾಳ ನಿವಾಸಿ ರವಿ ಯಾನೆ ರವೀಂದ್ರ ಬಂಧಿತ ಆರೋಪಿಯಾಗಿದ್ದಾನೆ. ಎ.14 ರಂದು ಆದಿತ್ಯವಾರ...

ಬಂಟ್ವಾಳ: ಕರ್ಪೆ ಗ್ರಾಮದ ಮನೆಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವಂತೆ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹಾಗೂ ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಕಾರ್ಯಕ್ರಮದ ಮೂಲಕ ಬಂಟ್ವಾಳದ...

ವೈದ್ಯರ ಎಡವಟ್ಟು : ಕುಡಿದ ಮತ್ತಿನಲ್ಲಿ ರೈಲ್ವೆ ಗೇಟ್ ಗೆ ಡಿಕ್ಕಿ

ಮಂಗಳೂರಿನ ಹೆಸರಾಂತ ಮನೋರೋಗ ತಜ್ಞರೊಬ್ಬರು ಕುಡಿದ ಮತ್ತಿನಲ್ಲಿ ರೈಲ್ವೆ ಗೇಟ್ ಗೆ ಡಿಕ್ಕಿ ಹೊಡೆದು ಆವಾಂತರ ಸೃಷ್ಟಿಸಿದ ಘಟನೆ ನಗರ ಹೊರ ವಲಯದ ಪರಂಗಿಪೇಟೆ ಬಳಿಯ ಅರ್ಕುಳ ಎಂಬಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಕುಡಿದ...